ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ಗೆ ರಾಷ್ಟ್ರಮಟ್ಟದ ಪ್ರಶಸ್ತಿ

KannadaprabhaNewsNetwork |  
Published : Jul 31, 2026, 03:00 AM IST
ದೆಹಲಿಯಲ್ಲಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ಗೆ ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್ ಪ್ರದಾನ | Kannada Prabha

ಸಾರಾಂಶ

ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ಗೆ ರಾಷ್ಟ್ರಮಟ್ಟದ ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್-2026’ ಲಭಿಸಿದೆ. ನವದೆಹಲಿಯ ಇಂಡಿಯನ್ ಹ್ಯಾಬಿಟಾಟ್ ಸೆಂಟರ್ ನಲ್ಲಿ ಮಂಗಳವಾರ ನಡೆದ ಎಜ್ಯುಕೇಶನ್‌ ಎಕ್ಸ್‌ಲೆನ್ಸ್‌ ಕಾನ್ಫರೆನ್ಸ್ ಆ್ಯಂಡ್ ಅವಾರ್ಡ್ಸ್ - 2026’ ಕಾರ್ಯಕ್ರಮದಲ್ಲಿ ಕೇಂದ್ರ ಶಿಕ್ಷಣ ರಾಜ್ಯ ಸಚಿವ ಡಾ. ಸುಕಾಂತ್ ಮಜುಂದಾರ್ ಅವರು ಈ ಗೌರವ ಪ್ರದಾನ ಮಾಡಿದರು.

ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ಗೆ ರಾಷ್ಟ್ರಮಟ್ಟದ ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್-2026’ ಲಭಿಸಿದೆ. ನವದೆಹಲಿಯ ಇಂಡಿಯನ್ ಹ್ಯಾಬಿಟಾಟ್ ಸೆಂಟರ್ ನಲ್ಲಿ ಮಂಗಳವಾರ ನಡೆದ ಎಜ್ಯುಕೇಶನ್‌ ಎಕ್ಸ್‌ಲೆನ್ಸ್‌ ಕಾನ್ಫರೆನ್ಸ್ ಆ್ಯಂಡ್ ಅವಾರ್ಡ್ಸ್ - 2026’ ಕಾರ್ಯಕ್ರಮದಲ್ಲಿ ಕೇಂದ್ರ ಶಿಕ್ಷಣ ರಾಜ್ಯ ಸಚಿವ ಡಾ. ಸುಕಾಂತ್ ಮಜುಂದಾರ್ ಅವರು ಈ ಗೌರವ ಪ್ರದಾನ ಮಾಡಿದರು.‘ಫಿಟ್ ಇಂಡಿಯಾ’ ಹಾಗೂ ‘ಸ್ಕೂಲ್ ಗ್ರೇಡ್ಸ್‌’ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿದ್ದ ಈ ಸಮಾರಂಭದಲ್ಲಿ ದೇಶದ ಆಯ್ದ ಪ್ರಮುಖ ಶಿಕ್ಷಣ ಸಂಸ್ಥೆಗಳಿಗೆ ಈ ಪುರಸ್ಕಾರ ನೀಡಲಾಯಿತು.ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಲ್ಪಾವಧಿಯಲ್ಲೇ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆ, ಗುಣಮಟ್ಟದ ಬೋಧನೆ, ಕ್ರೀಡೆ, ಸಾಹಿತ್ಯ, ಸಂಸ್ಕೃತಿ ಹಾಗೂ ಮೌಲ್ಯಾಧಾರಿತ ಶಿಕ್ಷಣಕ್ಕೆ ನೀಡಿರುವ ಆದ್ಯತೆ ಮತ್ತು ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಸಂಸ್ಥೆಯ ಪರವಾಗಿ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ ಹಾಗೂ ಖಜಾಂಚಿ ಭರತ್ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು.ಬಿಹಾರದ ಶಿಕ್ಷಣ ಸಚಿವ ಮಿಥಿಲೇಶ್ ತಿವಾರಿ ಹಾಗೂ ಅರುಕಾಸ್ ಪ್ರೈ.ಲಿ.ನ ವ್ಯವಸ್ಥಾಪಕ ನಿರ್ದೇಶಕಿ ಜೂಹಿ ರಜಪೂತ್ ಸೇರಿದಂತೆ ಶೈಕ್ಷಣಿಕ ಕ್ಷೇತ್ರದ ಹಲವು ಪ್ರಮುಖ ಗಣ್ಯರು ಉಪಸ್ಥಿತರಿದ್ದರುಶ್ರಮಕ್ಕೆ ಸಂದ ಗೌರವ: ಡಾ. ರಮೇಶ್ ಶೆಟ್ಟಿ

ಪ್ರಶಸ್ತಿ ಬಗ್ಗೆ ಪ್ರತಿಕ್ರಿಯಿಸಿರುವ ಸಂಸ್ಥೆಯ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಅಖಿಲ ಭಾರತ ಮಟ್ಟದ ಈ ಪ್ರತಿಷ್ಠಿತ ಪ್ರಶಸ್ತಿ ನಮ್ಮ ಸಂಸ್ಥೆಗೆ ದೊರೆತಿರುವುದು ಅತ್ಯಂತ ಸಂತಸದ ಹಾಗೂ ಹೆಮ್ಮೆಯ ಕ್ಷಣ. ಕುಂದಾಪುರದ ಗ್ರಾಮೀಣ ಪ್ರದೇಶದಲ್ಲಿ ಆರಂಭವಾದ ನಮ್ಮ ಸಂಸ್ಥೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೊರೆತಿರುವ ಈ ಗೌರವ ನಮ್ಮೆಲ್ಲರ ಶ್ರಮಕ್ಕೆ ಸಂದ ಮಾನ್ಯತೆ. ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳಿಗೆ ಹಾಗೂ ಹಗಲಿರುಳು ಶ್ರಮಿಸಿದ ನಮ್ಮ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಈ ಪ್ರಶಸ್ತಿಯನ್ನು ಅರ್ಪಿಸುತ್ತೇವೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಿಕೋದ್ಯಮದಲ್ಲಿ ಉದ್ಯೋಗ ಕಸಿದುಕೊಳ್ಳುತ್ತಿರುವ ಎಐ
ಮಹಾವೀರ ಸಹಕಾರಿ ಬ್ಯಾಂಕ್‌ಗೆ ₹4.01 ಕೋಟಿ ಲಾಭ