ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
------------------------------------
ಗಣತಿಯಲ್ಲಿ "ಗೌಡ " ನಮೂದಿಸಲು ಮನವಿಕನ್ನಡಪ್ರಭ ವಾರ್ತೆ ಸುಂಟಿಕೊಪ್ಪಅರೆಭಾಷೆ ಗೌಡರು ಗಣತಿಯಲ್ಲಿ ಜಾತಿ ಗೌಡ ಎಂದು ನಮೂದಿಸಲು ಸುಂಟಿಕೊಪ್ಪ ಗೌಡ ಸಮಾಜ ಮತ್ತು ಸಂಘಟನೆಗಳ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.ಪ್ರಸ್ತುತ ನಡೆಯಲಿರುವ ಕರ್ನಾಟಕ ರಾಜ್ಯ ಸರ್ಕಾರದ ಸಾಮಾಜಿಕ, ಆರ್ಥಿಕ, ಮತ್ತು ಶೈಕ್ಷಣಿಕ ಗಣತಿಯಲ್ಲಿ ಮತ್ತು ಮುಂದೆ ನಡೆಯಲಿರುವ ಕೇಂದ್ರ ಸರ್ಕಾರದ ಜಾತಿ ಗಣತಿಯಲ್ಲಿ ಜಾತಿಯ ಕಲಾಂನಲ್ಲಿ ಗೌಡ (ಗೌಡ)ಎಂದು, ಉಪಜಾತಿ ಅರೆಭಾಷೆ ಗೌಡ, ಮಾತೃ ಭಾಷೆ ಅರೆಭಾಷೆ ಎಂದು ಎಲ್ಲಾ ಅರೆಭಾಷೆ ಗೌಡರು ನಮೂದಿಸಬೇಕು ಎಂದು ಸುಂಟಿಕೊಪ್ಪ ಗೌಡ ಸಮಾಜದ ಅಧ್ಯಕ್ಷರಾದ ಕುಂಜಿಲನ ಮಂಜುನಾಥ್ ಮನವಿ ಮಾಡಿದರು.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೂಲತಃ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ. ಆದರೆ ಅರೆಭಾಷೆ ಗೌಡರ ಶೈಕ್ಷಣಿಕ ಮತ್ತು ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ಗೌಡ ಎಂದೇ ನಮೂದಾಗಿರುತ್ತದೆ. ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಈ ದಿಸೆಯಲ್ಲಿ ಬೆಂಗಳೂರು, ಮೈಸೂರು, ಮಡಿಕೇರಿ ಮತ್ತು ಪುತ್ತೂರಿನಲ್ಲಿ ಸಮದಾಯದ ಸಭೆಗಳನ್ನು ನಡೆಸಿ, ಕೊಡಗಿನ ಎಲ್ಲಾ ಗೌಡ ಸಮಾಜಗಳೊಂದಿಗೆ ಚರ್ಚಿಸಿ, ಕೊಡಗು ಗೌಡ ಸಮಾಜಗಳ ಒಕ್ಕೂಟವು ಈ ನಿರ್ಣಯ ಕೈಗೊಂಡಿದೆ. ಇದಕ್ಕೆ ನಾವು ಪೂರ್ಣ ಬೆಂಬಲ ಸೂಚಿಸಿದ್ದೇವೆ ಎಂದು ಮಾಹಿತಿ ನೀಡಿದರು.ಗಣತಿಯಲ್ಲಿ ತಮ್ಮ ಜಾತಿಗೆ ಇರುವ ಇನ್ನೊಂದು ಹೆಸರು ಎಂಬ ಕಾಲಂ ಸಹ ಇದ್ದು, ಅಲ್ಲಿ ಒಕ್ಕಲಿಗ, ಕೊಡಗು ಗೌಡ, ಅರೆಭಾಷೆ ಒಕ್ಕಲಿಗ ಎಂದು ನಮೂದಿಸಲು ಅವರು ತಿಳಿಸಿದರು.ಹಾಗೆಯೇ ಎಲ್ಲ ಮೂಲ ದಾಖಲೆಗಳನ್ನು ಒಕ್ಕಲಿಗ ಎಂದು ಹೊಂದಿರುವ ಅರೆಭಾಷೆ ಗೌಡ ಸಮುದಾಯ, ಜಾತಿ ಒಕ್ಕಲಿಗ ಉಪಜಾತಿ ಅರೆಭಾಷೆ ಗೌಡ/ಅರೆಭಾಷೆ ಒಕ್ಕಲಿಗ ಮತ್ತು ಮಾತೃಭಾಷೆ ಅರೆ ಭಾಷೆ ಎಂದು ನಮೂದಿಸಲು ಯಾವುದೇ ಅಭ್ಯಂತರವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.ಉಪಜಾತಿಯಲ್ಲಿ ಅರೆಭಾಷೆಗೌಡ ಎಂಬುದನ್ನು ಪ್ರತ್ಯೇಕ ಕಾಲಂನಲ್ಲಿ ಸೇರಿಸಬೇಕೆಂದು ಕೊಡಗು ಗೌಡ ಸಮಾಜಗಳ ಒಕ್ಕೂಟ ಸರ್ಕಾರಕ್ಕೆ ಸಲ್ಲಿಸಿದ ಮನವಿಗೆ ಸರ್ಕಾರ ಸ್ಪಂದಿಸಿದ್ದು, ಉಪಜಾತಿ ಎನ್ನುವ ಕಾಲಂ ನಲ್ಲಿ ಅರೆಭಾಷೆ ಗೌಡ ಎಂದು ಸೂಚಿಸಬೇಕು. ಹಾಗೆಯೇ ಎಲ್ಲ ಮೂಲ ಶೈಕ್ಷಣಿಕ ಮತ್ತು ಕಂದಾಯ ದಾಖಲೆಗಳನ್ನು ಒಕ್ಕಲಿಗ ಎಂದು ಹೊಂದಿರುವ ಅರೆಭಾಷೆ ಗೌಡರು ಇದ್ದರೆ ಅವರು ಜಾತಿ ಒಕ್ಕಲಿಗ ಉಪಜಾತಿ ಅರೆಭಾಷೆ ಗೌಡ, ಅರೆಭಾಷೆ ಒಕ್ಕಲಿಗ ಮತ್ತು ಮಾತೃಭಾಷೆ ಅರೆ ಭಾಷೆ ಎಂದು ನಮೂದಿಸಲು ಯಾವುದೇ ಅಭ್ಯಂತರವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಹಾಗೆಯೇ ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಸಲು ಅರೆಭಾಷೆ ಗೌಡರಿಗೆ ಯಾವುದೇ ಸಮಸ್ಯೆ ಇಲ್ಲದಿರುವುದರಿಂದ, ಸಮುದಾಯ ಬಾಂದವರು ಈ ಎಲ್ಲಾ ವಿವರಗಳನ್ನು ಗಮನ ದಲ್ಲಿರಿಸಿಕೊಂಡು ಕಡ್ಡಾಯವಾಗಿ ಈ ಎರಡೂ ಗಣತಿಯಲ್ಲಿ ಪಾಲ್ಗೊಳ್ಳಬೇಕು ಎಂದು ಕುಂಜಿಲನ ಮಂಜುನಾಥ್ ಪ್ರಕಟಣೆಯಲ್ಲಿ ಮನವಿ ಮಾಡಿದರು.