ಸೂಡಿ ಜೋಡು ಕಳಸ ದೇವಾಲಯದ ಸ್ತಬ್ಧಚಿತ್ರಕ್ಕೆ ಪ್ರಶಸ್ತಿ

KannadaprabhaNewsNetwork |  
Published : Oct 07, 2025, 01:03 AM IST

ಸಾರಾಂಶ

ಜೋಡು ಕಳಸದ ಸ್ತಬ್ಧಚಿತ್ರ ಜಿಲ್ಲೆಯ ಪುರಾತನ ಕಲೆ ಮತ್ತು ವಾಸ್ತುಶಿಲ್ಪದ ಶ್ರೀಮಂತಿಕೆಯನ್ನು ಅನಾವರಣಗೊಳಿಸಿ, ಜಿಲ್ಲೆಗೆ ಹೆಮ್ಮೆ ತಂದಿದೆ. ಜಿಲ್ಲೆಯ ಪ್ರಾಚೀನ ಪರಂಪರೆಯನ್ನು ಬಿಂಬಿಸಿದ ಈ ಸ್ತಬ್ಧಚಿತ್ರವು ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಿತ್ತು. ನಿರೀಕ್ಷೆಯಂತೆ ಈ ಬಾರಿ ಪ್ರಶಸ್ತಿ ಪಡೆಯುವಲ್ಲಿ ಯಶಸ್ವಿಯಾಗಿದೆ.

ಗದಗ: ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಜಿಲ್ಲೆಯ ಸೂಡಿ ಗ್ರಾಮದ ಐತಿಹಾಸಿಕ ಜೋಡು ಕಳಸ (ನಾಗೇಶ್ವರ) ದೇವಾಲಯದ ಸ್ತಬ್ಧಚಿತ್ರ, ಬೆಳಗಾವಿ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆದಿದೆ.

ಜೋಡು ಕಳಸದ ಸ್ತಬ್ಧಚಿತ್ರ ಜಿಲ್ಲೆಯ ಪುರಾತನ ಕಲೆ ಮತ್ತು ವಾಸ್ತುಶಿಲ್ಪದ ಶ್ರೀಮಂತಿಕೆಯನ್ನು ಅನಾವರಣಗೊಳಿಸಿ, ಜಿಲ್ಲೆಗೆ ಹೆಮ್ಮೆ ತಂದಿದೆ. ಜಿಲ್ಲೆಯ ಪ್ರಾಚೀನ ಪರಂಪರೆಯನ್ನು ಬಿಂಬಿಸಿದ ಈ ಸ್ತಬ್ಧಚಿತ್ರವು ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಿತ್ತು. ನಿರೀಕ್ಷೆಯಂತೆ ಈ ಬಾರಿ ಪ್ರಶಸ್ತಿ ಪಡೆಯುವಲ್ಲಿ ಯಶಸ್ವಿಯಾಗಿದೆ.

ಈ ಸ್ತಬ್ಧಚಿತ್ರವನ್ನು ಸ್ಥಳೀಯ ಕಲಾವಿದರಾದ ರವಿ ಶಿಶ್ವನಹಳ್ಳಿ, ಕಿರಣ ಓದುಗೌಡರ, ಷಹಜಾನ್ ಮುದಕವಿ, ಫಕ್ಕಿರೇಶ ಕುಳಗೇರಿ, ಜಿ.ಕೆ. ಬಡಿಗೇರ, ರವಿ ಬಾದಾಮಿ, ಅರುಣ, ಕೊಟ್ರೇಶ ಮೊದಲಾದವರ ಕೈಚಳಕದಲ್ಲಿ ಅತ್ಯಂತ ನೈಪುಣ್ಯತೆಯಿಂದ ನಿರ್ಮಿಸಲಾಗಿದೆ. ಕಲಾವಿದರ ತಂಡದ ಸೂಕ್ಷ್ಮ ಕೆತ್ತನೆಗಳು ಮತ್ತು ವಿವರಗಳು ದೇವಾಲಯದ ಮೂಲ ಸ್ವರೂಪಕ್ಕೆ ಜೀವ ತುಂಬುವಲ್ಲಿ ಯಶಸ್ವಿಯಾಗಿದೆ.

ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸ್ತಬ್ಧಚಿತ್ರವು ಜಿಲ್ಲೆಯ ಸಾಂಸ್ಕೃತಿಕ ಹಿರಿಮೆಯನ್ನು ಎತ್ತಿ ಹಿಡಿದಿದೆ. ಈ ಪ್ರದರ್ಶನವು ಗದಗ ಜಿಲ್ಲೆಯ ಪ್ರವಾಸೋದ್ಯಮ ಮತ್ತು ಕಲೆಯನ್ನು ಉತ್ತೇಜಿಸಲು ಸಹಕಾರಿಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಅಭಿಪ್ರಾಯಪಟ್ಟಿದ್ದಾರೆ.ಇಂದು ಮಹರ್ಷಿ ವಾಲ್ಮೀಕಿ ಜಯಂತಿ

ಗದಗ: ನಗರದ ದಿ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಅ. 7ರಂದು ಬೆಳಗ್ಗೆ 11ಕ್ಕೆ ಜರುಗಲಿದೆ.ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ, ರೋಣ ಶಾಸಕ ಜಿ.ಎಸ್. ಪಾಟೀಲ ಭಾಗವಹಿಸುವರು. ಮಾಜಿ ಶಾಸಕರಾದ ಡಿ.ಆರ್.ಪಾಟೀಲ, ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ, ಶಹರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್. ಪಾಟೀಲ ಪಾಲ್ಗೊಳ್ಳುವರು ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV

Recommended Stories

ಸಮೀಕ್ಷೆ ವೇಳೆ ಬೀದಿ ನಾಯಿ ದಾಳಿಯಿಂದ ಶಿಕ್ಷಕಿ ಗಂಭೀರ
ಸೆಂಟ್ ಸ್ಪ್ರೇ ಮಾಡಿ ಹಸುವಿನ ಬಾಲಕ್ಕೆ ಬೆಂಕಿ ಹಚ್ಚಿದ ಬಾಲಕ