ಸುಂಟಿಕೊಪ್ಪ: ಗಣೇಶ ಮೂರ್ತಿ ವಿಸರ್ಜನೆ ಶೋಭಾಯಾತ್ರೆ

KannadaprabhaNewsNetwork |  
Published : Sep 22, 2026, 03:00 AM IST
ಗಣೇಶ ವಿಸರ್ಜನೆ | Kannada Prabha

ಸಾರಾಂಶ

ಗಣೇಶ ಚತುರ್ಥಿ ಅಂಗವಾಗಿ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗಳ ವಿಸರ್ಜನೋತ್ಸವ ಭಾನುವಾರ ಅದ್ಧೂರಿಯಾಗಿ ನಡೆಯಿತು.

ಸುಂಟಿಕೊಪ್ಪ : ಗಣೇಶ ಚತುರ್ಥಿ ಅಂಗವಾಗಿ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗಳ ವಿಸರ್ಜನೋತ್ಸವ ಭಾನುವಾರ ಅದ್ಧೂರಿಯಾಗಿ ನಡೆಯಿತು.ಭೂತನಕಾಡು ಓಂ ಶಕ್ತಿ ಯುವಕ ಸಂಘದ ವತಿಯಿಂದ ಸಮುದಾಯ ಭವನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯ ವಿಸರ್ಜನ ಮೆರವಣಿಗೆಯಲ್ಲಿ ತೋಟದ ಕಾರ್ಮಿಕರು ಸೇರಿದಂತೆ ನೂರಾರು ಭಕ್ತರು ಪಾಲ್ಗೊಂಡು ಪೂಜೆ ಸಲ್ಲಿಸಿ, ಹರಕೆ ಸಮರ್ಪಿಸಿ ಸಂಭ್ರಮಿಸಿದರು.

ಹೊರೂರು ಮಠದಲ್ಲಿ ಪ್ರತಿಷ್ಠಾಪಿಸಲಾಗಿದ್ದ ೨೫ನೇ ವರ್ಷದ ಸಾರ್ವಜನಿಕ ಗಣೇಶ ಮೂರ್ತಿಯ ವಿಸರ್ಜನೋತ್ಸವವೂ ವಿಜೃಂಭಣೆಯಿಂದ ನಡೆಯಿತು. ಆಕರ್ಷಕ ಟ್ಯಾಬ್ಲೋ ಹಾಗೂ ಯುವಕ-ಯುವತಿಯರ ನೃತ್ಯ ಮೆರವಣಿಗೆಗೆ ಮೆರುಗು ನೀಡಿತು.

ಗುಂಡುಗುಟ್ಟಿ ವಿನಾಯಕ ಸೇವಾ ಸಮಿತಿ ವತಿಯಿಂದ ಶ್ರೀ ರಕ್ತೇಶ್ವರಿ-ಚಾಮುಂಡೇಶ್ವರಿ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಿ-ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆ ನಡೆಯಿತು. ಏಳು ದಿನಗಳ ಕಾಲ ಪ್ರಧಾನ ಅರ್ಚಕ ನಾರಾಯಣ ಭಟ್ ನೇತೃತ್ವದಲ್ಲಿ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ನೆರವೇರಿಸಲಾಗಿತ್ತು. ವಿದ್ಯುತ್ ದೀಪಗಳಿಂದ ಅಲಂಕರಿಸಿದ ಮಂಟಪದಲ್ಲಿ ಮೂರ್ತಿಯನ್ನು ಇರಿಸಿ ಡಿಜೆ ಸಂಗೀತದೊಂದಿಗೆ ಮೆರವಣಿಗೆ ನಡೆಸಿ ಹರದೂರು ಹೊಳೆಯಲ್ಲಿ ವಿಸರ್ಜಿಸಲಾಯಿತು.

ನಾರ್ಗಾಣೆ ಗ್ರಾಮದ ಶ್ರೀದೇವಿಯ ವಿನಾಯಕ ಸೇವಾ ಸಮಿತಿಯ ೧೩ನೇ ವರ್ಷದ ಗೌರಿ-ಗಣೇಶೋತ್ಸವದ ವಿಸರ್ಜನೋತ್ಸವವೂ ಅದ್ಧೂರಿಯಾಗಿ ನಡೆಯಿತು. ಅರ್ಚಕರಾದ ಅವಿನಾಶ್ ಆರಾಧ್ಯ, ಲೋಕೇಶ್ ಆರಾಧ್ಯ ಹಾಗೂ ಪ್ರಕಾಶ್ ಆರಾಧ್ಯ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದವು. ಗ್ರಾಮದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಶ್ರೀದೇವಿ ಕೆರೆಯಲ್ಲಿ ಮೂರ್ತಿ ವಿಸರ್ಜಿಸಲಾಯಿತು.

ಪಂ.ಮಾಜಿ ಸದಸ್ಯ ಗಿರಿಯಪ್ಪಮನೆ ನಿವಾಸಿ ಅಂಬಚ್ಚು ತಂಪುಪಾನಿಯವನ್ನು ವಿತರಿಸಿದರು.

ವಿಸರ್ಜನೋತ್ಸವದ ವೇಳೆ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಸಿಸಿ ಬ್ಯಾಂಕ್‌ 134 ಹುದ್ದೆಗಳ ನೇಮಕಾತಿಗೆ ಶೀಘ್ರ
ತಾಳಿಕೋಟೆ ಬಂದ್; ರೈತರ ಬೃಹತ್‌ ಪ್ರತಿಭಟನೆ