ಶ್ರೀ ಚಾಮುಂಡೇಶ್ವರಿ, ಶ್ರೀ ಮುತ್ತಪ್ಪ ಮತ್ತು ಪರಿವಾರ ದೇವರ ಉತ್ಸವ
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀ ಮುತ್ತಪ್ಪ ಮತ್ತು ಪರಿವಾರ ದೇವರ ತೆರೆ ಮಹೋತ್ಸವ ಸಂಪನ್ನಗೊಂಡಿತು.
ಪೂಜಾ ವಿಧಿ ವಿಧಾನಗಳೊಂದಿಗೆ ಶನಿವಾರ ಮುಂಜಾನೆ ಆರಂಭಗೊಂಡ ತೆರೆ ಮಹೋತ್ಸವ, ಸೋಮವಾರ ಮಧ್ಯಾಹ್ನದ ವರೆಗೂ ವಿವಿಧ ಕೋಲಗಳು ಸೇರಿದಂತೆ ವಿಶೇಷ ಪೂಜಾ ವಿಧಿ ವಿಧಾನಗಳೊಂದಿಗೆ ನೆರವೇರಿತು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು.ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ಹಾಗೂ ಪರಿವಾರ ದೇವರ ತೆರೆ ಮಹೋತ್ಸವದ ಅಂಗವಾಗಿ ದೇವಾಲಯವನ್ನು ವಿದ್ಯುತ್ ದೀಪ ಹಾಗೂ ಬಣ್ಣ ಬಣ್ಣದ ಹೂಗಳಿಂದ ಸಿಂಗರಿಸಲಾಗಿತ್ತು.ಶನಿವಾರ ಬೆಳಗ್ಗೆ 6.45ಕ್ಕೆ ಗಣಪತಿ ಹವನ, 7.15ಕ್ಕೆ ಶುದ್ಧಿ ಪುಣ್ಯಾಹ ವಿಶೇಷ ಪೂಜೆಯನ್ನು ಶ್ರೀ ಚಾಮುಂಡೇಶ್ವರಿ ದೇವಾಲಯದ ಆರ್ಚಕ ಮಂಜುನಾಥ ಉಡುಪ ನೇರವೇರಿಸಿ, 7.30ಕ್ಕೆ ಧ್ವಜಾರೋಹಣ ಮಾಡುವುದರೊಂದಿಗೆ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರ ತೆರೆ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಸಂಜೆ 4 ಗಂಟೆಗೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವಿಕೆ, ರಾತ್ರಿ 6 ಗಂಟೆಗೆ ಚಂಡೆಮೇಳ, 7 ಗಂಟೆಗೆ ಶ್ರೀ ಮುತ್ತಪ್ಪ ವೆಳ್ಳಾಟಂ ನಡೆಯಿತು.ಭಾನುವಾರ ಬೆಳಗ್ಗೆ 7 ಗಂಟೆಗೆ ವಾದ್ಯಮೇಳ, 11 ಗಂಟೆಗೆ ಶ್ರೀ ಶಾಸ್ತಪ್ಪನ ವೆಳ್ಳಾಟಂ, ಮಧ್ಯಾಹ್ನ 1 ಗಂಟೆಗೆ ಗುಳಿಗ ವೆಳ್ಳಾಟಂ, ಸಂಜೆ 4 ಗಂಟೆಗೆ ಅಡಿಯರ ವಿದ್ಯುತ್ ದೀಪಾಲಂಕೃತ ಭವ್ಯ ಮಂಟಪದಲ್ಲಿ ಶ್ರೀ ಮುತ್ತಪ್ಪ ಹಾಗೂ ತಿರುವಪ್ಪ ಮೂರ್ತಿಗಳನ್ನು ಇರಿಸಿ ಪಟ್ಟಣದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಸಾಗಿತು. ರಾತ್ರಿ 7 ಗಂಟೆಗೆ ಶ್ರೀ ಮುತ್ತಪ್ಪ ವೆಳ್ಳಾಟಂ, 8 ಗಂಟೆಗೆ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ರಕ್ತ ಚಾಮುಂಡಿ ವೆಳ್ಳಾಟಂ, 8.30ಕ್ಕೆ ಶ್ರೀ ವಸೂರಿಮಾಲೆ ಸ್ನಾನಕ್ಕೆ ಹೊರಡುವುದು, 9 ಗಂಟೆಗೆ ವಿಷ್ಣುಮೂರ್ತಿ ವೆಳ್ಳಾಟಂ, 11 ಗಂಟೆಗೆ ಕಳಿಗ ಪಾಟ್ ಅಂದಿವೇಳ ಕಳಸಂ ಸ್ವೀಕರಿಸುವುದು, ವೆಳ್ಳಕಟ್ಟ್, 1.15ಕ್ಕೆ ಗುಳಿಗನ ಕೋಲ, 2 ಗಂಟೆಗೆ ಶಾಸ್ತಪ್ಪನ ಕೋಲ, ಬೆಳಗಿನ ಜಾವ 4 ಗಂಟೆಗೆ ಶ್ರೀ ಮುತ್ತಪ್ಪ ಮತ್ತು ಶ್ರೀ ತಿರುವಪ್ಪನ ಕೋಲ, 5 ಗಂಟೆಗೆ ಗಂಭೀರ ಪಟಾಕಿ ಸಿಡಿಸಲಾಯಿತು.ಸೋಮವಾರ ಬೆಳಗ್ಗೆ 7 ಗಂಟೆಗೆ ರಕ್ತ ಚಾಮುಂಡಿಕೋಲ, 8 ಗಂಟೆಗೆ ಶ್ರೀ ಮುತ್ತಪ್ಪ ಮತ್ತು ಶ್ರೀ ತಿರುವಪ್ಪ ದೇವರ ಪಳ್ಳಿವೇಟ, 9 ಗಂಟೆಗೆ ಶ್ರೀ ವಿಷ್ಣುಮೂರ್ತಿ ಕೋಲ, 10 ಗಂಟೆಗೆ ಶ್ರೀ ಚಾಮುಂಡೇಶ್ವರಿ ಕೋಲ, 11 ಗಂಟೆಗೆ ಶ್ರೀ ವಸೂರಿ ಮಾಲೆ ಕೋಲ, ಮಧ್ಯಾಹ್ನ 12 ಗಂಟೆಗೆ ಗುರುಶ್ರೀ ದರ್ಪಣ, 2 ಗಂಟೆಗೆ ಧ್ವಜಾವರೋಹಣ ಮೂಲಕ ಮಹೋತ್ಸವ ಸಂಪನ್ನಗೊಂಡಿತು.ಈ ಸಂದರ್ಭ ದೇವಳ ಸಮಿತಿಯ ಅಧ್ಯಕ್ಷ ಪಟ್ಟೆಮನೆ ಉದಯಕುಮಾರ್, ಉಪಾಧ್ಯಕ್ಷ ಯಂಕನ ಶ್ರೀರಾಮ್, ಬಿ.ಡಿ.ರಾಜು ರೈ, ಎನ್.ಆರ್.ಶಶಿಕುಮಾರ್, ಪ್ರಧಾನ ಕಾರ್ಯದರ್ಶಿ ಪಿ.ಸಿ.ಮೋಹನ್, ಖಜಾಂಚಿ ರಮೇಶ್ ಪಿಳ್ಳೆ, ಸಹಕಾರ್ಯದರ್ಶಿ ಯಂಕನ ಕೌಶಿಕ್, ಕಾರ್ಯಕಾರಿ ಸಮಿತಿ ಸದಸ್ಯರು ಚಂದ್ರ, ಪ್ರವೀಣ, ದಿವಾಕರ ರೈ, ವಿನೋದ್, ಪ್ರಾಂತ್, ಎ.ಲೋಕೇಶ್ ಕುಮಾರ್, ರಾಮಮೂರ್ತಿ, ಪಳನಿ, ವೀಣಾ ರೈ, ಗಿರಿಜಾ ಉದಯಕುಮಾರ್ ಹಾಗೂ ರಮ್ಯ ಮೋಹನ್, ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.