ಸಕಾಲದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಿ

KannadaprabhaNewsNetwork |  
Published : Jun 11, 2025, 11:48 AM IST
ಪೋಟೊ10ಕೆಎಸಟಿ4: ಕುಷ್ಟಗಿ ಪಟ್ಟಣದ ಸಹಾಯಕ ಕೃಷಿ ನಿರ್ದೇಶಕ ಕಾರ್ಯಾಲಯದಲ್ಲಿ ಕೃಷಿ ಇಲಾಖೆಯ ಯೋಜನೆಗಳ ಕುರಿತು ಪೋಸ್ಟರಗಳನ್ನು ಸಭೆಯಲ್ಲಿ ಬಿಡುಗಡೆಗೊಳಿಸಿದರು. | Kannada Prabha

ಸಾರಾಂಶ

ಕೃಷಿಕ ಸಮಾಜವು ಎಲ್ಲ ಇಲಾಖೆಗಳೊಡನೆ ಸದಾ ಸಂಪರ್ಕ ಹೊಂದಿ ಕೃಷಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಕೃಷಿಕ ಹಾಗೂ ಇಲಾಖೆಗಳ ಮಧ್ಯೆ ಸಂಪರ್ಕಕೊಂಡಿಯಾಗಿ ಕಾರ್ಯನಿರ್ವಹಿಸಲಾಗುವುದು.

ಕುಷ್ಟಗಿ:

ಮುಂಗಾರು ಹಂಗಾಮು ಪ್ರಾರಂಭವಾಗಿದ್ದು ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ. ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಕೃಷಿಕ ಸಮಾಜದ ಅಧ್ಯಕ್ಷ ಶ್ಯಾಮರಾವ ಕುಲಕರ್ಣಿ ಹೇಳಿದರು.

ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದಲ್ಲಿ ನಡೆದ ಕೃಷಿಕ ಸಮಾಜ ತಾಲೂಕು ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೃಷಿಕ ಸಮಾಜವು ಎಲ್ಲ ಇಲಾಖೆಗಳೊಡನೆ ಸದಾ ಸಂಪರ್ಕ ಹೊಂದಿ ಕೃಷಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಕೃಷಿಕ ಹಾಗೂ ಇಲಾಖೆಗಳ ಮಧ್ಯೆ ಸಂಪರ್ಕಕೊಂಡಿಯಾಗಿ ಕಾರ್ಯನಿರ್ವಹಿಸಲಾಗುವುದು ಎಂದರು.

ಸಹಾಯಕ ಕೃಷಿ ನಿರ್ದೇಶಕ ನಾಗರಾಜ ಕಾತರಕಿ, ಈ ವರ್ಷ ಮುಂಗಾರು ಉತ್ತಮವಾಗಿದ್ದು, ತಾಲೂಕಿನ ಮಳೆ-ಬೆಳೆ ಪರಿಸ್ಥಿತಿ, ಬೀಜ-ರಸಗೊಬ್ಬರ ದಾಸ್ತಾನು, ಬಿತ್ತನೇ ಕ್ಷೇತ್ರದ ಮಾಹಿತಿಯನ್ನು ಸಭೆಯಲ್ಲಿ ತಿಳಿಸಿದರು. ಸಾಕಷ್ಟು ಪ್ರಮಾಣದಲ್ಲಿ ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರವಾರು ದಾಸ್ತಾನುಕರಿಸಿ ವಿತರಿಸಲಾಗುತ್ತಿದೆ. ಅಲ್ಲದೇ ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯ ಹಾಗೂ ಡಿಎಪಿಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳ ಬದಲಾಗಿ ಸಂಯುಕ್ತ ರಸಗೊಬ್ಬರಗಳ ಬಳಕೆಯನ್ನು ಪ್ರೇರೇಪಿಸುವುದು ಮುಖ್ಯವಾಗಿರುತ್ತದೆ ಎಂದು ಹೇಳಿದರು.

ಪ್ರಧಾನ ಕಾರ್ಯದರ್ಶಿ ಸುರೇಶ ಪಾಟೀಲ, ಸಮಿತಿ ಸದಸ್ಯ ಬಸನಗೌಡ ದಿಡ್ಡಿಮನಿ, ವಿರೂಪಾಕ್ಷಪ್ಪ ತಾಳಿಕೋಟಿ ಮಾತನಾಡಿದರು. ಈ ವೇಳೆ ಕೃಷಿಕ ಸಮಾಜದ ಉಪಾಧ್ಯಕ್ಷ ಮನೋಜ ಪಟ್ಟಣಶೆಟ್ಟಿ, ಖಜಾಂಚಿ ಮಲ್ಲಯ್ಯ ಲೈನದ, ಗೋಪಾಲರಾವ್ ಕುಲಕರ್ಣಿ, ಶಂಕರಗೌಡ ಪಾಟೀಲ, ಮಹಾಂತೇಶ ಕರಡಿ, ದಾವಲಸಾಬ ಭಾವಿಕಟ್ಟಿ, ಸಂಗಪ್ಪ ಕಡಿವಾಲ, ಶರಣಪ್ಪ ಬಡಿಗೇರ, ತಾಂತ್ರಿಕ ಅಧಿಕಾರಿ ಪ್ರಕಾಶ ತಾರಿವಾಳ, ರಾಜಶೇಖರ ಇದ್ದರು. ಇದೇ ವೇಳೆ ಕೃಷಿ ಇಲಾಖೆಯ ಯೋಜನೆಗಳ ಕುರಿತು ಪೋಸ್ಟರ್‌ಗಳನ್ನು್‌ ಬಿಡುಗಡೆ ಮಾಡಲಾಯಿತು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ