ಮಸ್ತಕಾಭಿಷೇಕಕ್ಕೆ ಸಮನ್ವಯದ ಸಿದ್ಧತೆ: ಸುನೀಲ್ ಸೂಚನೆ

KannadaprabhaNewsNetwork |  
Published : Nov 24, 2026, 01:30 AM IST
ಮಹಾಮಸ್ತಕಾಭಿಷೇಕದ ಪೂರ್ವಸಿದ್ಧತೆ ಕುರಿತು ಸೋಮವಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸರ್ಕಾರಿ ಮಟ್ಟದ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು. ಶಾಸಕ ವಿ. ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಸಹಾಯಕ ಆಯುಕ್ತ ಮಹೇಶ್ ಎಸ್., ಮಹಾಮಸ್ತಕಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. | Kannada Prabha

ಸಾರಾಂಶ

ಐತಿಹಾಸಿಕ ಕಾರ್ಕಳ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಸಿದ್ಧತೆಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದು ಶಾಸಕ ವಿ. ಸುನೀಲ್ ಕುಮಾರ್ ಸೂಚಿಸಿದರು.

ಕಾರ್ಕಳ: ಐತಿಹಾಸಿಕ ಕಾರ್ಕಳ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಸಿದ್ಧತೆಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದು ಶಾಸಕ ವಿ. ಸುನೀಲ್ ಕುಮಾರ್ ಸೂಚಿಸಿದರು.

ಮಹಾಮಸ್ತಕಾಭಿಷೇಕದ ಪೂರ್ವಸಿದ್ಧತೆ ಕುರಿತು ಸೋಮವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸರ್ಕಾರಿ ಮಟ್ಟದ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.

ಮಹೋತ್ಸವದ ಸಂದರ್ಭದಲ್ಲಿ ಕಾರ್ಕಳ ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಸಂಚಾರ ವ್ಯವಸ್ಥೆಗೆ ವಿಶೇಷ ಯೋಜನೆ ರೂಪಿಸಬೇಕು. ಕೇಂದ್ರ ಗೃಹ ಸಚಿವರು ಹಾಗೂ ಮುಖ್ಯಮಂತ್ರಿ ಆಗಮಿಸುವ ಸಾಧ್ಯತೆಯಿರುವುದರಿಂದ ಭದ್ರತೆ ಮತ್ತು ಪಾರ್ಕಿಂಗ್ ವ್ಯವಸ್ಥೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆಗಾಗಿ ಪುರಸಭೆಯಿಂದ ಸುಮಾರು 100 ತಾತ್ಕಾಲಿಕ ಕಾರ್ಮಿಕರನ್ನು ನಿಯೋಜಿಸಬೇಕು. ಎಸ್‌ಎಲ್‌ಆರ್‌ಎಂ ಘಟಕ ಹಾಗೂ ಗ್ರಾಮ ಪಂಚಾಯಿತಿಗಳ ಸಹಕಾರ ಪಡೆಯಬೇಕು. ಸುಮಾರು 110 ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಿ, ನಿರಂತರ ಸ್ವಚ್ಛತೆ ಹಾಗೂ ನಿರ್ವಹಣೆಗೆ ವ್ಯವಸ್ಥೆ ಕಲ್ಪಿಸಬೇಕು ಎಂದರು.

ಭಕ್ತರಿಗೆ ನಿರಂತರ ಕುಡಿಯುವ ನೀರು ಪೂರೈಸಲು ಮುಂಡ್ಲಿಯಿಂದ ನೀರು ತರುವ ಕಾಮಗಾರಿ ಪೂರ್ಣಗೊಳಿಸಬೇಕು. ಆರು ಖಾಸಗಿ ಬಾವಿಗಳ ನೀರನ್ನೂ ಬಳಸಿಕೊಳ್ಳಬೇಕು. ಪಾರ್ಕಿಂಗ್ ಹಾಗೂ ಜನಸಂದಣಿ ಪ್ರದೇಶಗಳಲ್ಲಿ 5 ಸಾವಿರದಿಂದ 15 ಸಾವಿರ ಲೀಟರ್ ಸಾಮರ್ಥ್ಯದ ತಾತ್ಕಾಲಿಕ ನೀರಿನ ಟ್ಯಾಂಕ್‌ಗಳನ್ನು ಅಳವಡಿಸುವ ಕುರಿತು ಪರಿಶೀಲಿಸಬೇಕು. ಪುರಸಭೆ ಹಾಗೂ ಇಬ್ಬರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನೀರಿನ ವ್ಯವಸ್ಥೆಯ ಜವಾಬ್ದಾರಿ ವಹಿಸಬೇಕು ಎಂದು ತಿಳಿಸಿದರು.

ಶಾಲೆಗೆ ರಜೆಗೆ ಚಿಂತನೆ:

ಮಹೋತ್ಸವದ ಪ್ರಮುಖ ದಿನಗಳಾದ 24, 25 ಮತ್ತು 26ರಂದು ಶಾಲೆಗಳಿಗೆ ರಜೆ ನೀಡುವ ಸಾಧ್ಯತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರಿಶೀಲಿಸಬೇಕು. ಶಾಲಾ-ಕಾಲೇಜುಗಳ ಸಹಕಾರದೊಂದಿಗೆ ಮಕ್ಕಳ ಕಾರ್ಯಕ್ರಮಗಳನ್ನು ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಮಹಾಮಸ್ತಕಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, 12 ವರ್ಷಗಳಿಗೊಮ್ಮೆ ನಡೆಯುವ ಈ ಐತಿಹಾಸಿಕ ಮಹೋತ್ಸವವನ್ನು ಯಶಸ್ವಿಗೊಳಿಸಲು ಸರ್ಕಾರ, ಜಿಲ್ಲಾಡಳಿತ, ವಿವಿಧ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರ ಅತ್ಯಗತ್ಯ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ ಪ್ರತಿಯೊಂದು ಇಲಾಖೆಯೂ ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾತನಾಡಿ, ನಾಲ್ಕು ಜಿಲ್ಲೆಗಳ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗುವುದು ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಸಹಾಯಕ ಆಯುಕ್ತ ಮಹೇಶ್ ಎಸ್., ಮಹಾಮಸ್ತಕಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು Fದ್ದರು. ಸಮಿತಿ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಜೈನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಇಶಿತಾ ಗುಪ್ತ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಿತಿ ಪದಾಧಿಕಾರಿಗಳು ಭಾಗವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆಯ ನಿಲಯ ಮೇಲ್ವಿಚಾರಕಿ ಚೇತನಾ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು.

ಸ್ಥಳ ಪರಿಶೀಲನೆ: ಸಭೆಯ ಬಳಿಕ ಶಾಸಕ ವಿ. ಸುನೀಲ್ ಕುಮಾರ್, ಸಮಿತಿ ಕಾರ್ಯಾಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹಾಗೂ ಅಧಿಕಾರಿಗಳ ತಂಡ ಗೊಮ್ಮಟಬೆಟ್ಟ ಸೇರಿದಂತೆ ಮಹೋತ್ಸವಕ್ಕೆ ಸಂಬಂಧಿಸಿದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಸಮಿತಿ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಜೈನ್, ಸಹಾಯಕ ಆಯುಕ್ತ ಮಹೇಶ್ ಎಸ್., ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಇಶಿತಾ ಗುಪ್ತ ಸೇರಿದಂತೆ ಅಧಿಕಾರಿಗಳು ಸ್ಥಳ ಪರಿಶೀಲನೆಯಲ್ಲಿ ಪಾಲ್ಗೊಂಡಿದ್ದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾರಂಟಿ ಯೋಜನೆಯಡಿ ದ.ಕ. ಜಿಲ್ಲೆಗೆ 4 ಸಾವಿರ ಕೋಟಿ ರು. ವ್ಯಯ: ಭರತ್‌
ಮೇಕೋಡು ಪ್ರಜಾಸೇವಾ ಆಂದೋಲನ