ನರಗುಂದ: ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಬೆಳೆಗಳು ಮಳೆಯಿಲ್ಲದೆ ಬಿಸಿಲಿನ ತಾಪಕ್ಕೆ ಒಣಗುತ್ತಿದ್ದು, ನೀರಾವರಿ ನಿಗಮದ ಅಧಿಕಾರಿಗಳು ಮಲಪ್ರಭಾ ಬಲದಂಡೆ ಕಾಲುವೆಗಳಿಗೆ ಹೆಚ್ಚುವರಿ ನೀರು ಪೂರೈಕೆ ಮಾಡಬೇಕು ಎಂದು ರೈತ ಸೇನಾ ಸಂಘಟನೆ ರಾಜ್ಯ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಆಗ್ರಹಿಸಿದ್ದಾರೆ. ಅವರು 3345 ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ನಿರಂತರ ಹೋರಾಟ ವೇದಿಕೆಯಲ್ಲಿ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ್ದ ಬಿಟಿ ಹತ್ತಿ, ಜೋವಿನಜೋಳ, ಸೂರ್ಯಕಾಂತಿ, ತೊಗರಿ ತೇವಾಂಶ ಕೊರತೆಯಿಂದ ಬಿಸಿಲಿನ ತಾಪಕ್ಕೆ ಒಣಗುತ್ತಿವೆ. ಆದರಿಂದ ನೀರಾವರಿ ನಿಗಮದ ಅಧಿಕಾರಿಗಳು ಮಲಪ್ರಭಾ ಬಲದಂಡೆ ಕಾಲುವೆಗಳಿಗೆ ಹೆಚ್ಚುವರಿ ನೀರು ಪೂರೈಕೆ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ವೀರಬಸಪ್ಪ ಹೂಗಾರ, ಪರಶುರಾಮ ಜಂಬಗಿ, ಸುಭಾಸ ಗಿರಿಯಣ್ಣವರ, ಸಿ.ಎಸ್. ಪಾಟೀಲ, ಹನಮಂತ ಸರನಾಯ್ಕರ, ಸೋಮಲಿಂಗಪ್ಪ ಆಯಿಟ್ಟಿ, ಶಿವಪ್ಪ ಸಾತಣ್ಣವರ, ಅರ್ಜುನ ಮಾನೆ, ಯಲ್ಲಪ್ಪ ಚಲವಣ್ಣವರ, ಶಂಕ್ರಪ್ಪ ಜಾಧವ, ಅನಸವ್ವ ಶಿಂದೆ, ನಾಗರತ್ನ ಸವಳಭಾವಿ, ವಾಸು ಚವ್ಹಾಣ, ವಿಜಯಕುಮಾರ ಹೂಗಾರ ಸೇರಿದಂತೆ ಮುಂತಾದವರು ಇದ್ದರು.