ಸುಂಟಿಕೊಪ್ಪ: ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ವಿರೋಧಿ ದಿನಚಾರಣೆ

KannadaprabhaNewsNetwork |  
Published : Jun 27, 2024, 01:05 AM IST
ಚಿತ್ರ.1: ಸುಂಟಿಕೊಪ್ಪ ಪೊಲೀಸ್ ಠಾಣೆಯ ಪ್ರಭಾರ ಠಾಣಾಧಿಕಾರಿ ರಮೇಶ್ ಹಾಗೂ ಅಪರಾಧ ವಿಭಾಗದ ಪಿಎಸ್‌ಐ ಸ್ವಾಮಿ ಹಾಗೂ ಕಾಲೇಜುಉಪನ್ಯಾಸಕಿ ಸುನಿತಾ ಗಿರೀಶ್ ಅವರುಗಳು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸುತ್ತಿರುವುದು. | Kannada Prabha

ಸಾರಾಂಶ

ಸುಂಟಿಕೊಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಕಾಲೇಜಿನಲ್ಲಿಸಮಾರಂಭ ನಡೆಯಿತು. ಸುಂಟಿಕೊಪ್ಪ ಪೊಲೀಸ್ ಠಾಣೆಯ ಪ್ರಭಾರ ಠಾಣಾಧಿಕಾರಿ ರಮೇಶ್ ಹಾಗೂ ಅಪರಾಧ ವಿಭಾಗದ ಪಿಎಸ್‌ಐ ಸ್ವಾಮಿ ಹಾಗೂ ಕಾಲೇಜುಉಪನ್ಯಾಸಕಿ ಸುನಿತಾ ಗಿರೀಶ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಮೋಜು ಮಸ್ತಿಗಾಗಿ ಮತ್ತು ಕ್ಷಣಿಕ ಸುಖವನ್ನು ಅನುಭವಿಸುವ ದಿಸೆಯಲ್ಲಿ ಇಂದಿನ ಯುವ ಪೀಳಿಗೆ ಮಾದಕ ದ್ರವ್ಯಗಳ ವ್ಯಸನಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ಸಂಗತಿ. ಇದು ಯುವ ಸಮುದಾಯವನ್ನು ಕಾಡುತ್ತಿರುವ ಗಂಭೀರ ಸಮಸ್ಯೆ ಎಂದು ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಶ್ರೀಲತಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುಂಟಿಕೊಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮತ್ತು ಬರಿಸುವ ಮಾದಕವ್ಯಸನ ನಮ್ಮ ಶಾರೀರಿಕ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಬೀರಿ, ವ್ಯಕ್ತಿಯನ್ನು ಜೀವಚ್ಛವವವಾಗಿ ಮಾಡುತ್ತವೆ. ಶರೀರದ ನರಮಂಡಲದ ಮೇಲೆ ಮಾದಕ ವ್ಯಸನಿಗಳಿಂದ ವ್ಯತಿರಿಕ್ತ ಪರಿಣಾಮ ಉಂಟಾಗಿ ವ್ಯಕ್ತಿ ಸಾವಿನ ದವಡೆಗೆ ದೂಡುತ್ತದೆ ಎಂದರು.

ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ವಿರೋಧಿ ದಿನಚಾರಣೆಯ ಕುರಿತು ಸುಂಟಿಕೊಪ್ಪ ಪೊಲೀಸ್ ಠಾಣೆಯ ಮುಖ್ಯಪೇದೆ ರಮೇಶ್ ಮಾತನಾಡಿ, ಮಾದಕ ವಸ್ತುಗಳಿಗೆ ಜನ ಸಮುದಾಯ ಬಲಿಯಾಗುತ್ತಿರುವುದು ಅತಂಕದ ವಿಚಾರವೆಂದು ಕಳವಳ ವ್ಯಕ್ತಪಡಿಸಿದರು.

ವಿದ್ಯಾರ್ಥಿ ಸಮುದಾಯವನ್ನು ದಾರಿ ತಪ್ಪಿಸುತ್ತಿರುವ ಮಾದಕ ದ್ರವ್ಯಗಳು ವ್ಯಸನ ಉಂಟು ಮಾಡುತ್ತಿರುವ ಹಿನ್ನಲೆಯಲ್ಲಿ ತಮ್ಮ ವಿದ್ಯಾಭ್ಯಾಸ ಮೊಟಕುಗೊಳಿಸಿಕೊಳ್ಳುವ ಮೂಲಕ ಈ ಪಿಡುಗು ಮಾರಕವಾಗಿ ವ್ಯಾಪಿಸುತ್ತಿದೆ. ದೈಹಿಕ, ಮಾನಸಿಕವಾಗಿ ಮನುಷ್ಯನ ಜೀವನವನ್ನು ಜರ್ಜರಿತರನ್ನಾಗಿ ಮಾಡುತ್ತಿವೆ. ಮಾದಕ ದ್ರವ್ಯಗಳನ್ನು ಮಾರಾಟ ಮಾಡುವುದು ಮತ್ತು ಸೇವಿಸುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಈ ಸಂಬಂಧ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುವುದು ಕೂಡ ಕ್ರಿಮಿನಲ್ ಅಪರಾಧ ಪ್ರಕರಣಗಳಲ್ಲಿ ಒಂದಾಗಿದೆ ಎಂದರು.

ಸುಂಟಿಕೊಪ್ಪ ಪೊಲೀಸ್ ಠಾಣೆಯ ಪ್ರಭಾರ ಠಾಣಾಧಿಕಾರಿ ರಮೇಶ್ ಹಾಗೂ ಅಪರಾಧ ವಿಭಾಗದ ಪಿಎಸ್‌ಐ ಸ್ವಾಮಿ ಹಾಗೂ ಕಾಲೇಜುಉಪನ್ಯಾಸಕಿ ಸುನಿತಾ ಗಿರೀಶ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾರವಾಡ ಅಭಿವೃದ್ಧಿಗೆ ನನ್ನ ಮೊದಲ ಆದ್ಯತೆ
ಜನರ ಆರ್ಥಿಕ ಸಬಲೀಕರಣಕ್ಕೆ ಗ್ಯಾರಂಟಿ ಯೋಜನೆ ಸಹಾಯಕ: ರವೀಂದ್ರ ಕಲಬುರ್ಗಿ