ಧಾರವಾಡ:
ಕೇಂದ್ರ ಕಾರಾಗೃಹದ ಸಭಾಭವನದಲ್ಲಿ ಜಿಲ್ಲಾಡಳಿತವು ವಿವಿಧ ಇಲಾಖೆಗಳ ಸಹಯೋಗದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಉದ್ಘಾಟಿಸಿದ ಅವರು, ಕಷ್ಟದ ಸಂದರ್ಭಗಳಲ್ಲಿ ಒಂಟಿಯಾಗಿ ಸಮಸ್ಯೆಗಳನ್ನು ಎದುರಿಸುವ ಬದಲು ಕುಟುಂಬದ ಸದಸ್ಯರು, ಸ್ನೇಹಿತರು ಹಾಗೂ ವಿಶ್ವಾಸಾರ್ಹ ವ್ಯಕ್ತಿಗಳೊಂದಿಗೆ ಸಮಸ್ಯೆಗಳನ್ನು ಹಂಚಿಕೊಳ್ಳಬೇಕು. ಅಗತ್ಯವಿದ್ದಲ್ಲಿ ತಜ್ಞರಿಂದ ಸೂಕ್ತ ಮಾರ್ಗದರ್ಶನ ಹಾಗೂ ನೆರವು ಪಡೆಯಬೇಕು. ಜೀವನದಲ್ಲಿ ಎದುರಾಗುವ ಪ್ರತಿಯೊಂದು ಸಮಸ್ಯೆಗೂ ಪರಿಹಾರ ಕಂಡುಕೊಳ್ಳಲು ಸಾಧ್ಯವಿದ್ದು, ಧೈರ್ಯ ಹಾಗೂ ಸಕಾರಾತ್ಮಕ ಚಿಂತನೆಯೊಂದಿಗೆ ಮುನ್ನಡೆಯಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪರಶುರಾಮ ಎಫ್.ಕೆ. ಮಾತನಾಡಿ, ಯಾರೇ ಆಗಲಿ ಮಾನಸಿಕವಾಗಿ ದುರ್ಬಲನಾದ ಸಂದರ್ಭದಲ್ಲಿ ಆತ್ಮಹತ್ಯೆಯಂತಹ ಆಲೋಚನೆಗಳಿಗೆ ಒಳಗಾಗುವ ಸಾಧ್ಯತೆ ಇದೆ. ಅಂತಹ ವ್ಯಕ್ತಿಗಳನ್ನು ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಮಾನಸಿಕವಾಗಿ ಸದೃಢರನ್ನಾಗಿಸುವ ಕಾರ್ಯವಾಗಬೇಕೆಂದರು.ಕೇಂದ್ರ ಕಾರಾಗೃಹದ ಅಧೀಕ್ಷಕ ಸಿ.ಜೆ. ರಘುಪತಿ ಮಾತನಾಡಿ, ಕಾರಾಗೃಹದಲ್ಲಿರುವ ಬಂದಿಗಳು ಮಾನಸಿಕವಾಗಿ ಕುಗ್ಗದೆ, ಉತ್ತಮ ಹಾಗೂ ಸೃಜನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಆತ್ಮವಿಶ್ವಾಸದಿಂದ ಜೀವನವನ್ನು ಎದುರಿಸಿ, ಉತ್ತಮ ಚಿಂತನೆ ಹಾಗೂ ಸಕಾರಾತ್ಮಕ ಮನೋಭಾವ ಬೆಳೆಸಿಕೊಂಡು ಸಶಕ್ತ ಜೀವನ ರೂಪಿಸಿಕೊಳ್ಳಬೇಕು ಎಂದರು.