ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಬೆಂಬಲಿಸಿ: ಅರುಣ್ ಯಾದವ್

KannadaprabhaNewsNetwork |  
Published : Jul 29, 2026, 02:30 AM IST
ಕಂಪ್ಲಿಯಲ್ಲಿ ನಡೆದ ಕಾಂಗ್ರೆಸ್ ಸಂಘಟನೆ ಸೃಜನ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕೇಂದ್ರದ ಮಾಜಿ ಸಚಿವ ಅರುಣ್ ಯಾದವ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. | Kannada Prabha

ಸಾರಾಂಶ

ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಪಕ್ಷದ ಕಾರ್ಯಕರ್ತರು ಸಂಘಟಿತವಾಗಿ ಕೆಲಸ ಮಾಡಬೇಕು ಮತ್ತು ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅರುಣ್ ಯಾದವ್ ಹೇಳಿದರು.

ಕಂಪ್ಲಿ: ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಪಕ್ಷದ ಕಾರ್ಯಕರ್ತರು ಸಂಘಟಿತವಾಗಿ ಕೆಲಸ ಮಾಡಬೇಕು ಮತ್ತು ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅರುಣ್ ಯಾದವ್ ಹೇಳಿದರು.

ಪಟ್ಟಣದ ಶಾಸಕ ಜೆ.ಎನ್. ಗಣೇಶ್ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಂಘಟನೆ ಸೃಜನ ಅಭಿಯಾನ ಅಂಗವಾಗಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಎಐಸಿಸಿ ನಿರ್ದೇಶನದಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಪಕ್ಷದ ಸಿದ್ಧಾಂತಕ್ಕೆ ನಿಷ್ಠೆಯಿಂದ ದುಡಿದಿರುವ ಕಾರ್ಯಕರ್ತರನ್ನು ಗುರುತಿಸಿ ಸೂಕ್ತ ಜವಾಬ್ದಾರಿಗಳನ್ನು ನೀಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದರು.ಕಾಂಗ್ರೆಸ್ ಪಕ್ಷ ಯಾವಾಗಲೂ ಸಾಮಾಜಿಕ ನ್ಯಾಯದ ತತ್ವವನ್ನು ಅನುಸರಿಸಿದ್ದು, ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಹೇಳಿದರು.

ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶಿವಯೋಗಿ ಮಾತನಾಡಿ, ಬಳ್ಳಾರಿ ಗ್ರಾಮೀಣ ಜಿಲ್ಲೆ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದು, ಜಿಲ್ಲಾದ್ಯಂತ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಜಿಲ್ಲಾ ಅಧ್ಯಕ್ಷರಾಗಿ ಯಾರೇ ಆಯ್ಕೆಯಾದರೂ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷದ ಸಂಘಟನೆಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ನೀಟ್ ಪರೀಕ್ಷೆ ಅಕ್ರಮ ಪ್ರಕರಣವನ್ನು ಉಲ್ಲೇಖಿಸಿದ ಅವರು, ಕಾಂಗ್ರೆಸ್ ಪಕ್ಷ ದೇಶಾದ್ಯಂತ ಈ ವಿಷಯವಾಗಿ ಹೋರಾಟ ನಡೆಸಿದ್ದು, ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡುವಂತಾಗಿದೆ ಎಂದು ಹೇಳಿದರು.

ನೀಟ್ ಹಗರಣದ ವಿರುದ್ಧ ನಡೆದ ಪ್ರತಿಭಟನೆ ವೇಳೆ ಸಾವನ್ನಪ್ಪಿದವರ ಕುಟುಂಬಗಳಿಗೆ ತಕ್ಷಣ ಪರಿಹಾರ ಧನ ನೀಡಬೇಕು ಹಾಗೂ ಪ್ರತಿಭಟನಾಕಾರರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸೈಯದ್ ಅಲಿ ಮೆಹಖಂದರ್ ಹಾಗೂ ಕಿಶೋರಿ ಬಂಡೂರು ಪಕ್ಷದ ಸಂಘಟನೆ ಬಲವರ್ಧನೆ, ಕಾರ್ಯಕರ್ತರ ಪಾತ್ರ ಮತ್ತು ಮುಂಬರುವ ಚುನಾವಣೆ ಸಿದ್ಧತೆಗಳ ಕುರಿತು ಮಾತನಾಡಿದರು.

ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಶ್ರೀನಿವಾಸರಾವ್, ಚನ್ನಬಸವನಗೌಡ, ಪ್ರಮುಖರಾದ ಚಿದಾನಂದಪ್ಪ, ಏಕಾಂಬರಪ್ಪ, ಎಂ. ಸುಧೀರ್, ಹಬೀಬ್ ರೆಹಮಾನ್, ಭಟ್ಟ ಪ್ರಸಾದ್, ಕೆ.ಎಸ್. ಚಾಂದ್ ಬಾಷ, ಮಲ್ಲಿಕಾರ್ಜುನ, ವಾಲ್ಮೀಕಿ ರಘು, ಸೈಯದ್ ಉಸ್ಮಾನ್, ಜಾಫರ್ ಸೇರಿದಂತೆ ಗ್ರಾಮ ಪಂಚಾಯಿತಿ ಹಾಗೂ ಪುರಸಭೆಯ ಮಾಜಿ ಸದಸ್ಯರು, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿದ್ದರು.ಕಾಂಗ್ರೆಸ್‌ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ: ವೇಣುಗೋಪಾಲ ರಾವ್‌

ಹೂವಿನಹಡಗಲಿ:

ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ. ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬಿಸಲು ತಳಮಟ್ಟದಿಂದ ಸಂಘಟನೆಯ ಅಗತ್ಯವಿದೆ ಎಂದು ಎಐಸಿಸಿ ವೀಕ್ಷಕ ವೇಣುಗೋಪಾಲ್ ರಾವ್ ಹೇಳಿದರು.

ಇಲ್ಲಿನ ದಾಕ್ಷಾಯಿಣಿ ಕಲ್ಯಾಣ ಮಂಟಪದಲ್ಲಿ ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ್ದ ಸಂಘಟನೆ ಸೃಜನ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಿರ್ದೇಶನದಂತೆ ಕಾಂಗ್ರೆಸ್‌ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಮಾಡಲಾಗುತ್ತಿದೆ. ಕಾರ್ಯಕರ್ತರ ಅಭಿಪ್ರಾಯ ಒಟ್ಟುಗೂಡಿಸಿ ವರಿಷ್ಠರಿಗೆ ತಲುಪಿಸುತ್ತೇವೆ. ಪಕ್ಷದ ಜಿಲ್ಲಾಧ್ಯಕ್ಷರ ಆಯ್ಕೆಗೆ ಇದೇ ಮಾನದಂಡವಾಗಲಿದೆ ಎಂದರು.

ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ ನಾಯ್ಕ ಮಾತನಾಡಿ, ರಾಜ್ಯ ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ. ಇದೊಂದು ದೇಶದಲ್ಲೇ ಕ್ರಾಂತಿಕಾರಕ ಹೆಜ್ಜೆಯಾಗಿದೆ. ಕಾಂಗ್ರೆಸ್ ಪಕ್ಷದ ಸಂಘಟನೆಗೆ ಈ ಯೋಜನೆಗಳೇ ಅಸ್ತ್ರವಾಗಿದ್ದು, ಕಾರ್ಯಕರ್ತರು ಜನರ ಮನೆಬಾಗಿಲಿಗೆ ಹೋಗಿ ಮಾಹಿತಿಯನ್ನು ಮನವರಿಕೆ ಮಾಡಿಕೊಡಬೇಕೆಂದು ಮನವಿ ಮಾಡಿದರು.

ಕೆಪಿಸಿಸಿ ವೀಕ್ಷಕ ಸುಭಾಷ್ ರಾಠೋಡ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿರಾಜ್ ಶೇಖ್ ಮಾತನಾಡಿದರು. ಕೆಪಿಸಿಸಿ ವೀಕ್ಷಕರಾದ ಆರತಿ ಚಂದ್ರಶೇಖರ, ಮರಿಯೋಜಿ ರಾವ್, ಸೂರಜ್ ತಿವಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಕೊಟ್ರೇಶ, ಬಿ.ಹನುಮಂತಪ್ಪ, ಪ್ರಚಾರ ಸಮಿತಿ ಅಧ್ಯಕ್ಷ ಸೋಗಿ ಹಾಲೇಶ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸೈನಿಕರನ್ನು ಗೌರವಿಸುವ ಕಾರ್ಯವಾಗಲಿ
ಶೆಟ್ಟಿಗೇರಿ: ಮಾಜಿ ಸೈನಿಕರ ಸಂಘದಿಂದ ಕಾರ್ಗಿಲ್ ವಿಜಯ ದಿನ ಆಚರಣೆ