ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಇಲ್ಲಿನ ಲೋಟಸ್ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಮಾರುಕಟ್ಟೆ ಸೇರಿದಂತೆ ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ರು. 40 ಲಕ್ಷ ಮೊತ್ತದ ವಿವಿಧ ಕಾಮಗಾರಿಗಳಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಇತ್ತೀಚೆಗೆ ಮುಖ್ಯಮಂತ್ರಿ ರಾಜ್ಯದ ಎಲ್ಲ ಶಾಸಕರಿಗೂ ತಲಾ 10 ಕೋಟಿ ರು.ನಂತೆ ನೀಡಿದ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಹಮ್ಮಿಕೊಳ್ಳಲಾಗುತ್ತಿದೆ. ಈ ಮೊದಲೇ ಮಂಜೂರಾಗಿರುವ ಆರೋಗ್ಯ ಇಲಾಖೆಯ ನಿಗದಿತ ಅನುದಾನ ಬರ ಪರಿಹಾರ, ಮಳೆ ಪರಿಹಾರ, ತಾಲೂಕು ಪಂಚಾಯಿತಿ ಅನುದಾನದ ಅಡಿಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶುಂಕುಸ್ಥಾಪನೆ ನೇರವೇರಿಸಲಾಗಿದೆ ಎಂದು ವಿವರಿಸಿದರು.ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 7 ವಾರ್ಡ್‌ಗಳಿದ್ದು, ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದೂ ಇನ್ನೂ ಅಭಿವೃದ್ಧಿ ಕಾಣಬೇಕಾಗಿದೆ. ಆನೇಕ ರಸ್ತೆಗಳು, ಬಸ್ ನಿಲ್ದಾಣ, ಪ್ರವಾಸಿ ಮಂದಿರ ಹಾಗೂ ಸುಸ್ಸಜಿತ ಮಾರುಕಟ್ಟೆ ಸೇರಿದಂತೆ ಹಲವಷ್ಟು ಅಭಿವೃದ್ಧಿ ಕಾಮಗಾರಿಗಳು ಆಗಬೇಕಾಗಿದೆ. ಇವೆಲ್ಲವನ್ನೂ ಮುಂದಿನ ದಿನಗಳಲ್ಲಿ ಹಂತಗಳಲ್ಲಿ ಪೂರ್ಣಗೊಳಿಸಲಾಗುವುದೆಂದು ಭರವಸೆ ನೀಡಿದರು.