ಯಾದಗಿರಿ: ಪೊಕ್ಸೋ ಕಾಯ್ದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗೆ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರೇಮಮೂರ್ತಿ ಕೆ ತಿಳಿಸಿದ್ದಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯವನ್ನು ಮಾಡಲು ಮತ್ತು ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ತರಬೇತಿ ನೀಡಲಾಗುತ್ತದೆ. ಅರ್ಜಿಗಳನ್ನು ಸಲ್ಲಿಸುವ ಅರ್ಜಿದಾರರು ತಮ್ಮ ಅವಶ್ಯಕ ದಾಖಲಾತಿಗಳೊಂದಿಗೆ ಅ.30ರೊಳಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೋಣೆ ಸಂಖ್ಯೆ ಸಿ-17, ಚಿತ್ತಾಪೂರ ರಸ್ತೆ, ಮಿನಿ ವಿಧಾನಸೌಧ ಯಾದಗಿರಿಗೆ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.