ಸುಂಟಿಕೊಪ್ಪ: ಜಾಗೃತಿ ಜಾಥಾ, ಸ್ವಚ್ಛತಾ ಕಾರ್ಯ

KannadaprabhaNewsNetwork |  
Published : Oct 03, 2024, 01:24 AM IST
ಚಿತ್ರ.4: ಗಾಂಧಿ ಜಯಂತಿಯ ಹಾಗೂ ಲಾಲೂಬಹದ್ದೂರ್ ಶಾಸ್ತಿçಯವರ ಜನ್ಮ ದಿನಾಚರಣೆ ಅಂಗವಾಗಿ ವಿಶೇಷ ಶಿಬಿರದ ಶಿಬಿರಾರ್ಥಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಸದಸ್ಯರು, ಸುಂಟಿಕೊಪ್ಪ ಲಯನ್ಸ್ ಸಂಸ್ಥೆ  ಪಟ್ಟಣದ ಮುಖ್ಯ ಬೀದಿಗಳಲ್ಲಿ ತೆರಳಿ ಜಾಗೃತಿ ಜಾಥ ಹಾಗೂ ಸ್ವಚ್ಛಾತ ಕಾರ್ಯವನ್ನು ನಡೆಸುತ್ತಿರುವುದು. | Kannada Prabha

ಸಾರಾಂಶ

ಗಾಂಧಿ ಜಯಂತಿ ಹಾಗೂ ಲಾಲೂಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ ಅಂಗವಾಗಿ ವಿಶೇಷ ಶಿಬಿರದ ಶಿಬಿರಾರ್ಥಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಸದಸ್ಯರು, ಸುಂಟಿಕೊಪ್ಪ ಲಯನ್ಸ್ ಸಂಸ್ಥೆ ಪಟ್ಟಣದ ಮುಖ್ಯ ಬೀದಿಗಳಲ್ಲಿ ತೆರಳಿ ಜಾಗೃತಿ ಜಾಥಾ ಹಾಗೂ ಸ್ವಚ್ಛತಾ ಕಾರ್ಯ ನಡೆಸಿದರು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಗಾಂಧಿ ಜಯಂತಿ ಹಾಗೂ ಲಾಲೂಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ ಅಂಗವಾಗಿ ವಿಶೇಷ ಶಿಬಿರದ ಶಿಬಿರಾರ್ಥಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಸದಸ್ಯರು, ಸುಂಟಿಕೊಪ್ಪ ಲಯನ್ಸ್ ಸಂಸ್ಥೆ ಪಟ್ಟಣದ ಮುಖ್ಯ ಬೀದಿಗಳಲ್ಲಿ ತೆರಳಿ ಜಾಗೃತಿ ಜಾಥಾ ಹಾಗೂ ಸ್ವಚ್ಛತಾ ಕಾರ್ಯ ನಡೆಸಿದರು.

ಮಾದಾಪುರ ಶ್ರೀಮತಿ ಡಿ ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದ ಶಿಬಿರಾರ್ಥಿಗಳ ಒಂದು ತಂಡ ಪಟ್ಟಣದಲ್ಲಿ ಕಾರ್ಯಾಚರಿಸುತ್ತಿರುವ ವಾಣಿಜ್ಯ ಮಳಿಗೆ, ಕಚೇರಿಗಳು, ಸಂಘ ಸಂಸ್ಥೆ ಹಾಗೂ ವಾಸದ ಮನೆಗಳಿಗೆ ತೆರಳಿ ಸ್ವಚ್ಛತೆಯ ಬಗ್ಗೆ ಭಿತ್ತಿ ಪತ್ರಗಳನ್ನು ವಿತರಿಸುವ ಮೂಲಕ ಸಾರ್ವಜನಿಕರಲ್ಲಿ ಆರಿವು ಮೂಡಿಸಿತು.ಮತ್ತೊಂದು ವಿದ್ಯಾರ್ಥಿಗಳ ತಂಡ ಮತ್ತು ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು ಪಟ್ಟಣದಿಂದ ಗದ್ದೆಹಳ್ಳದವರೆಗೆ ತೆರಳಿದ್ದ ತಂಡ ಪ್ರಮುಖ ಬೀದಿಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲಿ, ಕಸ ಕಡ್ಡಿಗಳನ್ನು ಸ್ವಚ್ಛಗೊಳಿಸಿದರಲ್ಲದೆ ಸಾರ್ವಜನಿಕರಲ್ಲಿ ಸ್ವಚ್ಛತೆಯ ಬಗ್ಗೆ ಆರಿವು ಮೂಡಿಸಿದರು.

ಸುಂಟಿಕೊಪ್ಪ ಗ್ರಾ.ಪಂ. ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್, ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಮಂಜುನಾಥ್, ರಫೀಕ್‌ ಖಾನ್, ಶಿಬಿರಾಧಿಕಾರಿ ಹಾಗೂ ಉಪನ್ಯಾಸಕಿ ಮನೋಹರ್ ಎನ್.ಎನ್. ಮತ್ತು ಮಾದಾಪುರ ಶ್ರೀಮತಿ ಡಿ ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಪ್ರಮೀಳಾ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಾಲಹಳ್ಳಿ ಕೆಳಸೇತುವೆ ನಿರ್ಮಾಣ ಸಂಬಂಧ ಶಾಸಕರ ಸಭೆ-ಮಿ. ಮುನಿ ಪ್ರಶ್ನೆಗೆ ಉತ್ತರಿಸಲ್ಲ: ಡಿಸಿಎಂ
ಸುದ್ದಿ ಓದದಿದ್ದರೆ ಡಿಜಿಟಲ್‌ ಅರೆಸ್ಟ್‌ ಆಗ್ತಿರಿ!