ಟಿಎಪಿಸಿಎಂಎಸ್ ಆಡಳಿತ ಮಂಡಳಿ ಮೇಲೆ ಸೂಪರ್‌ಸೀಡ್ ತೂಗುಕತ್ತಿ?

KannadaprabhaNewsNetwork | Published : Nov 27, 2023 1:15 AM

ಸಾರಾಂಶ

ಚನ್ನಪಟ್ಟಣ: ಟಿಎಪಿಸಿಎಂಎಸ್ ಗೋದಾಮಿನಿಂದ ಅನ್ನಭಾಗ್ಯದ ಅಕ್ಕಿ ಹಾಗೂ ರಾಗಿ ನಾಪತ್ತೆ ಪ್ರಕರಣ ತಾಲೂಕಿನಲ್ಲಿ ಸಾಕಷ್ಟು ಸಂಚಲನ ಮೂಡಿಸಿರುವ ಹೊತ್ತಿನಲ್ಲೇ ಟಿಎಪಿಸಿಎಂಎಸ್ ಆಡಳಿತ ಮಂಡಳಿ ಮೇಲೆ ಸೂಪರ್‌ಸೀಡ್ ತೂಗುಕತ್ತಿ ನೇತಾಡುತ್ತಿದೆ.

ಚನ್ನಪಟ್ಟಣ: ಟಿಎಪಿಸಿಎಂಎಸ್ ಗೋದಾಮಿನಿಂದ ಅನ್ನಭಾಗ್ಯದ ಅಕ್ಕಿ ಹಾಗೂ ರಾಗಿ ನಾಪತ್ತೆ ಪ್ರಕರಣ ತಾಲೂಕಿನಲ್ಲಿ ಸಾಕಷ್ಟು ಸಂಚಲನ ಮೂಡಿಸಿರುವ ಹೊತ್ತಿನಲ್ಲೇ ಟಿಎಪಿಸಿಎಂಎಸ್ ಆಡಳಿತ ಮಂಡಳಿ ಮೇಲೆ ಸೂಪರ್‌ಸೀಡ್ ತೂಗುಕತ್ತಿ ನೇತಾಡುತ್ತಿದೆ.

ಟಿಎಪಿಸಿಎಂಎಸ್ ಗೋದಾಮಿನಿಂದ ಅನ್ನಭಾಗ್ಯದ ಅಕ್ಕಿ ನಾಪತ್ತೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಹಗರಣಕ್ಕೆ ಸಂಬಂಧಿಸಿದಂತೆ ಸಹಕಾರ ಇಲಾಖೆಯಿಂದ ಟಿಎಪಿಸಿಎಂಎಸ್ ನಿರ್ದೇಶಕರಿಗೆ ನೋಟಿಸ್ ಜಾರಿಯಾಗಿದ್ದು, ಆಡಳಿತ ಮಂಡಳಿಗೆ ತಲೆಬಿಸಿಯಾಗಿದೆ.

ನಿರ್ದೇಶಕರಿಗೆ ನೋಟಿಸ್?:

ಟಿಎಪಿಎಂಎಸ್ ಗೋದಾಮಿನಿಂದ ಅಕ್ಕಿ ಹಾಗೂ ರಾಗಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತ ಮಂಡಳಿ ನಿರ್ದೇಶಕರಿಗೆ ಸಹಕಾರ ಇಲಾಖೆಯ ಉಪನಿಬಂಧಕರು ನಿರ್ದೇಶಕರಿಗೆ ನೋಟಿಸ್ ನೀಡಿ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆಗಳೊಂದಿಗೆ ಉತ್ತರ ನೀಡುವಂತೆ ತಿಳಿಸಲಾಗಿದೆ. ತಪ್ಪಿದಲ್ಲಿ ನಿಮ್ಮನ್ನು ಏಕೆ ವಜಾಗೊಳಿಸಬಾರದು ಎಂದು ಪ್ರಶ್ನಿಸಿದೆ.

ಚುನಾವಣೆ ಹೊಸ್ತಿಲಲ್ಲೇ ತಲೆಬಿಸಿ: ಹಾಲಿ ಟಿಎಪಿಸಿಎಂಎಸ್ ಆಡಳಿತ ಮಂಡಳಿಯ ಅವಧಿ ಡಿ.8ಕ್ಕೆ ಮುಕ್ತಾಯವಾಗಿಲಿದ್ದು, ಈ ನಿಟ್ಟಿನಲ್ಲಿ ನೂತನ ಆಡಳಿತ ಮಂಡಳಿ ಆಯ್ಕೆಗೆ ಡಿ.3ಕ್ಕೆ ಚುನಾವಣೆ ನಿಗದಿಯಾಗಿದೆ. ಈಗಾಗಲೇ ನಾಮಪತ್ರ ಸಲ್ಲಿಕೆ ಅವಧಿ ಮುಗಿದಿದ್ದು, ನ.27ರಂದು ಸೋಮವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಚುನಾವಣೆ ಹೊಸ್ತಿಲಿನಲ್ಲೇ ಅಕ್ಕಿ ಪ್ರಕರಣ ಹೊರಗೆ ಬಂದಿರುವುದು ಸಂಸ್ಥೆಯ ಹಾಲಿ ನಿರ್ದೇಶಕರ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಟಿಎಪಿಸಿಎಂಎಸ್ ಚುನಾವಣೆಗೆ ಹಾಲಿ ಆಡಳಿತ ಮಂಡಳಿಯ ಬಹುತೇಕ ಸದಸ್ಯರು ಮರುಆಯ್ಕೆ ಬಯಸಿ ಸ್ಪರ್ಧಿಸಿದ್ದಾರೆ. ಟಿಎಪಿಸಿಎಂಎಸ್ ಗೋದಾಮಿನಿಂದ ಅಕ್ಕಿ ಹಾಗೂ ರಾಗಿ ನಾಪತ್ತೆ ಪ್ರಕರಣವನ್ನು ಮುಂದು ಮಾಡಿಕೊಂಡು ಪ್ರಸ್ತುತ ಇರುವ ಆಡಳಿತ ಮಂಡಳಿಯನ್ನು ಸೂಪರ್ ಸೀಡ್ ಮಾಡಿದ್ದೇ ಆದಲ್ಲಿ ಅವರು ತಮ್ಮ ನಿರ್ದೇಶಕ ಸ್ಥಾನವನ್ನು ಕಳೆದುಕೊಳ್ಳುವ ಜತೆಗೆ ಚುನಾವಣೆಗೆ ಸ್ಪರ್ಧಿಸುವ ಹಕ್ಕನ್ನು ಕಳೆದುಕೊಳ್ಳುವ ಭೀತಿ ಎದುರಾಗಿದೆ.

ಸೂಪರ್‌ಸೀಡ್ ಮಾಡಿಸುವ ಯತ್ನ: ಪ್ರಸ್ತತ ಹಾಲಿ ಟಿಎಂಪಿಸಿಎಂಎಸ್ ಆಡಳಿತ ಮಂಡಳಿತ ಮಂಡಳಿ ಜೆಡಿಎಸ್ ತೆಕ್ಕೆಯಲ್ಲಿದೆ. ಅಕ್ಕಿ ನಾಪತ್ತೆ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್, ಜೆಡಿಎಸ್ ಆಡಳಿತ ಮಂಡಲಿ ಇರುವ ಸಂಸ್ಥೆಯ ಆಡಳಿತ ಮಂಡಳಿಯನ್ನು ಸೂಪರ್‌ಸೀಡ್ ಮಾಡಿಸುವ ಹುನ್ನಾರ ನಡೆಸಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಕಾಂಗ್ರೆಸ್ ಮುಖಂಡರು ಪಕ್ಷದ ವರಿಷ್ಠರ ಮೇಲೆ ಈ ವಿಚಾರದಲ್ಲಿ ಸಾಕಷ್ಟು ಒತ್ತಡ ಹೇರುತ್ತಿದ್ದು, ಟಿಎಪಿಸಿಎಂಎಸ್ ಆಡಳಿತ ಮಂಡಳಿಯನ್ನು ಸೂಪರ್‌ಸೀಡ್ ಮಾಡಿಸುವ ಪ್ರಯತ್ನಗಳು ಸಾಗಿದೆ ಎಂಬ ಚರ್ಚೆ ವ್ಯಾಪಕವಾಗಿದೆ.ಬಾಕ್ಸ್..............

69 ನಾಮಪತ್ರ ಸಲ್ಲಿಕೆ

ಪ್ರತಿಷ್ಥಿತ ಟಿಎಪಿಸಿಎಂಎಸ್ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಡಿ.3ರಂದು ಚುನಾವಣೆ ನಿಗದಿಯಾಗಿದ್ದು, ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಬೆಂಬಲಿತರು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಬಹುತೇಕ ಹಾಲಿ ನಿರ್ದೇಶಕರು ಹಾಗೂ ಕೆಲ ಹೊಸ ಮುಖಗಳು ಈ ಬಾರಿ ಚುನಾವಣಾ ಕಣಕ್ಕೆ ಇಳಿದಿದೆ. ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು ಸಹ ಈ ಬಾರಿ ಚುನಾವಣೆ ಕಣಕ್ಕೆ ನಾಮಪತ್ರ ಸಲ್ಲಿಸಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.

ಟಿಎಪಿಸಿಎಂಎಸ್ ಆಡಳಿತ ಮಂಡಳಿ ಎ ತರಗತಿಯ ೫ನಿರ್ದೇಶಕ ಸ್ಥಾನಗಳಿಗೆ ಜಯಮುತ್ತು ಸೇರಿದಂತೆ 17 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಬಿ ತರಗತಿಯ ನಿರ್ದೇಶಕ ಸ್ಥಾನಗಳಿಗೆ ಒಟ್ಟು 52 ನಾಮಪತ್ರ ಸಲ್ಲಿಸಿದ್ದಾರೆ. ಬಿ ತರಗತಿಗೆ ಸಾಮಾನ್ಯ ವರ್ಗದಿಂದ 19 ಮಂದಿ, ಸಾಮಾನ್ಯ ಮಹಿಳಾ ವರ್ಗದಿಂದ 10 ಮಂದಿ, ಹಿಂದುಳಿದ ವರ್ಗ ಬಿಯಿಂದ 13 ಮಂದಿ, ಬಿಸಿಎಂ ಎ ವರ್ಗದಿಂದ 4 ಮಂದಿ, ಪರಿಶಿಷ್ಟ ಜಾತಿಯಿಂದ ೪ಮಂದಿ, ಪರಿಶಿಷ್ಟ ಪಂಗಡದಿಂದ ಇಬ್ಬರು ಉಮೇದುವಾರಿಕೆ ಸಲ್ಲಿಸಿದ್ದಾರೆ. ಚುನಾವಣಾ ಕಣದಿಂದ ನಾಮಪತ್ರ ಹಿಂಪಡೆಯುವಂತೆ ಅಭ್ಯರ್ಥಿಗಳ ಮನವೊಲಿಕೆ ಕಾರ್ಯಗಳು ಈಗಾಗಲೇ ಆರಂಭಗೊಂಡಿದ್ದು, ಇಂತಹ ಸಮಯದಲ್ಲೇ ಅಕ್ಕಿ ಹಗರಣದ ಕರಿನೆರಳು ಸಂಸ್ಥೆಯ ಮೇಲೆ ವ್ಯಾಪಿಸಿದೆ. ಪೊಟೋ೨೬ಸಿಪಿಟಿ೧:

ಚನ್ನಪಟ್ಟಣದ ಸಾತನೂರು ರಸ್ತೆಯಲ್ಲಿರುವ ಟಿಎಪಿಸಿಎಂಎಸ್ ಗೋದಾಮು.

Share this article