ಕನ್ನಡಪ್ರಭ ವಾರ್ತೆ ಬೆಳಗಾವಿ
ಮುಖ್ಯಶಿಕ್ಷಕ ಮಡಿವಾಳರ ಅವರು ತಮ್ಮ ಶಾಲೆಗೆ ಹೆಚ್ಚುವರಿ ಕೊಠಡಿಗಳನ್ನು ಕಟ್ಟಿಸಿಕೊಡಬೇಕು ಎಂದು ಆಗ್ರಹಿಸಿ ಮೌನ ಪ್ರತಿಭಟನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಲಾಖೆಯ ಶಿಸ್ತನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ಮಡಿವಳರ ಅವರನ್ನು ಸೇವೆಯಿಂದ ಅಮಾನತು ಮಾಡಿ ಕ್ಷೇತ್ರ ಶಿಕ್ಷಣಾಧಕಾರಿ ಆದೇಶ ಹೊರಡಿಸಿದ್ದರು. ಪ್ರತಿಭಟನೆ ಮಾಡಿದವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಮೂಲಕ ಮಕ್ಕಳ ಶಿಕ್ಷಣದ ಹಕ್ಕನ್ನು ಹತ್ತಿಕ್ಕಲಾಗಿದೆ ಗ್ರಾಮೀಣ ಭಾಗದಲ್ಲಿ ಅದರಲ್ಲಿಯೂ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಕುಟುಂಬದಿಂದ ಬಂದ ಮಕ್ಕಳು ಹೆಚ್ಚಾಗಿ ಸರ್ಕಾರಿ ಶಾಲೆಗಳನ್ನೇ ಅವಲಂಬಿಸಿದ್ದಾರೆ. ಮುಖ್ಯ ಶಿಕ್ಷಕ ವೀರಣ್ಣ ಮಡಿವಾಳರ 9 ವರ್ಷಗಳಿಂದ ಶಾಲೆ ಅಭಿವೃದ್ಧಿಗೆ ಹೋರಾಟ ಮಾಡುತ್ತ ಬಂದಿದ್ದಾರೆ. ಶಿಕ್ಷಕರ ಈ ಕ್ರಮವನ್ನು ಆಯೋಗವು ಎತ್ತಿಹಿಡಿಯುತ್ತದೆ. ಅಲ್ಲದೇ, ಅವರನ್ನು ಸೇವೆಯಿಂದ ಅಮಾನತುಗೊಳಿಸಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಶಾಲೆಗಾಗಿ ಕೊಠಡಿ ಬೇಡಿಕೆ ಇಟ್ಟಿದ್ದು ನಿಯಮ ಬಾಹೀರವಾಗಲ್ಲ ಎಂದು ಆಯೋಗವು ಭಾವಿಸುತ್ತದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು ಕೈಗೊಂಡ ಕ್ರಮಗಳ ಮಾಹಿತಿಯನ್ನು, ಅಗತ್ಯ ದಾಖಲೆಗಳನ್ನು ನೇರವಾಗಿ ಮತ್ತು ಖುದ್ದಾಗಿ ಕಡ್ಡಾಯವಾಗಿಸಲ್ಲಿಸಬೇಕು ಎಂದು ಆಯೋಗವು ಹೇಳಿದೆ. ಸೆಕ್ಷನ್ 14(1) (ಎ) ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕಾಯ್ದೆ 2005ರ ಅನ್ವಯ ಈ ಸಮನ್ಸ್ ಜಾರಿಮಾಡಲಾಗಿದೆ.