ಕನ್ನಡಪ್ರಭ ವಾರ್ತೆ ಕಾರ್ಕಳ
ಈ ವೇಳೆ ಮಾತನಾಡಿದರ ಸುನಿಲ್ ಕುಮಾರ್, ರಾಜ್ಯಾದ್ಯಂತ ಆಯಾ ತಾಲೂಕು ಕಚೇರಿಗಳಲ್ಲಿ ಅನಿರ್ದಿಷ್ಟಾವಧಿ ಮುಷ್ಕರವು ನಡೆಯುತ್ತಿದೆ. ಆದರೂ ಯಾವುದೇ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಸೌಜನ್ಯಕ್ಕೂ ಭೇಟಿ ನೀಡಿ ಅಧಿಕಾರಿಗಳ ಬೇಡಿಕೆಗಳನ್ನು ಆಲಿಸಿಲ್ಲ. ಸಂಬಂಧಪಟ್ಟ ಇಲಾಖಾ ಸಚಿವರು ಹಾಗೂ ಸರ್ಕಾರ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸದಂತೆ ವರ್ತಿಸುತ್ತಿದ್ದು, ಇದೊಂದು ಸಂವೇದನಾಶೀಲ ರಹಿತ ಸರ್ಕಾರವಾಗಿದೆ. ಮುಷ್ಕರ ಇದೇ ರೀತಿ ಮುಂದುವರಿದರೆ ಸಾರ್ವಜನಿಕರಿಗೆ ದೊರೆಯುವಂತ ಸೇವೆಯಲ್ಲಿ ವ್ಯತ್ಯಯ ಕಂಡುಬಂದು ತೊಂದರೆಗೊಳಗಾಗುತ್ತಾರೆ. ಇದಕ್ಕೆ ಸರ್ಕಾರವೇ ನೇರ ಹೊಣೆ ಎಂದರು.
ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಿ, ಶೀಘ್ರ ಸರ್ಕಾರದ ಗಮನಕ್ಕೆ ತರುತ್ತೇನೆ, ಮಾತ್ರವಲ್ಲದೇ, ಮುಂದಿನ ಅಧಿವೇಶನದಲ್ಲಿ ಈ ಕುರಿತು ಸಮಗ್ರವಾಗಿ ಚರ್ಚಿಸಿ, ಸರ್ಕಾರದ ಗಮನ ಸೆಳೆಯುತ್ತೇನೆ ಎಂಬ ಭರವಸೆಯನ್ನು ನೀಡಿದರು. ಸರ್ಕಾರ ಎಲ್ಲ ಬೇಡಿಕೆಗಳನ್ನು ಪರಿಶೀಲಿಸಿ, ಶೀಘ್ರವೇ ಪರಿಹಾರ ಕ್ರಮ ಕೈಗೊಂಡು ಪ್ರತಿಭಟನೆ ಹಿಂಪಡೆಯುವಂತೆ ಪ್ರತಿಭಟನಾಕಾರರ ಮನವೊಲಿಸಿ, ಸಾರ್ವಜನಿಕರಿಗೆ ಸೂಕ್ತ ಸೇವೆ ಒದಗುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.