ಬೇಸಿಗೆ ಶಿಬಿರ ಮಕ್ಕಳ ಪ್ರತಿಭೆ ಗುರುತಿಸಲು ಸಹಕಾರಿ: ಡಾ.ರಾಘವೇಂದ್ರ

KannadaprabhaNewsNetwork | Published : May 2, 2024 12:21 AM

ಸಾರಾಂಶ

ಬೇಸಿಗೆ ಕ್ರೀಡಾ ಶಿಬಿರವು ಒಂದು ತಿಂಗಗಳ ಕಾಲ ನಡೆದಿದ್ದು, ಮುಖ್ಯವಾಗಿ ಕ್ರೀಡಾ ಶಿಬಿರದಲ್ಲಿ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಲಾಗಿದೆ. ಪ್ರತಿಭಾವಂತ ಕ್ರೀಡೆಗಳಲ್ಲಿ ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಇನ್ನು ಮತ್ತಷ್ಟು ತರಬೇತಿ ನೀಡಿ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಬೇಕೆಂಬ ಹಂಬಲದೊಂದಿಗೆ ಹಳ್ಳಿಗಳಲ್ಲಿ ಉಚಿತವಾಗಿ ಈ ಶಿಬಿರವನ್ನು ಆಯೋಜನೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಬೇಸಿಗೆ ಶಿಬಿರಗಳು ಮಕ್ಕಳ ಪ್ರತಿಭೆ ಗುರುತಿಸಲು ಸಹಕಾರಿಯಾಗಿವೆ ಎಂದು ಅಚೀವರ್ಸ್ ಅಕಾಡೆಮಿ ಮುಖ್ಯಸ್ಥ ಡಾ.ರಾಘವೇಂದ್ರ ಹೇಳಿದರು.

ಪಟ್ಟಣದಲ್ಲಿ ಅಕಾಡೆಮಿಯಿಂದ ಆಯೋಜಿಸಿದ್ದ ಉಚಿತ ಕ್ರೀಡಾ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಬೇಸಿಗೆ ಕ್ರೀಡಾ ಶಿಬಿರವು ಒಂದು ತಿಂಗಗಳ ಕಾಲ ನಡೆದಿದ್ದು, ಮುಖ್ಯವಾಗಿ ಕ್ರೀಡಾ ಶಿಬಿರದಲ್ಲಿ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಲಾಗಿದೆ ಎಂದರು.

ಪ್ರತಿಭಾವಂತ ಕ್ರೀಡೆಗಳಲ್ಲಿ ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಇನ್ನು ಮತ್ತಷ್ಟು ತರಬೇತಿ ನೀಡಿ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಬೇಕೆಂಬ ಹಂಬಲದೊಂದಿಗೆ ಹಳ್ಳಿಗಳಲ್ಲಿ ಉಚಿತವಾಗಿ ಈ ಶಿಬಿರವನ್ನು ಆಯೋಜನೆ ಮಾಡಲಾಯಿತು ಎಂದರು.

ಪ್ರತಿ ನಿತ್ಯ ಸಹ ಇಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ ಬೆಳಗ್ಗೆ ಮತ್ತು ಸಂಜೆ ಉಚಿತವಾಗಿ ಕ್ರೀಡಾ ತರಬೇತಿ ನೀಡಲಾಗುತ್ತದೆ. ಆಸಕ್ತ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಗಾಂಧಿವಾದಿ ಡಾ.ಸುಜಯ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯಲ್ಲಿ ನಿರಂತರವಾಗಿ ಪಾಲ್ಗೊಂಡರೆ ಯಾವುದೇ ರೀತಿ ಆಸ್ಪತ್ರೆಗೆ ಹೋಗುವಂತ ಪ್ರಮಯ ಬರುವುದಿಲ್ಲ. ವಿದ್ಯಾರ್ಥಿಗಳು ಮುಂದೆಯೂ ಕೂಡ ತರಬೇತಿಯನ್ನು ನಿರಂತರವಾಗಿ ಅಭ್ಯಾಸ ಮಾಡಬೇಕು ಎಂದು ಕಿವಿಮಾತು ಹೇಳಿದರು

ಪುರಸಭೆ ಮಾಜಿ ಸದಸ್ಯರು ಹಾಗೂ ಸಮಾಜ ಸೇವಕಿ ಕಾವೇರಮ್ಮ ಶೇಷಾದ್ರಿ ಮಾತನಾಡಿ, ಎಲ್ಲಾ ಕ್ರೀಡಾಪಟುಗಳಿಗೆ ಮುಂದಿನ ದಿನಗಳಲ್ಲಿ ನಿರಂತರ ತರಬೇತಿ ಪಡೆದುಕೊಂಡು ನಮ್ಮ ತಾಲೂಕು, ಜಿಲ್ಲೆ, ರಾಜ್ಯಕ್ಕೆ ಹಾಗೂ ದೇಶಕ್ಕೆ ಹೆಸರು ತರಬೇಕು ಎಂದು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಪರಿವರ್ತನ ಶಾಲೆ ವ್ಯವಸ್ಥಾಪಕ ನಿರ್ದೇಶಕ ಮಂಜುರಾಂ ಮಾತನಾಡಿ, ಶಿಬಿರಗಳಲ್ಲಿ ಪಾಲ್ಗೊಂಡಿದ್ದ ಮಕ್ಕಳಿಗೆ ಅಭಿನಂದನೆ ತಿಳಿಸಿ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಉತ್ತಮ ಆರೋಗ್ಯ ಹಾಗೂ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಬಹುದು ಎಂದರು.

ಇದೇ ವೇಳೆ ಅಚೀವರ್ಸ್ ಅಕಾಡೆಮಿನಿರ್ದೇಶಕರಾದ ಗುರು, ರಾಹುಲ್, ಆಕ್ಸ್ ಫರ್ಡ್ ಶಾಲೆಯ ದೈಹಿಕ ಶಿಕ್ಷಕರಾದ ಮನು ಸೇರಿದಂತೆ ಪೋಷಕರು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.

Share this article