ಸೂಲಿಬೆಲೆ: ಬೇಸಿಗೆ ರಜೆ ಕಾಲದಲ್ಲಿ ಹಮ್ಮಿಕೊಳ್ಳುವ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾದ ಶಿಬಿರವು ಮಕ್ಕಳ ಬೌದ್ಧಿಕ ಜ್ಞಾನವೃದ್ಧಿಗೆ ಸಹಕಾರಿಯಾಗಿದೆ ಎಂದು ಗಿಡ್ಡಪ್ಪನಹಳ್ಳಿ ಪಿಡಿಒ ಆನಂದ್ ಕುಮಾರ್ ಹೇಳಿದರು.
ಗಿಡ್ಡಪ್ಪನಹಳ್ಳಿ ಗ್ರಾಪಂ, ಶಿಕ್ಷಣ ಫೌಂಡೇಷನ್ ಹಾಗೂ ಅರಿವು ಕೇಂದ್ರ ಗಿಡ್ಡಪ್ಪನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ೩೦ ದಿನಗಳ ಬೇಸಿಗೆ ಶಿಬಿರ ಯಶಸ್ವಿಯಾಗಿದ್ದು, ಶಿಕ್ಷಣ ಫೌಂಡೇಷನ್ ವತಿಯಿಂದ ನಾನಾ ರೀತಿಯ ಚಟುವಟಿಕೆಗಳನ್ನು ನಡೆಸಲಾಗಿದ್ದು ಮಕ್ಕಳಿಗೆ ಅನುಕೂಲವಾಗಿದೆ ಎಂದರು.
ಗ್ರಾಪಂ ಅಧ್ಯಕ್ಷೆ ನವಿತಾ ಮಾತನಾಡಿ, ಬೇಸಿಗೆ ಶಿಬಿರಗಳು ಕೇವಲ ನಗರಕ್ಕೆ ಸೀಮಿತವಾಗಿದ್ದು, ಗ್ರಾಮೀಣ ಮಕ್ಕಳು ವಂಚಿತರಾಗುತ್ತಿದ್ದರು. ಪ್ರಸಕ್ತ ಸಾಲಿನಲ್ಲಿ ಹಮ್ಮಿಕೊಂಡಿರುವ ೩೦ ದಿನಗಳ ಬೇಸಿಗೆ ಶಿಬಿರವು ಪೂರ್ಣ ಪ್ರಮಾಣದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದರು.ಗ್ರಾಪಂ ಅರಿವು ಕೇಂದ್ರದ ಮುಖ್ಯಸ್ಥ ಗಂಗಾಧರ್ ಮಾತನಾಡಿ, ಶಿಕ್ಷಣ ಫೌಂಡೇಷನ್ ವತಿಯಿಂದ ನಿರಂತರವಾಗಿ ಶಿಕ್ಷಣಕ್ಕೆ ಪೂರಕವಾದ ಅಭ್ಯಾಸಗಳನ್ನು ಹಮ್ಮಿಕೊಳ್ಳುವ ಮೂಲಕ ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಅಗತ್ಯವಿದ್ದ ಹಲವು ಚಟುವಟಿಕೆಗಳನ್ನು ಕಲಿಸಿಕೊಟ್ಟಿದ್ದಾರೆ ಎಂದರು.
ಗ್ರಾಪಂ ಮಾಜಿ ಅಧ್ಯಕ್ಷರಾದ ಅಕ್ಬರ್ ಅಲಿಖಾನ್ ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು.ಗ್ರಾಪಂ ಉಪಾಧ್ಯಕ್ಷ ನಾಗೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜೀವ್, ಶಿಕ್ಷಣ ಫೌಂಡೇಷನ್ ಸಂಚಾಲಕ ಗಂಗಾಧರ್, ಧನುಷ್, ಇತರರು ಇದ್ದರು.