ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಪಟ್ಟಣದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ೨೦೨೫-೨೬ನೇ ಶೈಕ್ಷಣಿಕ ವರ್ಷದಲ್ಲಿ ಹತ್ತನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದರು. ಚನ್ನರಾಯಪಟ್ಟಣ ಟೈಮ್ಸ್ ಪಿಯು ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ದಿನದಂದು ಆಯ್ದ ನಿಲ್ದಾಣಗಳಿಂದ ಉಚಿತವಾಗಿ ಬಸ್ ವ್ಯವಸ್ಥೆ ಇರುತ್ತದೆ. ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪರೀಕ್ಷೆಯು ಭಾನುವಾರ ಬೆಳಿಗ್ಗೆ ೧೦ ರಿಂದ ೧೧.೩೦ ರವರಿಗೆ ಹಾಗೂ ೧೧.೩೦ ರಿಂದ ಮಧ್ಯಾಹ್ನ ೧ ಗಂಟೆ ವರೆಗೆ ಎರಡು ವಿಭಾಗದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಪರೀಕ್ಷೆಯಲ್ಲಿ ಪಾಲ್ಗೊಂಡು ಅತ್ಯಧಿಕ ಅಂಕಗಳನ್ನು ಪಡೆದ ಆಯ್ದ ವಿದ್ಯಾರ್ಥಿಗಳು ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳಿಗೆ ಶೇಕಡಾ ೫೦ ವಿದ್ಯಾರ್ಥಿ ವೇತನ ಪಡೆಯಲಿದ್ದಾರೆ. ಜನವರಿ ೮ರ ಒಳಗಾಗಿ ಸ್ಕ್ಯಾನರ್ ಇಲ್ಲವೇ ಮೊ.ಸಂ-೯೭೩೧೩೩೮೦೮೩, ೯೯೦೧೩೧೭೦೬೭ ಹಾಗೂ ೬೩೬೩೮೭೨೦೦೯ ನಂಬರ್ ನ ವಾಟ್ಸಾಪ್ ಮೂಲಕ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ಮಾಹಿತಿ ನೀಡಿದರು.ಸುದ್ದಿಗೋಷ್ಠಿಯಲ್ಲಿ ಟೈಮ್ಸ್ ಪಿಯು ಕಾಲೇಜಿನ ಪ್ರಾಂಶುಪಾಲ ಸುನೀಲ್, ಆಡಳಿತ ಅಧಿಕಾರಿ ಸಂಜಯ್ ಹಾಗೂ ಶೈಕ್ಷಣಿಕ ಮುಖ್ಯಸ್ಥ ಶ್ರೀಕಂಠ ಇದ್ದರು.