ಕಣ್ಣಿನ ತಪಾಸಣೆಗೆ ಅತ್ಯಾಧುನಿಕ ಉಪಕರಣ ಪೂರೈಕೆ

KannadaprabhaNewsNetwork |  
Published : May 18, 2024, 12:36 AM IST
ಚಿತ್ರದುರ್ಗ ಎರಡನೇ ಪುಟದ  ಮಿಡ್ಲ್     | Kannada Prabha

ಸಾರಾಂಶ

ಜಿಲ್ಲೆಯಾದ್ಯಂತ ಎರಡನೇ ಹಂತದ ಆಶಾಕಿರಣ ಕಾರ್ಯಕ್ರಮ ನಡೆಯುತ್ತಿದ್ದು, ಕಾರ್ಯಕ್ರಮ ಅಂಧರ ಬಾಳಿಗೆ ಸಹಕಾರಿಯಾಗಿದೆ ಎಂದು ಜಿಲ್ಲಾ ಅಂಧತ್ವ ನಿವಾರಣಾ ಕಾರ್ಯಕ್ರಮ ಅಧಿಕಾರಿ ಡಾ.ನಾಗರಾಜ್ ಹೇಳಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ಕಾರ್ಯಕ್ರಮದ ವತಿಯಿಂದ

ಜಿಲ್ಲೆಯಾದ್ಯಂತ ಎರಡನೇ ಹಂತದ ಆಶಾಕಿರಣ ಕಾರ್ಯಕ್ರಮ ನಡೆಯುತ್ತಿದ್ದು, ಕಾರ್ಯಕ್ರಮ ಅಂಧರ ಬಾಳಿಗೆ ಸಹಕಾರಿಯಾಗಿದೆ ಎಂದು ಜಿಲ್ಲಾ ಅಂಧತ್ವ ನಿವಾರಣಾ ಕಾರ್ಯಕ್ರಮ ಅಧಿಕಾರಿ ಡಾ.ನಾಗರಾಜ್ ಹೇಳಿಕೆ ನೀಡಿದ್ದಾರೆ.

ಮುಂದುವರಿದು ಅವರು ಮಾತನಾಡಿ, ಎಲ್ಲಾ ವಯಸ್ಸಿನವರಿಗೆ, ಶಾಲಾ ಮಕ್ಕಳಿಗೆ ಸಮಗ್ರವಾಗಿ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಗುತ್ತದೆ. ಪ್ರಾಥಮಿಕ ಹಂತದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿ ಮನೆ ಮನೆಗೆ ಭೇಟಿ ನೀಡಿ ಕಣ್ಣಿನ ತೊಂದರೆ ಇರುವವರಿಗೆ ಪ್ರಾಥಮಿಕ ತಪಾಸಣೆ ಮಾಡಿದೆ. ದ್ವೀತಿಯ ಹಂತದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಉಪ ಕೇಂದ್ರಗಳಲ್ಲಿ ನೇತ್ರಾಧಿಕಾರಿಗಳಿಂದ ಹಾಗೂ ಆರ್‍ಬಿಎಸ್‍ಕೆ (ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮ) ನೇತ್ರಾಧಿಕಾರಿಗಳಿಂದ ಆಶಾ ಕಾರ್ಯಕರ್ತೆಯರು ಪ್ರಾಥಮಿಕ ತಪಾಸಣೆ ವೇಳೆ ಕಣ್ಣಿನ ತೊಂದರೆ ಇರುವವರ ಕಣ್ಣಿನ ತಪಾಸಣೆ ಮಾಡಿ, ದೂರದೃಷ್ಠಿ, ಸಮೀಪ ದೃಷ್ಠಿ ಇರುವವರಿಗೆ ಉಚಿತ ಕನ್ನಡಕ ವಿತರಿಸಿದ್ದಾರೆ. ಕಣ್ಣಿನ ಪೊರೆ ತೊಂದರೆ ಇರುವವರಿಗೆ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ, ಎನ್‍ಜಿಓ ಆಸ್ಪತ್ರೆಗಳಲ್ಲಿ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ ಎಂದಿದ್ದಾರೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಆಶಾಕಿರಣ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲೆಗೆ ಕಣ್ಣಿನ ತಪಾಸಣೆಗಾಗಿ ಅತ್ಯಾಧುನಿಕ ಉತ್ತಮ ತಂತ್ರಜ್ಞಾನ ವಿರುವ Auto Refractometer ಹಾಗೂ Fundus ಉಪಕರಣಗಳನ್ನು ಒದಗಿಸಲಾಗಿದೆ. ಜಿಲ್ಲೆಯಲ್ಲಿ ಕೆಲಸ ನಿರ್ವಹಿಸುತ್ತಿರುವ 17 ಪ್ರಾಥಮಿಕ ನೇತ್ರಾಧಿಕಾರಿ ಗಳಿಗೆ Handled Auto Rafractomater ನ್ನು ನೀಡಿದ್ದು, ಶೀಘ್ರವಾಗಿ ಕಣ್ಣಿನ ತೊಂದರೆಗಳನ್ನು ಪತ್ತೆಹಚ್ಚಲು ಸಹಕಾರಿಯಾಗಿದೆ. ಅದೇ ರೀತಿ ಸಿರಿಗೆರೆ, ಪರಶುರಾಂಪುರ, ಧರ್ಮಪುರ ಹಾಗೂ ಶ್ರೀರಾಂಪುರ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಅತ್ಯಾಧುನಿಕ ತಂತ್ರಜ್ಞಾನವುಳ್ಳ 3 Netra Fundus ಎಂಬ ನಾಲ್ಕು ಉಪಕರಣಗಳನ್ನು ಒದಗಿಸಲಾಗಿದೆ. ಈ ಉಪಕರಣದಿಂದ ಕಣ್ಣಿನ ರೆಟಿನಾದ ನರಗಳ ತೊಂದರೆ Diabeties Retinopathy ಪತ್ತೆ ಹಚ್ಚುವುದು, ಜಿಲ್ಲಾಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ.

ಸಾರ್ವಜನಿಕರು ಆಶಾಕಿರಣ ಕಾರ್ಯಕ್ರಮದಲ್ಲಿ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಕಾರಿ ಆಸ್ಪತ್ರೆಗಳಲ್ಲಿ ಕಣ್ಣಿನ ತಪಾಸಣೆ ಮಾಡಿಸಿಕೊಂಡು ಉಚಿತ ಕನ್ನಡಕ ಅಥವಾ ಉಚಿತ ಶಸ್ತ್ರಚಿಕಿತ್ಸೆ ಸೌಲಭ್ಯ ಪಡೆಯಬಹುದು ಎಂದು ಜಿಲ್ಲಾ ಅಂಧತ್ವ ನಿವಾರಣಾ ಕಾರ್ಯಕ್ರಮ ಅಧಿಕಾರಿ ಡಾ.ನಾಗರಾಜ್ ಮನವಿ ಮಾಡಿದ್ದಾರೆ.

PREV

Recommended Stories

ನೀಲಿ ಮೊಟ್ಟೆ ಇಟ್ಟ ಚನ್ನಗಿರಿಯ ನಾಟಿ ಕೋಳಿ: ಸ್ಥಳೀಯರಲ್ಲಿ ತೀವ್ರ ಕುತೂಹಲ
ಸಿಗಂದೂರಿನಲ್ಲಿ ವಾಟರ್ ಏರೋಡ್ರೋಮ್: ವಿಮಾನ ಟೇಕಾಫ್‌, ಲ್ಯಾಂಡಿಂಗ್‌! ಪ್ರವಾಸೋದ್ಯಮಕ್ಕೆ ಹೊಸ ಹೆಜ್ಜೆ?