ಸುಂಟಿಕೊಪ್ಪ: ಮುತ್ತಪ್ಪ ದೇವರ ಪುತ್ತರಿ ವೆಳ್ಳಾಟಂ

KannadaprabhaNewsNetwork |  
Published : Dec 20, 2023, 01:15 AM IST
ಭಾನುವಾರ ರಾತ್ರಿ ಮುತ್ತಪ್ಪ ದೇವರ ಪುತ್ತರಿ ವೆಳ್ಳಾಟಂ | Kannada Prabha

ಸಾರಾಂಶ

ಸಂಜೆ ಮುತ್ತಪ್ಪ ದೇವರ ಮಲೆ ಇಳಿಸುವಿಕೆ ನಡೆಯಿತು. ನಂತರ ರಾತ್ರಿ 10 ಗಂಟೆಯವರೆಗೂ ಮುತ್ತಪ್ಪ ವೆಳ್ಳಾಟಂ ನಡೆಯಿತು. ನಂತರ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯದಲ್ಲಿ ವಿಶೇಷ ಪೂಜೆ, ಮಹಾ ಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಭಕ್ತರಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.

ಸುಂಟಿಕೊಪ್ಪ: ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಸ್ಥಾನ ಸಮಿತಿ ವತಿಯಿಂದ ಭಾನುವಾರ ರಾತ್ರಿ ಮುತ್ತಪ್ಪ ದೇವರ ಪುತ್ತರಿ ವೆಳ್ಳಾಟಂ ಶ್ರದ್ಧಾಭಕ್ತಿಯಿಂದ ನಡೆಯಿತು.

ಸಂಜೆ ಮುತ್ತಪ್ಪ ದೇವರ ಮಲೆ ಇಳಿಸುವಿಕೆ ನಡೆಯಿತು. ನಂತರ ರಾತ್ರಿ 10 ಗಂಟೆಯವರೆಗೂ ಮುತ್ತಪ್ಪ ವೆಳ್ಳಾಟಂ ನಡೆಯಿತು. ನಂತರ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯದಲ್ಲಿ ವಿಶೇಷ ಪೂಜೆ, ಮಹಾ ಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಭಕ್ತರಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ನಂತರ ಕುಂದನ ನೃತ್ಯಾಲಯ ತಂಡದಿಂದ ನಡೆದ ಅತ್ಯಕರ್ಷವಾದ ನೃತ್ಯ ವೈವಿಧ್ಯಗಳು ಭಕ್ತರನ್ನು ಆಕರ್ಷಿಸಿದವು.ಈ ಸಂದರ್ಭ ದೇವಾಲಯ ಸಮಿತಿಯ ಅಧ್ಯಕ್ಷ ಪಟ್ಟೆಮನೆ ಉದಯಕುಮಾರ್, ರಮೇಶ್ ಪಿಳ್ಳೆ, ಮಾಗಲು ವಸಂತ, ಶ್ರೀನಿವಾಸ್, ಪಿ.ಸಿ. ಮೋಹನ ಮುತ್ತಪ್ಪ ದೇವಾಲಯದ ಪೂಜಾರಿ ಶಿವರಾಮು, ಚಾಮುಂಡೇಶ್ವರಿ ದೇವಾಲಯದ ಮುಖ್ಯ ಅರ್ಚಕ ಮಂಜುನಾಥ್ ಉಡುಪ ಸೇರಿದಂತೆ ಸಮಿತಿ ಸದಸ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗು ಸಾವಿನ ಶಾಕ್‌ನಿಂದ ತಾಯಿಯೂ ಆತ್ಮ*ತ್ಯೆ
ಗ್ಯಾಸ್‌ಗಾಗಿ ಆಟೋ ಚಾಲಕರ ಯುದ್ಧ! - ಬಂಕ್‌ಗಳ ಮುಂದೆ ರಾತ್ರಿ ಇಡೀ ಜಾಗರಣೆ