ಸಂವಿಧಾನ ರಕ್ಷಣೆಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಸುನೀಲ್‌ ಬೋಸ್‌

KannadaprabhaNewsNetwork |  
Published : Apr 15, 2024, 01:19 AM IST
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ | Kannada Prabha

ಸಾರಾಂಶ

ವಿಶ್ವ ಮಾನವ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಸಂವಿಧಾನ ಅಪಾಯದಲ್ಲಿದ್ದು, ಅದನ್ನು ರಕ್ಷಣೆ ಮಾಡಲು ಪ್ರತಿಯೊಬ್ಬರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ತಿಳಿಸಿದರು.

ಕನ್ನಡಪ್ರಭ ವಾರ್ತೆಚಾಮರಾಜನಗರ

ವಿಶ್ವ ಮಾನವ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಸಂವಿಧಾನ ಅಪಾಯದಲ್ಲಿದ್ದು, ಅದನ್ನು ರಕ್ಷಣೆ ಮಾಡಲು ಪ್ರತಿಯೊಬ್ಬರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ನಡೆದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ೧೩೩ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುರ್ಷ್ಪಾಚನೆ ಮಾಡಿ ಮಾತನಾಡಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಹುಟ್ಟಿದ ಪವಿತ್ರವಾದ ದಿನವಾಗಿದ್ದು, ಅಂಬೇಡ್ಕರ್ ಅನುಯಾಯಿಗಳಾದ ನಾವೆಲ್ಲರು ಅವರ ತತ್ವ ಸಿದ್ಧಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಜೊತೆಗೆ ಅವರ ಹಾದಿಯಲ್ಲಿಯೇ ನಡೆಯೋಣ. ಅವರು ದೇಶಕ್ಕೆ ಹಾಕಿಕೊಟ್ಟ ಸಂವಿಧಾನ ರಕ್ಷಣೆ ನಮ್ಮದಾಗಬೇಕು. ಈಗಾಗಲೇ ಬಿಜೆಪಿಯವರು ೪೦೦ಕ್ಕು ಹೆಚ್ಚು ಬಹುಮತ ಕೊಟ್ಟರೆ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂಬ ಮಾತುಗಳನ್ನಾಡುತ್ತಿದ್ದಾರೆ. ಇದರಿಂದ ಎಚ್ಚೆತ್ತು ಸಂವಿಧಾನ ರಕ್ಷಣೆಗೆ ಮುಂದಾಗೋಣ ಎಂದರು. ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಮಹಾನ್ ಮಾನವತಾವಾದಿ ಹಾಗು ವಿಶ್ವ ಮಾನವ, ಶೋಷಿತ ಸಮಾಜದ ಧ್ವನಿಯಾಗಿ ಸಂವಿಧಾನ ಬದ್ದವಾಗಿ ಎಲ್ಲಾ ವರ್ಗಗಳಿಗೆ ಮೀಸಲಾತಿ ಸೌಲಭ್ಯವನ್ನು ಕಲ್ಪಿಸಿಕೊಟ್ಟ ಮಹಾನ್ ನಾಯಕರು ಎಂದು ಬಣ್ಣಿಸಿದರು. ಅಂಬೇಡ್ಕರ್ ಅವರ ಜೀವನ ತತ್ವ ಅದರ್ಶ ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದೆ. ಶೋಷಿತ ಸಮಾಜದಲ್ಲಿ ಹುಟ್ಟಿದ ಅಂಬೇಡ್ಕರ್ ಜೀವನದ್ದುಕ್ಕೂ ಅಪಮಾನ, ನೋವುಗಳನ್ನು ಉಂಟು, ಪಾಂಡಿತ್ಯ ಪಡೆದು, ದೇಶಕ್ಕೆ ಉತ್ಕೃಷ್ಟವಾದ ಸಂವಿಧಾನ ನೀಡಿದ್ದರು. ಅವರು ನೀಡಿರುವ ಕೊಡುಗೆ ಅಪಾರ, ಅನನ್ಯ, ಸ್ವಾಭಿಮಾನದಿಂದ ಜೀವನ ನಡೆಸುವುದನ್ನು ಹೇಳಿಕೊಂಡು ಮಹಾನ್ ಗುರು ಎಂದು ಬಣ್ಣಿಸಿದರು. ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ವಿಶ್ವದಲ್ಲಿಯೇ ಅತ್ಯಂತ ಶೇಷ್ಠವಾದ ಸಂವಿಧಾನ ನೀಡಿದ ಅಂಬೇಡ್ಕರು, ಅವರ ತತ್ವ ಸಿದ್ಧಾಂತಗಳನ್ನು ಎಲ್ಲರು ಅಳವಡಿಸಿಕೊಂಡು ಮುನ್ನಡೆಯಬೇಕು. ಅಂಬೇಡ್ಕರ್ ಕೊಡುಗೆಯನ್ನು ಕಾಂಗ್ರೆಸ್ ಪಕ್ಷ ಸದಾಸ್ಮರಣೆ ಮಾಡಿಕೊಳ್ಲುತ್ತಾ. ಅವರಿಗೆ ಗೌರವ ನೀಡುತ್ತ ವಿಶ್ವದಲ್ಲಿ ಅವರ ಕೀರ್ತಿ ಹೆಚ್ಚುವಂತೆ ಮಾಡುತ್ತಾ ಬಂದಿದೆ. ದೀನದಲಿತರು ಬಡವರ ವರ್ಗದ ಏಳಿಗೆಗೆ ದುಡಿದವರು ಈ ಶತಮಾನದ ವಿಶ್ವ ಮಾನವ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವ್, ಆರ್. ಮಹದೇವ್, ಮಾಜಿ ಸಂಸದ ಎಂ. ಶಿವಣ್ಣ, ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ, ಎಸ್ಸಿ ಘಟಕದ ಅಧ್ಯಕ್ಷ ಸೋಮೇಶ್ವರ್, ಕೊಳ್ಳೇಗಾಲ ನಾಗರಾಜು, ಬ್ಲಾಕ್ ಅಧ್ಯಕ್ಷರಾದ ಮಹಮದ್ ಅಸ್ಗರ್, ಎ.ಎಸ್. ಗುರುಸ್ವಾಮಿ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಫ್ಜಲ್ ಷರೀಪ್, ಲಕ್ಷ್ಮಿನಾರಾಯಣ್, ರಾಜ್ಯ ಎಸ್ಟಿ ಘಟಕದ ಪ್ರಧಾನ ಕಾರ್ಯದರ್ಶಿ ಪು. ಶ್ರೀನಿವಾಸನಾಯಕ, ಹಿಂದುಳಿದ ವರ್ಗಗಳ ಘಟಕದ ರಾಜ್ಯಪ್ರಧಾನ ಕಾರ್ಯದರ್ಶಿ ಸಿ.ಎ. ಮಹದೇವಶೆಟ್ಟಿ, ಜಿಪಂ ಮಾಜಿ ಸದಸ್ಯ ಸದಾಶಿವಮೂರ್ತಿ, ಕೆರೆಹಳ್ಳಿ ನವೀನ್‌, ತಾಪಂ ಮಾಜಿ ಸದಸ್ಯ ಶಿವಸ್ವಾಮಿ, ಮುಖಂಡರಾದ ಉಮೇಶ್, ವಕೀಲ ಚಿನ್ನಸ್ವಾಮಿ, ಅರುಣ್‌ಕುಮಾರ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಲತಾ ರಾಜಶೇಖರ್ ಜತ್ತಿ, ಉಮ್ಮತ್ತೂರು ಭಾಗ್ಯ, ನಾಗರತ್ನ, ಶಿವಮೂರ್ತಿ, ಎಎಚ್‌ಎನ್ ಖಾನ್, ಶಿವಸ್ವಾಮಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು