ಕನ್ನಡಪ್ರಭ ವಾರ್ತೆ ಉಡುಪಿ
ಸಂವಿಧಾನ ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕರಿಗೂ ನೀಡಿದೆ. ಇದನ್ನು ಪ್ರತಿ ಒಬ್ಬರು ತಪ್ಪದೇ ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.ಅವರು ಭಾನುವಾರ ನಗರದ ವಳಕಾಡು ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ನಗರಸಭೆ ಉಡುಪಿ ವತಿಯಿಂದ ಆಯೋಜಿಸಿದ ‘ನಮ್ಮ ನಡೆ ಮತ ಕಟ್ಟೆ ಕಡೆ’ ಕಾರ್ಯಕ್ರಮದಲ್ಲಿ ಚುನಾವಣಾ ಬಾವುಟ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು.
ಪ್ರಜಾಸತತ್ಮಾಕ ಪ್ರಕ್ರಿಯಲ್ಲಿ ಸಂವಿಧಾನಕವಾಗಿ ನೀಡಿರುವ ಮತದಾನದ ಹಕ್ಕು ಅಮೂಲ್ಯವಾಗಿದ್ದು, ಏ.೨೬ ಹಾಗೂ ಮೇ ೭ರಂದು ನಡೆಯಲ್ಲಿರುವ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಚಲಾಯಿಸಬೇಕು ಎಂದರು.ಮತದಾನವು ಪ್ರತಿಯೊಬ್ಬ ನಾಗರಿಕರ ದ್ವನಿಯಾಗಿದ್ದು ಪ್ರಜಾಪ್ರಭುತ್ವದ ಗುಣಮಟ್ಟವನ್ನು ಸುಧಾರಿಸಲು ಸಹಕಾರಿಯಾಗುತ್ತದೆ. ಇಂತಹ ಜವಾಬ್ದಾರಿಯನ್ನು ನಾವು ಜಾಗರೂಕತೆಯಿಂದ ಯಾವುದೇ ಆಮಿಷಗಳಿಗೆ ಬಲಿಯಾಗದೇ ಚಲಾಯಿಸಬೇಕು ಎಂದರು.
ಮುಖ್ಯವಾಗಿ ಯುವಜನರು ಮತದಾನದ ದಿನದೊಂದು ಮತಗಟ್ಟೆಗೆ ತೆರಳಿ ತಮ್ಮ ಮತವನ್ನು ಚಲಾಯಿಸಬೇಕು ಹಾಗೂ ತಮ್ಮ ಕುಟುಂಬ, ನೆರೆಹೊರೆಯವರು ಹಾಗೂ ಗ್ರಾಮದ ಜನರಿಗೆ ಮತದಾನದ ಮಹತ್ವದ ಅರಿವನ್ನು ಮೂಡಿಸುವುದೊಂರೊಂದಿಗೆ ಮತದಾನ ಮಾಡುವಂತೆ ಉತ್ತೇಜಿಸಬೇಕು ಎಂದರು.ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ೧೮೪೨ ಮತಗಟ್ಟೆಗಳಲ್ಲಿ ಮತದಾರರಿಗೆ ಸಿಗುವ ಸೌಲಭ್ಯಗಳು ಹಾಗೂ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ನಮ್ಮ ನಡೆ ಮತಗಟ್ಟೆ ಕಡೆ ಎಂಬ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ಹೇಳಿದರು.
ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಪ್ರತೀಕ್ ಬಾಯಲ್ ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿ ನಮ್ಮ ದೇಶದಲ್ಲಿ ಎಲ್ಲರಿಗೂ ಮತದಾನ ಮಾಡುವ ಅವಕಾಶ ಇರಲಿಲ್ಲ. ಸ್ವಾತಂತ್ರ್ಯ ನಂತರ ಪ್ರತಿಯೊಬ್ಬರಿಗೂ ಮತ ಚಲಾಯಿಸುವ ಹಕ್ಕು ಸಿಕ್ಕಿದೆ. ಅದನ್ನು ನಮ್ಮ ಕರ್ತವ್ಯವೆಂದು ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ನಗರಸಭಾ ಆಯುಕ್ತ ರಾಯಪ್ಪ, ಶಾಲಾ ಶಿಕ್ಷಕರು ಹಾಗೂ ಮತಗಟ್ಟೆ ಮಟ್ಟದ ಅಧಿಕಾರಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.