ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಪಿಳ್ಳೇನಹಳ್ಳಿಯಲ್ಲಿ ಸುಮಾರು ₹65 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿರು. ಆರೋಗ್ಯ, ಶಿಕ್ಷಣ ಜನರ ಬದುಕಿನ ಆದ್ಯತೆಯಾಗಿದೆ. ಅದನ್ನು ಒದಗಿಸುವುದು ಚುನಾಯಿತ ಪ್ರತಿನಿಧಿಗಳ ಕರ್ತವ್ಯ. ಶಿಕ್ಷಣಕ್ಕೆ ಆದ್ಯತೆ ನೀಡಿ ಹೋಬಳಿ ಮಟ್ಟದಲ್ಲಿ ಕೆಪಿಎಸ್ ಶಾಲೆಗಳ ತೆರೆಯಬೇಕೆಂದು ಈಗಾಗಲೇ ಸಖರಾಯಪಟ್ಟಣದಲ್ಲಿ ಸುಮಾರು ₹4 ಕೋಟಿ ವೆಚ್ಚದಲ್ಲಿ ಕೆಪಿಎಸ್ ಶಾಲೆ ಮಂಜೂರಾಗಿದೆ. ಸದ್ಯದಲ್ಲೇ ಕೆಲಸ ಆರಂಭವಾಗಲಿದೆ. ದೇವನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ಕೋಟಿ ವೆಚ್ಚದಲ್ಲಿ ಇಡೀ ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಪಡಿಸಲಾಗಿದೆ. ಮುಂದಿನ ಬಾರಿ ಲಕ್ಯಾ ಹೋಬಳಿ ಕೆ.ಬಿ. ಹಾಳ್ ಶಾಲೆಯನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.
ಯುದ್ಧದಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ಆದರೆ, ಇಲ್ಲಿನ ಕೇಂದ್ರ ಸರ್ಕಾರ ಸರಿಯಾದ ರೀತಿಯಲ್ಲಿ ನಿಭಾಯಿ ಸುತ್ತಿಲ್ಲ. ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ. ಇಂತಹ ಬೆಲೆ ಏರಿಕೆಗಳ ನಡುವೆ ಸಾಮಾನ್ಯ ಜನರ ಬದುಕು ಕಟ್ಟಿಕೊಡಲು ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೊಟ್ಟಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಸಾಧ್ಯವಾಗಿದೆ ಎಂದರು.ಜಿಲ್ಲೆಗೆ 38 ಆಯುಷ್ಮಾನ್ ಆರೋಗ್ಯ ಕೇಂದ್ರ ಮಂಜೂರಾಗಿದ್ದು, ಈ ಪೈಕಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಕ್ಕೆ 11 ಕೇಂದ್ರ ಗಳು ಮಂಜೂರಾಗಿವೆ ಎಂದು ತಿಳಿಸಿದರು.
₹ 2.20 ಕೋಟಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ