ಸುಳ್ಯ: ಸಿ.ಎ. ಬ್ಯಾಂಕ್ ಶತಮಾನೋತ್ತರ ದಶಮಾನೋತ್ಸವ

KannadaprabhaNewsNetwork |  
Published : Apr 14, 2025, 01:27 AM IST
ಸಿ.ಎ.ಬ್ಯಾಂಕ್ ಕಾಂಪ್ಲೆಕ್ಸ್ ಉದ್ಘಾಟನೆ ನಡೆಯಿತು. | Kannada Prabha

ಸಾರಾಂಶ

ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ತರ ದಶಮಾನೋತ್ಸವ ಮತ್ತು ನೂತನ ಕಟ್ಟಡ ಸಿ.ಎ. ಬ್ಯಾಂಕ್ ಕಾಂಪ್ಲೆಕ್ಸ್ ಲೋಕಾರ್ಪಣೆ ಸಮಾರಂಭ ಶನಿವಾರ ನಡೆಯಿತು.

ಕನ್ನಡಪ್ರಭ ವಾರ್ತೆ ಸುಳ್ಯ

ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ತರ ದಶಮಾನೋತ್ಸವ ಮತ್ತು ನೂತನ ಕಟ್ಟಡ ಸಿ.ಎ. ಬ್ಯಾಂಕ್ ಕಾಂಪ್ಲೆಕ್ಸ್ ಲೋಕಾರ್ಪಣೆ ಸಮಾರಂಭ ಶನಿವಾರ ನಡೆಯಿತು.ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಶತಮಾನೋತ್ತರ ದಶಮಾನೋತ್ಸವ ಹಾಗೂ ನೂತನ ಸಿ.ಎ.ಬ್ಯಾಂಕ್ ಕಾಂಪ್ಲೆಕ್ಸ್ ಉದ್ಘಾಟಿಸಿ, ಗ್ರಾಮದ ಅಭಿವೃದ್ಧಿಯಲ್ಲಿ ಸಹಕಾರಿ ಸಂಘಗಳ ಪಾತ್ರ ನಿರ್ಣಾಯಕವಾದದ್ದು ಎಂದರು.ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಮಾತನಾಡಿ, ಮೂಲ ಉದ್ದೇಶ ಕಾಪಾಡಿಕೊಂಡು ಬೆಳವಣಿಗೆ ಹೊಂದುವುದು ಸವಾಲಿನ ಕಾರ್ಯ. ಸಹಕಾರಿ ಸಂಘಗಳು ಈ ಕಾರ್ಯದಲ್ಲಿ ಯಶಸ್ಸು ಸಾಧಿಸಿದೆ. ಸಹಕಾರಿ ವಿಶ್ವವಿದ್ಯಾಲಯ ಸ್ಥಾಪನೆಯ ಉದ್ದೇಶ ಕೇಂದ್ರ ಸರ್ಕಾರದ ಮುಂದಿದೆ. ದೇಶ ಆರ್ಥಿಕ ಹೊಡೆತ ಎದುರಿಸಿದ ಸಂದರ್ಭದಲ್ಲೂ ಸಹಕಾರಿ ಸಂಘಗಳ ಮೂಲಕ ಇಲ್ಲಿನ ಜನ ಪ್ರಯೋಜನ ಕಂಡುಕೊಂಡಿದ್ದಾರೆ ಎಂದು ಹೇಳಿದರು.

ಸಿ.ಎ.ಬ್ಯಾಂಕ್ ಅಧ್ಯಕ್ಷ ವಿಕ್ರಂ ಅಡ್ಪಂಗಾಯರ ಅಧ್ಯಕ್ಷತೆ ವಹಿಸಿದ್ದರು.

ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್.ಎನ್. ಮನ್ಮಥ, ಸುಳ್ಯ ನಗರ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಎ. ನೀರಬಿದಿರೆ, ಕೆಎಂಎಫ್ ನಿರ್ದೇಶಕ ಎಸ್.ಬಿ. ಜಯರಾಮ ರೈ ಮುಖ್ಯ ಅತಿಥಿಗಳಾಗಿದ್ದರು.ಸಿ.ಎ.ಬ್ಯಾಂಕ್ ಉಪಾಧ್ಯಕ್ಷ ಚಂದ್ರಶೇಖರ ಸೋಣಂಗೇರಿ, ನಿರ್ದೇಶಕರಾದ ರಾಮಚಂದ್ರ ಎನ್.ಎ., ವಾಸುದೇವ ನಾಯಕ್ ಪುತ್ತಿಲ, ಚಂದ್ರಶೇಖರ ಡಿ.ಕೆ., ಪ್ರಭೋದ್ ಶೆಟ್ಟಿ ಮೇನಾಲ, ಬಾಲಗೋಪಾಲ ಸೇರ್ಕಜೆ ಮೋಂಟಡ್ಕ, ವೆಂಕಟ್ರಮಣ ಮುಳ್ಯ, ಹರಿಣಾಕ್ಷಿ ರೈ ಬೇಲ್ಯ, ಹೇಮಂತ್ ಕುಮಾರ್ ಕಂದಡ್ಕ, ಶಿವರಾಮ ಕೇರ್ಪಳ, ಕೇಶವ ಮಾಸ್ತರ್ ಹೊಸಗದ್ದೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಎಸ್.ಪಿ. ವೇದಿಕೆಯಲ್ಲಿ ಇದ್ದರು.ನ್ಯಾಯವಾದಿ ಸುಮಾ ಕೆ.ಎಸ್. ಪ್ರಾರ್ಥಿಸಿದರು. ಅಧ್ಯಕ್ಷ ವಿಕ್ರಂ ಅಡ್ಪಂಗಾಯ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಚಂದ್ರಶೇಖರ ಸೋಣಂಗೇರಿ ವಂದಿಸಿದರು. ಅಚ್ಚುತ ಅಟ್ಲೂರು, ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

PREV

Recommended Stories

ಗ್ರಾಮೀಣ ಭಜನಾ ಮಂಡಳಿಗಳಲ್ಲಿ ತತ್ವಪದಗಳು ಜೀವಂತ
ರಾಮದುರ್ಗ ಧನಲಕ್ಷ್ಮೀ ಶುಗರ್ ಚುನಾವಣೆ: ಸತತ 4ನೇ ಬಾರಿಗೆ ಯಾದವಾಡರ ನೇತೃತ್ವಕ್ಕೆ ಜಯ