ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಗೆಜ್ಜಲಗೆರೆ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಚೇರಿ ಹಾಗೂ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿ, ಮಹಿಳಾ ಸಂಘಟನೆಗಳು ಸಹಕಾರ ಸಂಘದ ಮೂಲಕ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಹಲವರಿಗೆ ಉದ್ಯೋಗ ಕಲ್ಪಿಸುವಲ್ಲಿ ಸಹಕಾರಿಯಾಗಿದೆ ಎಂದರು.
ಸಹಕಾರ ಸಂಘಗಳಲ್ಲಿ ಮಹಿಳೆಯರಿಗೆ ಹಾಲಿ ಶೇ.33ರಷ್ಟು ಮೀಸಲಾತಿ ಇದೆ. ಇದನ್ನು ಶೇ.50ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಿ ಮಹಿಳೆಯರು ಬಹಳ ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಅವರ ಬೇಡಿಕೆ ಈಡೇರಿಸಬೇಕು ಎಂದು ಸಲಹೆ ನೀಡಿದರು. ಸಹಕಾರ ಕ್ಷೇತ್ರ ಬೆಳೆದರೆ ಕೃಷಿಕರ ಪ್ರಗತಿ ಸಾಧ್ಯವಾಗುತ್ತದೆ. ಸಹಕಾರ ಸಂಘಗಳ ಜನಪ್ರತಿನಿಧಿಗಳು ಜನಪ್ರತಿನಿಧಿಗಳು ಸರ್ಕಾರದ ಯೋಜನೆಗಳನ್ನು ರೈತರಿಗೆ ಸಮರ್ಪಕವಾಗಿ ತಲುಪುವ ಕಾರ್ಯದಲ್ಲಿ ತೊಡಗಬೇಕು ಎಂದರು.ಸರ್ಕಾರದ ಯೋಜನೆಗಳು ಸಹಕಾರ ಸಂಘಗಳಿಗಿಂತ ರೈತರಿಗೆ ಹೆಚ್ಚಿನ ಉಪಯುಕ್ತವಾಗಿರುವುದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಯೋಜನೆಗಳ ಲಾಭ ಪಡೆದು ಅಭಿವೃದ್ಧಿಪಥದಲ್ಲಿ ಮುನ್ನಡೆಯಬೇಕು. ಸಹಕಾರ ಸಂಘಗಳ ಮೂಲಕ ರೈತರು ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಲು ಹೆಚ್ಚಿನ ಆಸಕ್ತಿ ಹೊಂದಬೇಕು. ಇದರಿಂದ ತಮ್ಮ ಅಭಿವೃದ್ಧಿ ಜೊತೆಗೆ ಸಹಕಾರ ಸಂಘವು ಆರ್ಥಿಕವಾಗಿ ಸದೃಢಗೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ .ಸಂದರ್ಶ, ಸಿಇಒ ವನಜಾಕ್ಷಿ, ಸಹಕಾರ ಸಂಘಗಳ ಉಪನಿಬಂಧಕಿ ಟಿ.ಆರ್.ರೇಖಾ, ಸಹಾಯಕ ನಿಬಂಧಕಿ ಕೆ.ಅನಿತ, ಅಭಿವೃದ್ಧಿ ಅಧಿಕಾರಿ ಧರಣಿಕುಮಾರ್, ತಾಲೂಕು ಸಹಕಾರ ಸಂಘದ ಉಪಾಧ್ಯಕ್ಷ ಪಿ. ರಾಘವ, ನಿರ್ದೇಶಕಿ ಸಿ.ಪಿ.ಸುಧಾ, ಸಂಘದ ಅಧ್ಯಕ್ಷ ಕೆ.ಬಿ.ಕೃಷ್ಣಪ್ಪ, ಉಪಾಧ್ಯಕ್ಷ ಸತೀಶ್, ನಿರ್ದೇಶಕರಾದ ಜಿ.ಬಿ.ಕೃಷ್ಣ, ಸಿದ್ದಪ್ಪ, ಕಾಶಿ ಹೆಗಡೆ, ಮಹದೇವು, ಸುಶೀಲಮ್ಮ, ಪ್ರಭಾವತಿ ಸಿದ್ದಪ್ಪಗೌಡ, ಶಿವ ಬೋರಯ್ಯ, ಅರವಿಂದ, ಸಿಇಒ ಕೆ.ಡಿ. ರಾಜೇಶ್ ಮತ್ತಿತರ ಇದ್ದರು.