ಮೋದಿ ಕೈಬಲಪಡಿಸಲು ಬಿಜೆಪಿ ಬೆಂಬಲಿಸಿ: ಬಸವರಾಜ ಬೊಮ್ಮಾಯಿ

KannadaprabhaNewsNetwork |  
Published : Apr 04, 2024, 01:10 AM ISTUpdated : Apr 04, 2024, 08:13 AM IST
೨ಎಚ್‌ಕೆಆರ್೧ | Kannada Prabha

ಸಾರಾಂಶ

ಕಾಂಗ್ರೆಸ್ ಸರ್ಕಾರ ಬಂದಾಗ ಬರ ಬರುತ್ತದೆ. ಅವರ ಗ್ಯಾರಂಟಿಗಳಲ್ಲಿ ಬರಗಾಲವೂ ಗ್ಯಾರಂಟಿಯಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

 ಹಿರೇಕೆರೂರು :  ದೇಶದ ಭದ್ರತೆ, ಏಕತೆ, ಸುರಕ್ಷತೆ ಹಾಗೂ ಅಭಿವೃದ್ಧಿ ಪಥದತ್ತ ಕೊಂಡಯ್ಯುವ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ಜತೆಗೆ ಅವರನ್ನು ಮಗದೊಮ್ಮೆ ಪ್ರಧಾನ ಮಂತ್ರಿಯನ್ನಾಗಿಸಲು ಬಿಜೆಪಿಗೆ ಬೆಂಬಲ ನೀಡಬೇಕು ಎಂದು ಮಾಜಿ ಸಿಎಂ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ತಾಲೂಕಿನ ಅಬಲೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಬಂದಾಗ ಬರ ಬರುತ್ತದೆ. ಅವರ ಗ್ಯಾರಂಟಿಗಳಲ್ಲಿ ಬರಗಾಲವೂ ಗ್ಯಾರಂಟಿಯಾಗಿದೆ. ರೈತರು ಸಂಕಷ್ಟದಲ್ಲಿದ್ದು, ರಾಜ್ಯ ಸರ್ಕಾರ ಬರಪರಿಹಾರ ಹಣ ಬಿಡುಗಡೆ ಮಾಡಿಲ್ಲ, ಮಾತೆತ್ತಿದರೆ ಕೇಂದ್ರದ ಕಡೆ ಬೊಟ್ಟು ತೋರಿಸುವ ಕಾರ್ಯಮಾಡುತ್ತಾರೆ. ರಾಜ್ಯ ಸರ್ಕಾರ ಬಂದು ಹತ್ತು ತಿಂಗಳು ಕಳೆದರೂ ಅನುದಾನ ಬಿಡುಗಡೆ ಮಾಡಿಲ್ಲ. ಈ ಕುರಿತು ಆಡಳಿತ ಪಕ್ಷದವರೇ ಅಳಲು ತೋಡಿಕೊಳ್ಳುತ್ತಿದ್ದಾರೆ ಎಂದರು.

ಮಾಜಿ ಸಚಿವ ಬಿ.ಸಿ. ಪಾಟೀಲ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಭದ್ರತೆ, ಆರ್ಥಿಕ ಪ್ರಗತಿಗೆ ಹಾಗೂ ಬಡವರು, ರೈತರು, ಮಹಿಳೆಯರಿಗೆ ಸೌಕರ್ಯಗಳನ್ನು ಕಲ್ಪಿಸಿದ್ದಾರೆ. ದೇಶದ ಭದ್ರತೆಗೆ ಆದ್ಯತೆ ನೀಡಿ ಉಗ್ರರನ್ನು ಮಟ್ಟ ಹಾಕುವ ಕಾರ್ಯ ಮಾಡಿ ದೇಶದ ಜನತೆ ನೆಮ್ಮದಿಯಿಂದ ಇರುವಂತೆ ಮಾಡಿದ ನರೇಂದ್ರ ಮೋದಿ ಅವರನ್ನು ಮಗದೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಜನತೆ ಸಂಕಲ್ಪ ಮಾಡಿದ್ದಾರೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ, ಮಾಜಿ ಮುಖ್ಯ ಸಚೇತಕ ಡಿ.ಎಂ. ಸಾಲಿ, ಮುಖಂಡರಾದ ಎಸ್.ಎಸ್. ಪಾಟೀಲ, ಎನ್.ಎಂ. ಈಟೇರ, ಲಿಂಗರಾಜ ಚಪ್ಪರದಳ್ಳಿ, ಪಾಲಾಕ್ಷಗೌಡ ಪಾಟೀಲ, ಡಿ.ಸಿ. ಪಾಟೀಲ, ಶಿವಕುಮಾರ ತಿಪ್ಪಶೆಟ್ಟಿ, ಬಸಮ್ಮ ಅಬಲೂರು, ಗೀತಾ ದಂಡಗೀಹಳ್ಳಿ, ಲತಾ ಬಣಕಾರ, ನಿಂಗಾಚಾರಿ ಮಾಯಾಚಾರಿ ಸೇರಿದಂತೆ ಕಾರ್ಯಕರ್ತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ