ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಟಾವಿಗೆ ಬಂದಿದ್ದ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಬೆಂಕಿ ಬಿದ್ದಿದೆ. ಘಟನೆಯಲ್ಲಿ ಕಬ್ಬು ಸಂಪೂರ್ಣವಾಗಿ ಸುಟ್ಟು ಹೋಗಿದೆ.
ಕನ್ನಡಪ್ರಭ ವಾರ್ತೆ ಮಳವಳ್ಳಿ
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಬಿದ್ದು 2 ಎಕರೆ ಕಬ್ಬಿನ ಬೆಳೆ ನಾಶವಾಗಿರುವ ಘಟನೆ ತಾಲೂಕಿನ ಬುಗತಗಹಳ್ಳಿಯಲ್ಲಿ ಭಾನುವಾರ ನಡೆದಿದೆ. ಗ್ರಾಮದ ಶಾಂತಮ್ಮ ಅವರು ಪಟ್ಟಣದ ಹೊರವಲಯದ ದಂಡಿನ ಮಾರಮ್ಮನ ದೇವಸ್ಥಾನದ ಹಿಂಭಾಗದ ತಮ್ಮ ಎರಡು ಎಕರೆ ಜಮೀನಿನಲ್ಲಿ ಕಬ್ಬು ಬೆಳೆದಿದ್ದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಟಾವಿಗೆ ಬಂದಿದ್ದ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಬೆಂಕಿ ಬಿದ್ದಿದೆ. ಘಟನೆಯಲ್ಲಿ ಕಬ್ಬು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಮಾಹಿತಿ ತಿಳಿದ ಕೂಡಲೇ ಆಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೆಂಕಿ ನಂದಿಸಿದರು. ರೈತ ಮಹಿಳೆ ಶಾಂತಮ್ಮ ಮಾತನಾಡಿ, ನಾವು ಕಬ್ಬು ನಾಟಿ ಮಾಡಿ 13 ತಿಂಗಳು ಕಳೆದಿದೆ. ಕೆ.ಎಂ.ದೊಡ್ಡಿ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ಕಟಾವಿಗಾಗಿ ಕಳೆದ ಎರಡು ತಿಂಗಳಿಂದ ಪರದಾಟ ನಡೆಸುತ್ತಿದ್ದೆವು. ಇಂಥ ಬರಗಾಲದಲ್ಲೂ ಉತ್ತಮ ಬೆಳೆ ಬೆಳೆದಿದ್ದೆವು. ಇದೀಗ ಎಲ್ಲವೂ ಸುಟ್ಟು ಹೋಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಸ್ಥಳಕ್ಕೆ ಸೆಸ್ಕ್ ಅಧಿಕಾರಿಗಳು ಹಾಗೂ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.