ಸುಂಟಿಕೊಪ್ಪ ಹೋಬಳಿ ಕಸಾಪ ಅಧ್ಯಕ್ಷ ಸಬಾಸ್ಟೀನ್‌ಗೆ ಸನ್ಮಾನ

KannadaprabhaNewsNetwork |  
Published : Jul 01, 2026, 03:30 AM IST
ಇದ್ದರು.  | Kannada Prabha

ಸಾರಾಂಶ

ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಜಿಲ್ಲಾ ಸಮಿತಿ ವತಿಯಿಂದ ಸುಂಟಿಕೊಪ್ಪ ಹೋಬಳಿ ಕಸಾಪ ಅಧ್ಯಕ್ಷ ಪಿ.ಎಫ್.ಸಬಾಸ್ಟೀನ್ ಅವರನ್ನು ಇತ್ತೀಚೆಗೆ ಮಡಿಕೇರಿಯ ಹೋಟೆಲ್ ವ್ಯಾಲಿವೂ ಸಭಾಂಗಣದಲ್ಲಿ ಆಯೋಜಿಸಲಾದ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್‌ ಅಸೋಸಿಯೇಷನ್ ಸಭೆಯಲ್ಲಿ ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಜಿಲ್ಲಾ ಸಮಿತಿ ವತಿಯಿಂದ ಸುಂಟಿಕೊಪ್ಪ ಹೋಬಳಿ ಕಸಾಪ ಅಧ್ಯಕ್ಷ ಪಿ.ಎಫ್.ಸಬಾಸ್ಟೀನ್ ಅವರನ್ನು ಇತ್ತೀಚೆಗೆ ಮಡಿಕೇರಿಯ ಹೋಟೆಲ್ ವ್ಯಾಲಿವೂ ಸಭಾಂಗಣದಲ್ಲಿ ಆಯೋಜಿಸಲಾದ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್‌ ಅಸೋಸಿಯೇಷನ್ ಸಭೆಯಲ್ಲಿ ಸನ್ಮಾನಿಸಲಾಯಿತು.

ಸಂಘದ ಅಧ್ಯಕ್ಷ ಜಾನ್ಸನ್ ಪಿಂಟೋ ಮಾತನಾಡಿ, ಸುಂಟಿಕೊಪ್ಪದಲ್ಲಿ ಆಯೋಜಿಸಲಾದ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಸುಂಟಿಕೊಪ್ಪ ಹೋಬಳಿ ಕಸಾಪ ಅಧ್ಯಕ್ಷ ಪಿ.ಎಫ್.ಸಬಾಸ್ಟೀನ್ ಹಾಗೂ ಪದಾಧಿಕಾರಿಗಳು ಯಶಸ್ವಿಯಾಗಿ ಮುನ್ನಡೆಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ ಎಂದರು. ಅವರನ್ನು ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಸಮಿತಿ ಪದಾಧಿಕಾರಿಗಳು ಗೌರವಿಸಿದರು.

ಜಿಲ್ಲಾ ರೋಮನ್ ಕ್ಯಾಥೋಲಿಕ್ ಸಮಿತಿ ಕಾರ್ಯಾಧ್ಯಕ್ಷ ವಿ.ಎ.ಲಾರೆನ್ಸ್, ಉಪಾಧ್ಯಕ್ಷರಾದ ಜೋಕಿಂ ವಾಸ್, ವಿನ್ಸಿ ಡಿಸೋಜ, ಪ್ರಧಾನ ಕಾರ್ಯದರ್ಶಿ ಅಂತೋಣಿ ಡಿಸೋಜ, ಸಂಘಟನಾ ಕಾರ್ಯದರ್ಶಿ ಮಾರ್ವಿನ್ ಲೋಬೋ, ವಿರಾಜಪೇಟೆ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ತಾಲೂಕು ಅಧ್ಯಕ್ಷ ಆಗಸ್ಟಿನ್ ಜೇವಿಯರ್, ಮಾಜಿ ಕಾರ್ಯದರ್ಶಿ ಜೂಡಿವಾಜ್, ಪೊನ್ನಂಪೇಟೆ ತಾಲೂಕು ಘಟಕದ ಅಧ್ಯಕ್ಷ ಸುಭಾಷ್ ಮ್ಯಾಥ್ಯು, ಮಾರ್ಷಲ್, ಜೋಸೆಫ್ ಡಿಸೋಜ, ಬ್ಲೇಜ್ಸಿ ಸಿಕ್ವೇರಾ, ರಾಬಿನ್‌ಪೌಲ್, ಕುಶಾಲನಗರ ತಾಲೂಕು ಘಟಕದ ಕೆ.ಎ.ಪೀಟರ್ , ಮಹಿಳಾ ಘಟಕದ ಅಧ್ಯಕ್ಷೆ ಪಿಲೋಮಿನಾ, ಉಪಾಧ್ಯಕ್ಷೆ ರೋಸ್‌ಮೇರಿ ರಾಡ್ರಿಗಸ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳಿಗೆ 3 ತಿಂಗಳಾದರೂ ಸಿಕ್ಕಿಲ್ಲ ಶೂ, ಸಾಕ್ಸ್‌!
ಕಾಖಂಡಕಿ, ಸುತ್ತಮುತ್ತಲಿನ ತಾಣಗಳ ಸಂಶೋಧನೆ ನಡೆಯಲಿ: ಸಚಿವ ಎಂ.ಬಿ. ಪಾಟೀಲ