ದಾಬಸ್‌ಪೇಟೆ: ಮಕ್ಕಳ ಪ್ರತಿಭೆಗೆ ವೇದಿಕೆ ಒದಗಿಸುವುದರ ಜತೆಗೆ ವ್ಯಕ್ತಿತ್ವ ರೂಪಿಸುವುದಕ್ಕಾಗಿ ಪ್ರತಿವರ್ಷ ಉಚಿತ ಬೇಸಿಗೆ ತರಬೇತಿ ಶಿಬಿರ ಹಮ್ಮಿಕೊಂಡಿರುವುದು ಸಂತಸ. ಮಕ್ಕಳು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೊನ್ನೇನಹಳ್ಳಿ ಗ್ರಾಪಂ ಪಿಡಿಒ ಮಂಜಮ್ಮ ತಿಳಿಸಿದರು.
ಗ್ರಂಥಾಲಯ ಮೇಲ್ವಿಚಾರಕಿ ಶಾರದಮ್ಮ ಮಾತನಾಡಿ, ಶಿಬಿರದಲ್ಲಿ ಯೋಗ, ಕರಕುಶಲತೆ, ಸಂಗೀತ, ದೈಹಿಕ ಶಿಕ್ಷಣ ಸೇರಿದಂತೆ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು. ಎಲ್ಲಾ ಮಕ್ಕಳು ಕಡ್ಡಾಯವಾಗಿ ಶಿಬಿರದಲ್ಲಿ ಭಾಗವಹಿಸಿ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಕ್ಕಳಿಗೆ ಯೋಗ, ಕರಾಟೆ, ಒಲೆ ಇಲ್ಲದೆ ಅಡುಗೆ ಮಾಡುವುದು ಸೇರಿದಂತೆ ವಿವಿಧ ತರಬೇತಿಗಳನ್ನು ನೀಡಿದರು. ಈ ಸಂದರ್ಭದಲ್ಲಿ ಗ್ರಾಪಂ ಕಾರ್ಯದರ್ಶಿ ಚಂದ್ರಯ್ಯ, ಸಿಬ್ಬಂದಿ ವೀರಭದ್ರಸ್ವಾಮಿ, ರಮೇಶ್ ಇತರರು ಉಪಸ್ಥಿತರಿದ್ದರು.ಪೋಟೋ 6 : ಸೋಂಪುರ ಹೋಬಳಿಯ ಹೊನ್ನೇನಹಳ್ಳಿ ಗ್ರಂಥಾಲಯದಲ್ಲಿ ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರ ಕಾರ್ಯಕ್ರಮಕ್ಕೆ ಗ್ರಾಪಂ ಕಾರ್ಯದರ್ಶಿ ಚಂದ್ರಯ್ಯ, ಗ್ರಂಥಾಲಯ ಮೇಲ್ವಿಚಾರಕಿ ಶಾರದಮ್ಮ ಚಾಲನೆ ನೀಡಿ ಮಾತನಾಡಿದರು.