ಕನ್ನಡಪ್ರಭ ವಾರ್ತೆ ಕುಂದಾಪುರ
ಕೋಟೇಶ್ವರ ಯಡಾಡಿ- ಮತ್ಯಾಡಿ ಸುಜ್ಞಾನ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದೀಪಾವಳಿ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹೆಗ್ಗದ್ದೆ ಸ್ಟುಡಿಯೋ ಯೂಟ್ಯೂಬ್ ಚಾನಲ್ ನ ಸಂದೀಪ್ ಶೆಟ್ಟಿ ಮಾತನಾಡಿ ಮಕ್ಕಳು ಎಳವೆಯಲ್ಲಿಯೇ ಕನಸು ಕಾಣಬೇಕು ಮತ್ತು ನನಸಾಗಿಸಲು ಪ್ರಯತ್ನಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ಮಾತನಾಡಿ, ಮಕ್ಕಳಿಗೆ ನಮ್ಮ ನಾಡಿನ ಆಚಾರ ವಿಚಾರಗಳನ್ನು ತಿಳಿಸುವುದು ಇಂತಹ ಕಾರ್ಯಕ್ರಮಗಳ ಉದ್ದೇಶ ಎಂದರು.ಕಾರ್ಯಕ್ರಮದಲ್ಲಿ ತುಳಸಿ ಪೂಜೆ, ಬಲಿಂದ್ರ ಪೂಜೆ, ಗೋಪೂಜೆ, ಹಳೆಯ ಕಾಲದ ಪರಿಕರಗಳ ವಸ್ತುಗಳ ಪ್ರದರ್ಶನ ಏರ್ಪಡಿಸಿ ಮಕ್ಕಳಿಗೆ ತುಳಸಿ ಪೂಜೆ ಮತ್ತು ಗೋಪೂಜೆಯ ಮಹತ್ವ ತಿಳಿಸಲಾಯಿತು.
ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮೂಡಿಬಂತು. ಸಂದೀಪ್ ಶೆಟ್ಟಿ ಅವರನ್ನು ಗೌರವಿಸಲಾಯಿತು. ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಸುಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಂಜನ್ ಶೆಟ್ಟಿ, ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಪ್ರದೀಪ್ ಇದ್ದರು.