ಅಜೀಜ ಅಹ್ಮದ ಬಳಗಾನೂರ
ಕಳೆದ ಒಂದೂವರೆ ತಿಂಗಳಿನಿಂದ ಬಿಸಿಲ ಬೇಗೆಯಿಂದ ಜನತೆ ತತ್ತರಿಸಿದ್ದು, ಜನಜೀವನವೇ ಅಸ್ತವ್ಯಸ್ತಗೊಂಡಿದೆ. ಈಗ ಬ್ಲಡ್ ಬ್ಯಾಂಕ್‌ಗಳಿಗೂ ಈ ಬಿಸಿಲು ಆಘಾತವನ್ನುಂಟು ಮಾಡಿದ್ದು ಜನರು ರಕ್ತದಾನ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಹುಬ್ಬಳ್ಳಿಯ ಕೆಎಂಸಿಆರ್‌ಐ ಸೇರಿದಂತೆ ಹಲವೆಡೆ ಬ್ಲಡ್ ಬ್ಯಾಂಕ್‌ಗಳಲ್ಲಿ ರಕ್ತದ ಕೊರತೆ ಕಂಡುಬರುತ್ತಿದೆ.
ಕೆಎಂಸಿಆರ್‌ಐಗೂ ಕಳೆದೊಂದು ತಿಂಗಳಿನಿಂದ ರಕ್ತದ ಕೊರತೆ ಕಂಡು ಬಂದಿದೆ. ಹೆರಿಗೆ, ತುರ್ತು ಚಿಕಿತ್ಸೆ, ಅಪಘಾತ ವಿಭಾಗಗಳಿಗೆ ನಿತ್ಯವೂ ಹೆಚ್ಚಿನ ರಕ್ತದ ಬೇಡಿಕೆ ಇದ್ದೇ ಇರುತ್ತದೆ. ನಿತ್ಯ 40-50 ಯೂನಿಟ್ ರಕ್ತದ ಪ್ಯಾಕೆಟ್‌ಗಳನ್ನು ರೋಗಿಗಳಿಗೆ ನೀಡಲಾಗುತ್ತಿದೆ. ಆದರೆ, ಇತ್ತೀಚಿಗೆ ರಕ್ತದಾನಿಗಳ ಸಂಖ್ಯೆ ಕಡಿಮೆಯಾಗಿದ್ದು, ತೀವ್ರ ಸಮಸ್ಯೆಯಾಗುತ್ತಿದೆ.250 ಯೂನಿಟ್ ಮಾತ್ರ ಸಂಗ್ರಹ:
ನಗರದ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್‌ನಲ್ಲಿ ನಿತ್ಯ 90ರಿಂದ 100 ಯೂನಿಟ್ ರಕ್ತ ಸಂಗ್ರಹವಾದರೆ ಅಷ್ಟೇ ಪ್ರಮಾಣದಲ್ಲಿ ವಿತರಿಸಲಾಗುತ್ತಿತ್ತು. ಆದರೆ, ಪ್ರಸ್ತುತ 10ರಿಂದ 15 ಯೂನಿಟ್‌ಗಳಿಗೆ ಕುಸಿದಿದೆ. ಈಗ ರಕ್ತದ ಅಭಾವದ ನಡುವೆಯೂ ಮೊಬೈಲ್ ಕ್ಲಿನಿಕ್, ದಾನಿಗಳಿಗೆ ಫೋನ್ ಮಾಡಿ ರಕ್ತ ಪಡೆಯುವ ಕೆಲಸ ಮಾಡಲಾಗುತ್ತಿದೆ. 4-5 ದಾನಿಗಳು ಏಕಕಾಲಕ್ಕೆ ರಕ್ತದಾನ ಮಾಡಲು ಮುಂದೆ ಬಂದಲ್ಲಿ ಮೊಬೈಲ್ ಕ್ಲಿನಿಕ್ ಅನ್ನು ಅವರಿರುವ ಸ್ಥಳಕ್ಕೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಬೇಸಿಗೆಯಲ್ಲಿ ಏಕೆ ರಕ್ತದ ಕೊರತೆ?
ಕೋಟ್...
ಡಾ.ಈಶ್ವರ ಹಸಬಿ, ಕೆಎಂಸಿಆರ್‌ಐನ ವೈದ್ಯಕೀಯ ಅಧೀಕ್ಷಕ