ನನ್ನ ಸ್ಪರ್ಧೆಗಿಂತ ಮಂಡ್ಯದಲ್ಲಿ ಬಿಜೆಪಿ ಸ್ಪರ್ಧಿಸುವುದು ಮುಖ್ಯ: ಸುಮಲತಾ

KannadaprabhaNewsNetwork | Updated : Mar 19 2024, 12:03 PM IST

ಸಾರಾಂಶ

ನನ್ನ ಸ್ಪರ್ಧೆ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಇನ್ನೂ ಮಂಡ್ಯ ಕ್ಷೇತ್ರದ ಕುರಿತು ಏನೂ ನಿರ್ಧಾರ ಆಗಿಲ್ಲ. ಮಂಗಳವಾರ ಈ ಸಂಬಂಧ ಬೆಂಬಲಿಗರ ಜತೆಗೆ ಸಭೆ ನಡೆಸುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹೇಳಿದ್ದಾರೆ ಎಂದು ಸಂಸದೆ ಸುಮಲತಾ ಅಂಬರೀಶ್‌ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ನವದೆಹಲಿ

ನನ್ನ ಸ್ಪರ್ಧೆ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಇನ್ನೂ ಮಂಡ್ಯ ಕ್ಷೇತ್ರದ ಕುರಿತು ಏನೂ ನಿರ್ಧಾರ ಆಗಿಲ್ಲ. ಮಂಗಳವಾರ ಈ ಸಂಬಂಧ ಬೆಂಬಲಿಗರ ಜತೆಗೆ ಸಭೆ ನಡೆಸುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹೇಳಿದ್ದಾರೆ ಎಂದು ಸಂಸದೆ ಸುಮಲತಾ ಅಂಬರೀಶ್‌ ತಿಳಿಸಿದ್ದಾರೆ.

ನಡ್ಡಾ ಭೇಟಿ ಬಳಿಕ ದೆಹಲಿಯಲ್ಲಿ ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ನಿಮ್ಮಂಥ ನಾಯಕಿ ಪಕ್ಷಕ್ಕೆ ಬೇಕು. ನಾನು ಸ್ಪರ್ಧೆ ಮಾಡಬೇಕು ಎಂಬುದಕ್ಕಿಂತ ಮಂಡ್ಯದಲ್ಲಿ ಬಿಜೆಪಿ ಸ್ಪರ್ಧೆ ಮಾಡಬೇಕು. ಸ್ಪರ್ಧೆ ಮಾಡಿದರೆ ಮಂಡ್ಯದಲ್ಲಿ ಬಿಜೆಪಿ ಅಸ್ತಿತ್ವ ಉಳಿಯುತ್ತದೆ ಎಂದು ತಿಳಿಸಿದರು.

ನಾನು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎನ್ನುವುದು ಊಹಾಪೋಹ ಅಷ್ಟೇ. ಕಳೆದ ಬಾರಿ ಪಕ್ಷೇತರರವಾಗಿ ನಿಲ್ಲಿ ಎಂದು ಅಭಿಮಾನಿಗಳು ಹೇಳಿದ್ದರು, ಅದರಂತೆ ಮಂಡ್ಯದಲ್ಲಿ ಸ್ಪರ್ಧಿಸಿದ್ದೆ. 

ಮುಂದೆ ಯಾವುದೇ ನಿರ್ಧಾರ ಮಾಡುವುದಿದ್ದರೆ ಅವರನ್ನೇ ಕೇಳುತ್ತೇನೆ. ಸಭೆಯಲ್ಲಿ ಹೈಕಮಾಂಡ್‌ ತೆಗೆದುಕೊಳ್ಳುವ ನಿರ್ಧಾರ ಕುರಿತು ಬೆಂಬಲಿಗರೊಂದಿಗೆ ಚರ್ಚಿಸುತ್ತೇನೆ. 

ಮಂಡ್ಯದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲು ಬಯಸುವುದು ಸಹಜ. ಆದರೆ ಈ ವಿಚಾರದಲ್ಲಿ ಯಾವುದೇ ಸಮಸ್ಯೆ ಆಗದ ರೀತಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದರು

ಕಾರ್ಯಕರ್ತರನ್ನು ಬಿಟ್ಟುಕೊಟ್ಟು ಯಾವುದೇ ನಿರ್ಧಾರ ಮಾಡುವುದಿಲ್ಲ ಎಂದಿದ್ದೇನೆ, ಹಾಗೆಯೇ ನಡ್ಡಾ ಅವರು ಸಹ ನಿಮ್ಮ ಬೆಂಬಲಿಗರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಭರವಸೆ ನೀಡಿದ್ದಾರೆ ಎಂದು ಎಂದು ಸುಮಲತಾ ತಿಳಿಸಿದರು.

ಮೋದಿಯವರು ಕೂಡ ಇದೇ ಭರವಸೆ ಕೊಟ್ಟಿದ್ದಾರೆ. ಅಮಿತ್ ಶಾ ಅವರನ್ನು ಭೇಟಿ ಮಾಡಲು ಹೇಳಿದ್ದಾರೆ ಎಂದರು.

Share this article