ಕನ್ನಡಪ್ರಭ ವಾರ್ತೆ ಶಿರಾ
ಶಿರಾ ನಗರಸಭೆ 9ನೇ ವಾರ್ಡಿನ ಉಪಚುನಾವಣೆಯ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ನಳಿನ ರವಿಶಂಕರ್ ಅವರ ಪರ ಮತಯಾಚಿಸಿ ನಂತರ ಪ್ರವಾಸಿ ಮಂದಿರದಲ್ಲಿ ಮಾದ್ಯಮದೊಂದಿಗೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಆಮ್ ಆದ್ಮಿ ಪಕ್ಷದ ಗ್ಯಾರಂಟಿಗಳನ್ನು ಕದ್ದು ಅಧಿಕಾರಕ್ಕೆ ಬಂದಿದೆ. ಆ ಗ್ಯಾರಂಟಿಗಳನ್ನು ಸರಿಯಾಗಿ ಜಾರಿ ಮಾಡುವಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ರಸ್ತೆಗಳು ಹದಗೆಟ್ಟಿದೆ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ, ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷವು ಜನರನ್ನು ನೇರವಾಗಿ ಸಂಪರ್ಕಿಸಿ ಅವರ ಸಮಸ್ಯೆಗಳನ್ನು ಆಲಿಸಿ ಚರ್ಚಿಸಲು ಅರಳಿಕಟ್ಟೆ ಸಂವಾದ ಎಂಬ ಅಭಿಯಾನ ಹಮ್ಮಿಕೊಂಡಿದೆ ಎಂದರು.
ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಕೇಜ್ರಿವಾಲ್ ಆರೋಗ್ಯ ಶಿಕ್ಷಣ ಹಾಗೂ ಮೂಲಭೂತ ಸವಲತ್ತುಗಳನ್ನು ಒದಗಿಸುವ ನಿಟ್ಟಿನಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಸಹ ಕೇಂದ್ರ ಸರ್ಕಾರವು ರಾಜ್ಯಪಾಲರಿಗೆ ಸುಗ್ರೀವಾಜ್ಞೆಯ ಮೂಲಕ ಹೆಚ್ಚಿನ ಅಧಿಕಾರ ನೀಡುವ ಮೂಲಕ ಅಮ್ಮ ಆದ್ಮಿ ಪಕ್ಷದ ಸರ್ಕಾರಕ್ಕೆ ವಿನಾಕಾರಣ ತೊಂದರೆ ನೀಡುತ್ತಿದೆ. ದೆಹಲಿಯ ಜನರು ಅಮ್ ಆದ್ಮಿ ಪಕ್ಷಕ್ಕೆ ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ. ಕೇಜ್ರಿವಾಲ್ ಅವರ ಸರ್ಕಾರದ ಅಭಿವೃದ್ಧಿಯನ್ನೂ ಸ್ಪೂರ್ತಿಯಾಗಿ ತೆಗೆದುಕೊಂಡು ರಾಜ್ಯದಲ್ಲಿ ಪ್ರವಾಸ ಕೈಗೊಳ್ಳುವ ಮೂಲಕ ಪಕ್ಷವನ್ನು ಸಂಘಟಿಸುವ ಕೆಲಸ ಮಾಡುತ್ತಿದೆ ಎಂದರು.ಮುಖಂಡ ರವಿಶಂಕರ್ ಮಾತನಾಡಿ, ಶಿರಾ ನಗರಸಭೆಯ ೯ನೇ ವಾರ್ಡಿನಲ್ಲಿ ಗೆಲುವು ಸಾಧಿಸಿದ ಕೆಲವೇ ದಿನಗಳಲ್ಲಿ ನನ್ನ ಮೇಲೆ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿ ನ್ಯಾಯಾಲಯಕ್ಕೆ ಅಲೆಯುವಂತೆ ಮಾಡಿದರು. ಅಭಿವೃದ್ಧಿ ಕೆಲಸ ಮಾಡಲು ಬಿಡಲಿಲ್ಲ. ವಾರ್ಡಿನಲ್ಲಿ ರಸ್ತೆ, ಚರಂಡಿ, ಸರಕಾರಿ ಶಾಲೆಯ ಅಭಿವೃದ್ಧಿಯಾಗಬೇಕಿದೆ. ಆದ್ದರಿಂದ ನನ್ನ ಮೇಲೆ ನಂಬಿಕೆ ಇಟ್ಟು ಮತದಾರರು ಎಎಪಿ ಅಭ್ಯರ್ಥಿಯನ್ನು ಗೆಲ್ಲಿಸಿ ನಿಮ್ಮ ಸೇವೆಯನ್ನು ಮಾಡಲು ಅವಕಾಶ ನೀಡಿ ಎಂದರು.