ಬೇಸಿಗೆ ಶಿಬಿರ ಮಕ್ಕಳ ವ್ಯಕ್ತಿತ್ವ ವಿಕಾಸಕ್ಕೆ ಪೂರಕ: ಲಕ್ಷ್ಮೀನಾರಾಯಣ ಆಸ್ರಣ್ಣ

KannadaprabhaNewsNetwork |  
Published : May 18, 2026, 03:45 AM IST
ಪುನರೂರು ಪ್ರತಿಷ್ತಾನದಿಂದ ಪುನರೂರುನಲ್ಲಿ ಬೇಸಿಗೆ ಶಿಬಿರ | Kannada Prabha

ಸಾರಾಂಶ

ಎಳವೆಯಲ್ಲಿ ಮಕ್ಕಳಿಗೆ ಸಂಸ್ಕಾರ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಕಲಿಸುವ ಅಗತ್ಯವಿದ್ದು ಬೇಸಿಗೆ ಶಿಬಿರಗಳು ಮಕ್ಕಳ ವ್ಯಕ್ತಿತ್ವ ವಿಕಾಸಕ್ಕೆ ಪೂರಕ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಅನುವಂಶಿಕ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹೇಳಿದರು.

ಮೂಲ್ಕಿ: ಎಳವೆಯಲ್ಲಿ ಮಕ್ಕಳಿಗೆ ಸಂಸ್ಕಾರ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಕಲಿಸುವ ಅಗತ್ಯವಿದ್ದು ಬೇಸಿಗೆ ಶಿಬಿರಗಳು ಮಕ್ಕಳ ವ್ಯಕ್ತಿತ್ವ ವಿಕಾಸಕ್ಕೆ ಪೂರಕ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಅನುವಂಶಿಕ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹೇಳಿದರು.ಪುನರೂರು ಪ್ರತಿಷ್ಠಾನದ ಆಶ್ರಯದಲ್ಲಿ ಜನವಿಕಾಸ ಸಮಿತಿ ಮೂಲ್ಕಿಯ ಸಹಕಾರದಲ್ಲಿ ಪುನರೂರು ಶ್ರೀ ವಿಶ್ವನಾಥ ದೇವಳ ನಲ್ಲಿ ಕಳೆದ 9 ವರ್ಷಗಳಿಂದ ನಿರಂತರವಾಗಿ ಮಕ್ಕಳ ಬೌದ್ಧಿಕ ಹಾಗೂ ಸಾಂಸ್ಕೃತಿಕ ಬೆಳವಣಿಗೆಗಾಗಿ ಆಯೋಜಿಸಲಾಗುತ್ತಿರುವ ಉಚಿತ ಬೇಸಿಗೆ ಶಿಬಿರ ಬಾಲವಿಕಾಸ ಶಿಬಿರ - 2026 ರ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪುನರೂರು ಪ್ರತಿಷ್ಠಾನದ ಗೌರವ ಅಧ್ಯಕ್ಷ, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಮಾತನಾಡಿ, ಮಕ್ಕಳಲ್ಲಿ ಶಿಸ್ತು, ಭಕ್ತಿ ಹಾಗೂ ಸಂಸ್ಕೃತಿಯ ಅರಿವು ಮೂಡಿಸುವ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದರು. ಯುಗಪುರುಷ ಕಿನ್ನಿಗೋಳಿಯ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ, ಜೆ ಸಿ ಐ ಮೂಲ್ಕಿ ಶಾಂಭವಿಯ ಅಧ್ಯಕ್ಷ ಭಾಸ್ಕರ ಶೆಟ್ಟಿಗಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು ಪುನರೂರು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಶ್ರೇಯಾ ಪುನರೂರು, ಜನವಿಕಾಸ ಸಮಿತಿ ಮೂಲ್ಕಿಯ ಅಧ್ಯಕ್ಷ ಸುರೇಶ್ ರಾವ್ ನೀರಳಿಕೆ , ಪದಾಧಿಕಾರಿಗಳಾದ ಗೀತಾ ಶೆಟ್ಟಿ, ಶೋಭಾ ರಾವ್ ಉಪಸ್ಥಿತರಿದ್ದರು.ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಸ್ವಾಗತಿಸಿ, ಪ್ರಸ್ತಾವನೆಗೈದರು. ಪ್ರಾಣೇಶ್ ಭಟ್ ದೇಂದಡ್ಕ ವಂದಿಸಿದರು. ಹಿತಾ ಉಮೇಶ್ ಕಾರ್ಯಕ್ರಮ ನಿರೂಪಿಸಿದರು. ಸುಮಾರು 94 ಶಿಬಿರಾರ್ಥಿಗಳ ಭಾಗವಹಿಸಿದ್ದು ಶಿಬಿರವು ಮೇ 17ರಿಂದ 24ರವರೆಗೆ ನಡೆಯಲಿದೆ. ಶಿಬಿರಾರ್ಥಿಗಳಿಗೆ ಯೋಗ, ಶ್ಲೋಕ, ಅಭಿನಯ, ಮಣ್ಣಿನ ಕಲಾಕೃತಿ ರಚನೆ ಹಾಗೂ ಭಜನೆಗಳ ತರಬೇತಿಯನ್ನು ನುರಿತ ಶಿಕ್ಷಕರು ನೀಡಲಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನ ಪ್ರತಿಷ್ಠಾ ವರ್ಧಂತ್ಯುತ್ಸವ
ಕಾರ್ಕಳ: ಋಣಾನುಬಂಧ ವಧುವರರ ಸಮಾವೇಶ