ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಹಳ್ಳಗಳಲ್ಲಿನ 13.42ಟಿಎಂಸಿ ನೀರು ಬಳಕೆ ಮಾಡಿಕೊಳ್ಳಲು ನ್ಯಾಯಾಧೀಕರಣ 2018ರಲ್ಲಿ ತೀರ್ಪು ನೀಡಿದರೂ ಕೇಂದ್ರ ಸರ್ಕಾರ ಈ ಯೋಜನೆ ಜಾರಿ ಮಾಡಿದ್ದು, ಈ ಭಾಗದ ರೈತರಿಗೆ ನೋವು ತಂದಿದೆ.
ನರಗುಂದ: ಪ್ರಸ್ತುಕ ವರ್ಷ ಹಿಂಗಾರು ಹಂಗಾಮಿನಲ್ಲಿ ರೈತರು ತಡವಾಗಿ ಬಿತ್ತನೆ ಮಾಡಿದ್ದು, ಆದರಿಂದ ಮಲಪ್ರಭಾ ಬಲದಂಡೆ ಕಾಲುವೆಗೆ ಮಾರ್ಚ ಅಂತ್ಯದವರೆಗೆ ನೀರು ಪೂರೈಕೆ ಮಾಡಬೇಕು ಎಂದು ರೈತ ಸಂಘಟನೆ ರಾಜ್ಯ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಆಗ್ರಹಿಸಿದರು.
ಅವರು ಶನಿವಾರ ಪಟ್ಟಣದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ಹೋರಾಟ ವೇದಿಕೆಯಲ್ಲಿ ಮಾತನಾಡಿ, 2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ತಾಲೂಕಿಗೆ ಅತಿಯಾದ ಮಳೆಯಾಗಿದ್ದರಿಂದ ಜಮೀನು ಸ್ವಚ್ಛ ಮಾಡಿ ಬಿತ್ತನೆಯನ್ನು ರೈತರು ತಿಂಗಳ ತಡವಾಗಿ ಬಿತ್ತನೆ ಮಾಡಿದ್ದಾರೆ.ಇನ್ನು ತಿಂಗಳ ಕಾಲುವೆಗೆ ನೀರು ಬಂದರೆ ಮಾತ್ರ ಬೆಳೆಗಳು ಬರಲು ಸಾಧ್ಯವಾಗುತ್ತದೆ. ಮೇಲಾಗಿ ಈ ವರ್ಷ ಜಲಾಶಯ ಸಂರ್ಪೂಣ ಭರ್ತಿಯಾಗಿದೆ, ಆದ್ದರಿಂದ ಮುಖ್ಯಮಂತ್ರಿ ಮತ್ತು ನೀರಾವರಿ ಸಚಿವರು ಮಾರ್ಚ ತಿಂಗಳ ಅಂತ್ಯದವರಗೆ ನರಗುಂದ ತಾಲೂಕಿನ ರೈತರ ಕಾಲುವೆಗಳಿಗೆ ನೀರು ಪೂರೈಕೆ ಮಾಡಲು ಆದೇಶ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿಕೊಂಡರು.
ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ ಮಾತನಾಡಿ, ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಹಳ್ಳಗಳಲ್ಲಿನ 13.42ಟಿಎಂಸಿ ನೀರು ಬಳಕೆ ಮಾಡಿಕೊಳ್ಳಲು ನ್ಯಾಯಾಧೀಕರಣ 2018ರಲ್ಲಿ ತೀರ್ಪು ನೀಡಿದರೂ ಕೇಂದ್ರ ಸರ್ಕಾರ ಈ ಯೋಜನೆ ಜಾರಿ ಮಾಡಿದ್ದು, ಈ ಭಾಗದ ರೈತರಿಗೆ ನೋವು ತಂದಿದೆ. ಈಗಲು ಸರ್ಕಾರಕ್ಕೆ ಕಾಲ ಮಿಂಚಿಲ್ಲ ಬೇಗ ಈ ಯೋಜನೆ ಜಾರಿ ಮಾಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪರಶುರಾಮ ಜಂಬಗಿ, ಹನಮಂತ ಸರನಾಯ್ಕರ, ಯಲ್ಲಪ್ಪ ಚಲವಣ್ಣವರ, ಪರಮೇಶ ಅಣ್ಣಿಗೇರಿ, ಶಂಕ್ರಪ್ಪ ಜಾಧವ, ಫಕೀರಪ್ಪ ಅಣ್ಣಿಗೇರಿ, ಶಿವಪ್ಪ ಸಾತಣ್ಣವರ, ಅನಸವ್ವ ಶಿಂದೆ, ನಾಗರತ್ನ ಸವಳಭಾವಿ, ವಾಸು ಚವ್ಹಾಣ, ವಿಜಯಕುಮಾರ ಹೂಗಾರ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.