ಸುನೀಲ್ ಕುಮಾರ್‌ ಮೊದಲು ನೈತಿಕತೆಯ ಬಗ್ಗೆ ತಿಳಿದುಕೊಳ್ಳಲಿ: ಹೆಬ್ಬಾಳ್ಕರ್

KannadaprabhaNewsNetwork |  
Published : Jun 22, 2025, 01:18 AM IST
21ತಿರುಗೇಟು | Kannada Prabha

ಸಾರಾಂಶ

ಸಚಿವರು ತಮ್ಮ ಇಲಾಖೆಯ ವ್ಯಾಪ್ತಿಯಲ್ಲಿ ಎಷ್ಟು ಅಂಗನವಾಡಿಗಳಿವೆ ಲೆಕ್ಕ ಕೊಡಿ ಎಂದು ಸುನೀಲ್ ಕುಮಾರ್ ಕೇಳಿದ್ದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಸುಮಾರು 69,000 ಅಂಗನವಾಡಿಗಳಿವೆ. 12,000 ಅಂಗನವಾಡಿಗಳು ಬಾಡಿಗೆ ಕಟ್ಟಡಗಳಲ್ಲಿವೆ. ನನ್ನ ಇಲಾಖೆ ಬಗ್ಗೆ ಕೇಳ್ತೀರಾ? ಉಡುಪಿಗೆ ಬನ್ನಿ ನಿಮಗೆ ನಾನು ಎಲ್ಲ ಡಿಟೇಲ್ಸ್ ಕೊಡುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಚಕ್ರವರ್ತಿ ಸೂಲಿಬೆಲೆ ಬಗ್ಗೆ ಮಾತನಾಡುವ ನೈತಿಕತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಇಲ್ಲ ಎಂದು ಹೇಳಿರುವ ಶಾಸಕ ಸುನೀಲ್ ಕುಮಾರ್ ಅವರಿಗೆ ಸಚಿವೆ ತಿರುಗೇಟು ನೀಡಿದ್ದು, ಸುನಿಲ್ ಕುಮಾರ್ ಅವರಿಂದ ನಾನು ನೈತಿಕತೆಯ ಪಾಠ ಕಲಿಯಬೇಕಿಲ್ಲ.‌ ನೈತಿಕತೆ ಎಂದರೇನು? ಅವರು ಮೊದಲು ನೈತಿಕತೆಯ ಬಗ್ಗೆ ತಿಳಿದುಕೊಂಡು ಮಾತನಾಡಲಿ ಎಂದು ಹೇಳಿದ್ದಾರೆ.ಉಡುಪಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸುನೀಲ್ ಕುಮಾರ್ ಬಹಳ ಚಂದ ಮಾತುಗಾರರು, ಅವರನ್ನು ಅವರೇ ಬುದ್ಧಿವಂತ, ಸರ್ವಜ್ಞ ಎಂದು ತಿಳಿದುಕೊಂಡಿದ್ದಾರೆ. ಬೇರೆಯವರನ್ನು ದಡ್ಡರು ಎಂದು ತಿಳಿದುಕೊಂಡಿದ್ದಾರೆ ಎಂದು ಕಿಡಿಕಾರಿದರು‌.ಸಚಿವರು ತಮ್ಮ ಇಲಾಖೆಯ ವ್ಯಾಪ್ತಿಯಲ್ಲಿ ಎಷ್ಟು ಅಂಗನವಾಡಿಗಳಿವೆ ಲೆಕ್ಕ ಕೊಡಿ ಎಂದು ಸುನೀಲ್ ಕುಮಾರ್ ಕೇಳಿದ್ದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಸುಮಾರು 69,000 ಅಂಗನವಾಡಿಗಳಿವೆ. 12,000 ಅಂಗನವಾಡಿಗಳು ಬಾಡಿಗೆ ಕಟ್ಟಡಗಳಲ್ಲಿವೆ. ನನ್ನ ಇಲಾಖೆ ಬಗ್ಗೆ ಕೇಳ್ತೀರಾ? ಉಡುಪಿಗೆ ಬನ್ನಿ ನಿಮಗೆ ನಾನು ಎಲ್ಲ ಡಿಟೇಲ್ಸ್ ಕೊಡುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದರು.ರಾಜ್ಯದಲ್ಲಿ ಅಂಗನವಾಡಿಗಳು ಎಷ್ಟಿವೆ. ಕಾರ್ಯಕರ್ತರು ಎಷ್ಟಿದ್ದಾರೆ ಎಲ್ಲ ನನಗೆ ಗೊತ್ತು. ಹಳ್ಳಿಯಲ್ಲಿ ಎಷ್ಟಿವೆ? ಪೇಟೆಯಲ್ಲಿ ಎಷ್ಟಿದೆ? ಎಷ್ಟು ಸೋರುತ್ತಿದೆ? ಎಲ್ಲವೂ ಗೊತ್ತು. ನಿಮ್ಮ ಕ್ಷೇತ್ರದಲ್ಲಿ ಎಷ್ಟು ಇದೆ ಅನ್ನೋದು ಗೊತ್ತು ಎಂದರು‌.* ಕೆಲಸ ಇಲ್ಲ, ಪ್ರತಿಭಟನೆ ಮಾಡ್ಲಿ:ವಿರೋಧ ಪಕ್ಷದವರಿಗೆ ಮಾಡಲು ಬೇರೆ ಕೆಲಸ ಇಲ್ಲ, ಅದಕ್ಕೆ ಪ್ರತಿಭಟನೆ ಮಾಡಲಿ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲು ತರಲು ಅವರಿಂದ ಆಗಿಲ್ಲ, ನರೇಗಾ ಹಣ ಬಿಡುಗಡೆಯಾಗಿಲ್ಲ, ಅಭಿವೃದ್ಧಿಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ, ಬಿಜೆಪಿ ಕೇಂದ್ರ ಸರ್ಕಾರದ, ಅಸಮರ್ಥ ಸಂಸದರ ವಿರುದ್ಧ ಪ್ರತಿಭಟನೆ ಮಾಡಲಿ ಎಂದರು.* ಯಾರನ್ನೂ ಟಾರ್ಗೆಟ್ ಮಾಡಿಲ್ಲ:ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಅವರು ಬಾಗಲಕೋಟೆಗೆ ಹೋಗುವುದಕ್ಕೆ 3 ತಿಂಗಳು ಬ್ಯಾನ್ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಯಾವುದೇ ವಾಗ್ಮಿಗಳನ್ನು, ಭಾಷಣಕಾರರನ್ನು ನಾವು ಟಾರ್ಗೆಟ್ ಮಾಡುತ್ತಿಲ್ಲ‌. ಸಮಾಜದ ಕೋಮು ಸೌಹಾರ್ದತೆ ಕೆಡಿಸಬಾರದು, ಸಮಾಜ ಒಡೆಯಬಾರದು. ಹಾಗೆ ಮಾಡುವವರ ವಿರುದ್ಧ ಕಾನೂನು ಕ್ರಮ ಆಗುತ್ತದೆ. ಶ್ರೀಕಾಂತ ಶೆಟ್ಟಿ ಹಿಂದಿನ ಭಾಷಣಗಳನ್ನು ತೆಗೆದು ನೋಡಬೇಕು. ಆಗ ಎಲ್ಲ ವಿಚಾರ ಅರಿವಾಗುತ್ತೆ ಎಂದು ಹೇಳಿದರು .

PREV

Recommended Stories

ದಲಿತರಿಗೆ ದಿಲ್ಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ : ಜಾರಕಿಹೊಳಿ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ