ಮಕ್ಕಳ ಪ್ರತಿಭೆ ಹೊರತರಲು ಬೇಸಿಗೆ ಶಿಬಿರಗಳು ಸಹಕಾರಿ: ಚಲುವರಾಯಸ್ವಾಮಿ

KannadaprabhaNewsNetwork |  
Published : Apr 22, 2026, 02:00 AM IST
21ಕೆಎಂಎನ್ ಡಿ22 | Kannada Prabha

ಸಾರಾಂಶ

ಮಕ್ಕಳಲ್ಲಿರುವ ಪ್ರತಿಭೆ ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳು ಕೇವಲ ಅಂಕಗಳಿಗೆ ಸೀಮಿತವಾಗದೆ ಕಲೆ, ಸಾಹಿತ್ಯ ಮತ್ತು ಕ್ರೀಡೆಗಳಲ್ಲಿಯೂ ಆಸಕ್ತಿ ಬೆಳೆಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಮಕ್ಕಳಲ್ಲಿರುವ ಪ್ರತಿಭೆ ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ತಾಲೂಕಿನ ಪಾಲಹಳ್ಳಿಯಲ್ಲಿ ಆಯೋಜಿಸಿದ್ದ ಮಕ್ಕಳ ಬೇಸಿಗೆ ಶಿಬಿರಕ್ಕೆ ಭೇಟಿ ನೀಡಿ ಮಕ್ಕಳೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳು ಕೇವಲ ಅಂಕಗಳಿಗೆ ಸೀಮಿತವಾಗದೆ ಕಲೆ, ಸಾಹಿತ್ಯ ಮತ್ತು ಕ್ರೀಡೆಗಳಲ್ಲಿಯೂ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು.

ನಂತರ ಶಿಬಿರದಲ್ಲಿ ಭಾಗವಹಿಸಿದ್ದ ಮಕ್ಕಳೊಂದಿಗೆ ಕೆಲಕಾಲ ಕಾಲ ಕಳೆದ ಸಚಿವರು, ಶಿಬಿರದಲ್ಲಿ ಕಲಿಯುತ್ತಿರುವ ವಿಷಯಗಳ ಬಗ್ಗೆ ವಿಚಾರಿಸಿದರು. ಮಕ್ಕಳ ಹಾಡು, ನೃತ್ಯ ಹಾಗೂ ಸೃಜನಾತ್ಮಕ ಚಟುವಟಿಕೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳಿಗೆ ಇಂತಹ ಶಿಬಿರಗಳು ವರದಾನವಾಗಿದೆ. ಸ್ಥಳೀಯ ಸಂಸ್ಥೆಗಳು ಇವುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿವೆ ಎಂದರು.

ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು. ಶಿಬಿರದ ಸಂಘಟಕರು ಹಾಗೂ ಪೋಷಕರು ಇದ್ದರು.

ಶಾಲಾ ಆವರಣದಲ್ಲಿ ತಣಿವು ಬೇಸಿಗೆ ಶಿಬಿರ

ಪಾಂಡವಪುರ:ಪಟ್ಟಣದ ಕೃಷ್ಣನಗರ 3ನೇ ಹಂತದ ನಂದಗೋಕುಲ ಕಿಡ್ಸ್ ವರ್ಲ್ಡ್ ಶಾಲೆಯು ಶಾಂತಿನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ ತಣಿವು ಬೇಸಿಗೆ ಶಿಬಿರ ಹಮ್ಮಿಕೊಂಡಿತ್ತು.

ಶಿಬಿರಕ್ಕೆ ಹಾರೋಹಳ್ಳಿ ಅಗ್ನಿಶಾಮಕ ಠಾಣಾ ಸಿಬ್ಬಂದಿ ಅಗ್ನಿ ಅನಾಹುತ ಸಂಭವಿಸಿದಾಗ ಕೈಗೊಳ್ಳಬಹುದಾದ ಕ್ರಮಗಳು, ಹಾಗೂ ಅಣಕು ಪ್ರದರ್ಶನ ನೀಡಿ ಜೊತೆಗೆ ರೈನ್ ಡ್ಯಾನ್ಸ್ ಮಾಡಿಸಿ ಮಕ್ಕಳಿಗೆ ಮಾಹಿತಿ ನೀಡಿ ಮನದ ತಣಿವನ್ನು ಈಡೇರಿಸಿದರು.ಕಾರ್ಯಕ್ರಮದಲ್ಲಿ ಪ್ರಭಾರ ಅಗ್ನಿಶಾಮಕ ಠಾಣಾಧಿಕಾರಿ ಚಂದ್ರಶೇಖರ ಮತ್ತು ಲೀಡಿಂಗ್ ಫೈರ್ ಫೈಟರ್ ಕಾಂತರಾಜು, ಡಿ.ಎಂ.ವಿಜಯ ಹಾಗೂ ಫೈರ್ ಫೈಟರ್ ರಾಹುಲ್ ಹೊಸೂರ್, ನವೀನ್ ಹಾಗೂ ನಂದಗೋಕುಲ ಶಾಲೆ ಅಧ್ಯಕ್ಷ ಆರ್.ಎ. ನಾಗಣ್ಣ ಮತ್ತು ಕಾರ್ಯದರ್ಶಿ ಡಾ.ಆರ್.ಎನ್.ರಶ್ಮಿ ಪೋಷಕರು ಸಹ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಶ್ವದ ಮೊದಲ ಸಂವಿಧಾನ ಶಿಲ್ಪಿ ಬಸವಣ್ಣ: ರಂಗನಾಥ್
ಮುಂಗಾರು ಹಂಗಾಮಿಗೆ ಸಿದ್ಧತೆ ಮಾಡಿಕೊಳ್ಳಿ