ಬಿಜೆಪಿ ಅಭ್ಯರ್ಥಿ ಬೊಮ್ಮಾಯಿ ಬೆಂಬಲಿಸಿ-ಸೃಷ್ಟಿ ಪಾಟೀಲ

KannadaprabhaNewsNetwork |  
Published : May 01, 2024, 01:16 AM IST
ಪೊಟೊ ಶಿರ್ಷಿಕೆ ೩೦ ಎಚ್‌ಕೆಆರ್‌೦೨ | Kannada Prabha

ಸಾರಾಂಶ

ಭಾರತ ದೇಶದ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವುದು ಶತಸಿದ್ಧ. ಈ ನಿಟ್ಟಿನಲ್ಲಿ ಅವರ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರಿಗೆ ಹೆಚ್ಚಿನ ಮತದಲ್ಲಿ ಆಯ್ಕೆಮಾಡಬೇಕು ಎಂದು ಹಾವೇರಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸೃಷ್ಟಿ ಪಾಟೀಲ ಹೇಳಿದರು.

ಹಿರೇಕೆರೂರು: ಭಾರತ ದೇಶದ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವುದು ಶತಸಿದ್ಧ. ಈ ನಿಟ್ಟಿನಲ್ಲಿ ಅವರ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರಿಗೆ ಹೆಚ್ಚಿನ ಮತದಲ್ಲಿ ಆಯ್ಕೆಮಾಡಬೇಕು ಎಂದು ಹಾವೇರಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸೃಷ್ಟಿ ಪಾಟೀಲ ಹೇಳಿದರು. ತಾಲೂಕಿನ ಬೆಟಕೇರೂರ ಗ್ರಾಮದಲ್ಲಿ ಹಾವೇರಿ, ಗದಗ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ಪರ ಮತಯಾಚನೆ ನಿಮಿತ್ತ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಅಲ್ಲಿನ ಮಹಿಳೆಯರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮೋದಿಯವರಿಂದ ಮಾತ್ರ ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸಲು ಸಾಧ್ಯ, ಈ ಹಿಂದೆ ಮಾಜಿ ಪ್ರಧಾನಿ ದಿವಂಗತ ಅಟಲ್‌ಬಿಹಾರಿ ವಾಜಪೇಯಿ ಅವರ ವಿರುದ್ಧ ಈ ದೇಶದ ಜನತೆ ಮಾಡಿದ ತಪ್ಪನ್ನು, ಮರುಮಾಡದೇ, ಶುದ್ಧ, ಸ್ವಚ್ಛ, ಸಮಗ್ರ ದೇಶದ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ, ಮೋದಿಯವರನ್ನು ಮತ್ತೆ ಪ್ರಧಾನಿಯನ್ನಾಗಿಸುವುದು ನಮ್ಮ ನಿಮ್ಮೆಲ್ಲರ ಮಹತ್ತರ ಜವಾಬ್ದಾರಿಯಾಗಿದೆ ಎಂದರು. ಚೆನ್ನಮ್ಮ ಬಸವರಾಜ್ ಬೊಮ್ಮಾಯಿ ಮಾತನಾಡಿ, ನಮ್ಮ ಯಜಮಾನರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ತಾಲೂಕಿಗೆ ಬೃಹತ್ ಅನುದಾನ ನೀಡಿದ್ದಾರೆ. ಅದರಲ್ಲೂ ಏತ ನೀರಾವರಿ, ರಸ್ತೆ, ರೈತರ ಟ್ರ್ಯಾಕ್ಟರಿಗೆ ಡೀಸೆಲ್ ಸಬ್ಸಿಡಿ, ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಕೇಂದ್ರದಿಂದ ೬ ಸಾವಿರ ರು. ರಾಜ್ಯದಿಂದ ೪ ಸಾವಿರ ಸೇರಿದಂತೆ ಪ್ರತಿ ರೈತರಿಗೆ 10 ಸಾವಿರ ರು. ನೀಡಲಾಗುತ್ತಿತ್ತು ಎಂದರು. ತಾಲೂಕು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ದಂಡಗೀಹಳ್ಳಿ, ಮಂಜುಳಾ ಬಾಳಿಕಾಯಿ, ಶಿವಲೀಲಾ ರಂಗಕ್ಕನವರ್ ಬಸಮ್ಮ ಅಬಲೂರ್ ಲತಾ ಬಣಕಾರ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಗ್ರಾಮಸ್ಥರು ಇದ್ದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಕಡಿಮೆ ಗುಣದ ಔಷಧಿ ಎರಡೇ ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ