ಕನ್ನಡಪ್ರಭ ವಾರ್ತೆ ಹಾವೇರಿ
ನಗರದ ಜಿಲ್ಲಾಸ್ಪತ್ರೆ ಸಮೀಪ "ಕರ್ನಾಟಕಕ್ಕಾಗಿ ನಾವು'''' ಎಂಬ ಬೈಕ್ ಜಾಥಾ ಮೂಲಕ ಆಗಮಿಸಿದ್ದ ಅವರು ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದರು.
ದಂಡಿ ಸತ್ಯಾಗ್ರಹದಲ್ಲಿ ಮಹಾತ್ಮಾ ಗಾಂಧೀಜಿ ಜೊತೆ ಪಾದಯಾತ್ರೆಯಲ್ಲಿ ಕರ್ನಾಟಕದಿಂದ ಭಾಗವಹಿಸಿದ ಏಕೈಕ ವ್ಯಕ್ತಿ ಮೈಲಾರ ಮಹದೇವಪ್ಪನವರು ಅವಿಭಜಿತ ಧಾರವಾಡ ಜಿಲ್ಲೆಯವರು. ಇಂತಹ ಜಿಲ್ಲೆಯಲ್ಲಿ ಇಂದು ಕುಟುಂಬ ರಾಜಕಾರಣ, ಭ್ರಷ್ಟಾಚಾರ ಹೆಚ್ಚಾಗಿದೆ. ಬನ್ನಿ ಒಳ್ಳೆ ನಾಡನ್ನು ಕಟ್ಟೋಣ, ಸ್ವಚ್ಛ, ಭ್ರಷ್ಟಾಚಾರ ರಹಿತ ನಾಡನ್ನು ನಿರ್ಮಿಸೋಣ ಮುಂಬರುವ ಜಿಪಂ, ತಾಪಂ ಚುನಾವಣೆಗಳಲ್ಲಿ ಸ್ಪರ್ಧೆ ಮಾಡಿ ಎಂದರು.ಭ್ರಷ್ಟರನ್ನು, ಅಪ್ರಾಮಾಣಿಕರನ್ನು, ಸ್ವಜನಪಕ್ಷಪಾತಿಗಳನ್ನು, ಅನೈತಿಕ ನಡವಳಿಕೆ ಉಳ್ಳವರನ್ನು, ಸುಳ್ಳರನ್ನು, ಸಮಾಜಘಾತುಕ ಶಕ್ತಿಗಳನ್ನು, ಕುಟುಂಬ ರಾಜಕಾರಣದ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಮಣ್ಣುಪಾಲು ಮಾಡುತ್ತಿರುವ ಜೆಸಿಬಿ ಪಕ್ಷಗಳ ಪರಮಸ್ವಾರ್ಥಿ ರಾಜಕಾರಣಿಗಳನ್ನು ತಮ್ಮ ಮತ್ತು ತಮ್ಮ ಮಕ್ಕಳ ರಾಜಕೀಯ ನಾಯಕರೆಂದು ನಾವು ಒಪ್ಪಿಕೊಳ್ಳುವುದಿಲ್ಲ ಎಂದರು.
ಬೈಕ್ ಜಾಥಾದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ.ಎನ್., ರಾಜ್ಯ ಕಾರ್ಯದರ್ಶಿ ರಘು ಜಾಣಗೆರೆ, ನರಸಿಂಹ ಮೂರ್ತಿ, ಮಲ್ಲಿಕಾರ್ಜುನಯ್ಯ ಬಿ.ಎಸ್., ಜಂಟಿ ಕಾರ್ಯದರ್ಶಿ ರಘುಪತಿ ಭಟ್, ಸಂಘಟನಾ ಕಾರ್ಯದರ್ಶಿ ಎಲ್. ಜೀವನ್, ಕೃಷ್ಣ ವಿ.ಬಿ., ಚಂದ್ರಶೇಖರ್ ಮಠದ, ಬಿ.ಜಿ. ಕುಂಬಾರ್, ಮಹೇಶ್ ನಗರಂಗೆರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ, ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ಬೇಂದ್ರೆ ಹಾಗೂ ಇತರ ಪದಾಧಿಕಾರಿಗಳು ಭಾಗವಹಿಸಿದ್ದರು.