ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೊಡ್ಡಬಳ್ಳಾಪುರದಲ್ಲಿ ಬೃಹತ್ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಕೈಗೊಂಡರು.
ಇಲ್ಲಿನ ಶಾಂತಿನಗರದಲ್ಲಿರುವ ನಗರದೇವತೆ ಮುತ್ಯಾಲಮ್ಮ ದೇವಸ್ಥಾನದಿಂದ ಆರಂಭವಾಗಿ ಸೌಂದರ್ಯ ಮಹಲ್‌ವರೆಗೆ ನಡೆದ ರೋಡ್ ಶೋನಲ್ಲಿ ಕಾರ್ಯಕರ್ತರು, ಮುಖಂಡರು ಹಾಗೂ ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಅಪಾರ ಬೆಂಬಲ ತೋರಿದರು. ಮೂರನೇ ಬಾರಿಗೆ ನರೇಂದ್ರ ಮೋದಿಯವರನ್ನು ಪ್ರಧಾನಿಯಾಗಿಸುವ ಹಾಗೂ ಕ್ಷೇತ್ರದಲ್ಲಿ ಕಮಲ ಅರಳಿಸುವ ಘೋಷಣೆ ರೋಡ್ ಶೋ ದಲ್ಲಿ ಕೇಳಿಬಂತು. ಈ ವೇಳೆ ಮಾತನಾಡಿದ ವಿಜಯೇಂದ್ರ, ಪ್ರಧಾನಿ ನರೇಂದ್ರ ಮೋದಿ ವಿಕಸಿತ ಭಾರತ ನಿರ್ಮಿಸುವ ಸಂಕಲ್ಪದೊಂದಿಗೆ ಮುನ್ನಡೆದಿದ್ದಾರೆ. ಇದು ರಾಮರಾಜ್ಯದ ಪರಿಕಲ್ಪನೆ ಸಾಕಾರಗೊಳಿಸುವ ಹೆಜ್ಜೆ. ಶ್ರೀರಾಮನ ಆಡಳಿತದ ಆದರ್ಶಗಳನ್ನೇ ಪ್ರಧಾನಿ ಮೋದಿ ತಮ್ಮ ಆಡಳಿತದ ಮಾದರಿಯಾಗಿ ಇಟ್ಟುಕೊಂಡಿದ್ದಾರೆ. ಇದೇ ಕಾರಣಕ್ಕೆ ಕಳೆದ ಹತ್ತು ವರ್ಷಗಳಲ್ಲಿ ಭಾರತ ಅಚ್ಚರಿ ಎನಿಸುವ ಮಟ್ಟಿಗೆ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಧರ್ಮರಕ್ಷಕ, ಸಕಲ ಸದ್ಗುಣ ಸಂಪನ್ನನಾದ ಪ್ರಭು ಶ್ರೀರಾಮಚಂದ್ರನ ಜೀವನವೇ ನಮಗೂ ರಾಮ ಮಾರ್ಗ ಎಂದು ಹೇಳಿದರು.ಪ್ರಧಾನಿ ಮೋದಿ ಅವರು ಕಳೆದ ಹತ್ತು ವರ್ಷಗಳಲ್ಲಿ ಕೋಟ್ಯಂತರ ಬಡವರನ್ನು ಬಡತನದಿಂದ ಮೇಲೆಕ್ಕೆತ್ತಿದ್ದಾರೆ. ಜೊತೆಗೆ ಹಿಂದೂ ಪುಣ್ಯಕ್ಷೇತ್ರಗಳ ಅಭಿವೃದ್ಧಿ ಮಾಡಿದ್ದಾರೆ. ಮೋದಿ ಅವರದು ಪರಂಪರೆಯ ತಳಹದಿಯಲ್ಲಿ ನವ ಭಾರತ ಕಟ್ಟುವ ಪ್ರಯತ್ನ. ಬೇರೆ ದೇಶಗಳಲ್ಲಿ ಅಭಿವೃದ್ಧಿ ಅಂದರೆ ಕೇವಲ ನಗರೀಕರಣ ಅಥವಾ ಕೈಗಾರೀಕರಣ ಆಗಿರಬಹುದು. ಭಾರತದಲ್ಲಿ ಹಾಗಲ್ಲ ಸನಾತನ ಧರ್ಮವೇ ದೇಶದ ಆತ್ಮ. ಸ್ವಾಮಿ ವಿವೇಕಾನಂದರು ಹೇಳಿದಂತೆ ಭಾರತದ ಆತ್ಮ ತನ್ನ ಧರ್ಮದಲ್ಲಿ ಅಡಗಿದೆ. ಇಲ್ಲಿ ಎಷ್ಟೇ ಅಭಿವೃದ್ಧಿ, ಆಧುನಿಕತೆ ಬಂದರೂ ಸನಾತನ ಸಂಸ್ಕೃತಿ, ಪರಂಪರೆಯ ಮುಂದುವರಿಕೆ ಇಲ್ಲದೆ ಅಭಿವೃದ್ಧಿ ಅರ್ಥ ಕಳೆದುಕೊಳ್ಳುತ್ತದೆ. ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಗೆಲವು ನಿಶ್ಚಿತ ಎಂದರು.
ಅಭ್ಯರ್ಥಿ ಡಾ.ಕೆ.ಸುಧಾಕರ್, ಶಾಸಕ ಧೀರಜ್ ಮುನಿರಾಜು, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಹಿರಿಯ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಜರಿದ್ದರು.(ಒಂದು ಫೋಟೋ ಮಾತ್ರ ಬಳಸಿ)
13ಕೆಡಿಬಿಪಿ5-ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರೋಡ್ ಶೋ ಮೂಲಕ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಪ್ರಚಾರ ನಡೆಸಿದರು.13ಕೆಡಿಬಿಪಿ6-
ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಚುನಾವಣಾ ಪ್ರಚಾರ ಕೈಗೊಂಡು ಮತಯಾಚಿಸಿದರು.