ಹಣ- ಆಮಿಷಗಳಿಗೆ ಬಲಿಯಾಗದೇ ಕುಮಾರಸ್ವಾಮಿಯನ್ನು ಬೆಂಬಲಿಸಿ: ಮೈತ್ರಿ ಮುಖಂಡರು

KannadaprabhaNewsNetwork | Published : Apr 16, 2024 1:09 AM

ಸಾರಾಂಶ

ಮದ್ದೂರು ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಗ್ಯಾರಂಟಿ ಯೋಜನೆಗಳು ಚುನಾವಣೆ ಮುಗಿದ ನಂತರ ನಿಲ್ಲುತ್ತವೆ. ಎಚ್.ಡಿ.ಕುಮಾರಸ್ವಾಮಿ ಜಿಲ್ಲೆಯಿಂದ ಸಂಸದರಾಗಿ ಆಯ್ಕೆಯಾದರೆ ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಕೆಲಸ ಮಾಡುತ್ತಾರೆ. ಪ್ರಧಾನಿ ಮೋದಿ ದೇಶಕ್ಕೆ ಎಷ್ಟು ಮುಖ್ಯವೋ ರಾಜ್ಯಕ್ಕೆ ಕುಮಾರಸ್ವಾಮಿ ಅವರು ಅಷ್ಟೇ ಮುಖ್ಯವಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಭಾರತೀನಗರ

ಹಣ ಆಮಿಷಗಳಿಗೆ ಬಲಿಯಾಗದೇ ರೈತರ ಬಗ್ಗೆ ಕಾಳಜಿಯುಳ್ಳ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬೆಂಬಲಿಸಬೇಕು ಎಂದು ಬಿಜೆಪಿ- ಜೆಡಿಎಸ್ ಮುಖಂಡರು ಮನವಿ ಮಾಡಿದರು.

ಕೆ.ಎಂ.ದೊಡ್ಡಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಜೆಡಿಎಸ್‌ನ ಎಸ್.ಗುರುಚರಣ್ , ಸಂತೋಷ್ ತಮ್ಮಣ್ಣ, ಬಿಜೆಪಿಯ ಎಸ್.ಪಿ.ಸ್ವಾಮಿ, ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಗ್ಯಾರಂಟಿ ಯೋಜನೆಗಳು ಚುನಾವಣೆ ಮುಗಿದ ನಂತರ ನಿಲ್ಲುತ್ತವೆ ಎಂದರು.

ಎಚ್.ಡಿ.ಕುಮಾರಸ್ವಾಮಿ ಜಿಲ್ಲೆಯಿಂದ ಸಂಸದರಾಗಿ ಆಯ್ಕೆಯಾದರೆ ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಕೆಲಸ ಮಾಡುತ್ತಾರೆ. ಪ್ರಧಾನಿ ಮೋದಿ ದೇಶಕ್ಕೆ ಎಷ್ಟು ಮುಖ್ಯವೋ ರಾಜ್ಯಕ್ಕೆ ಕುಮಾರಸ್ವಾಮಿ ಅವರು ಅಷ್ಟೇ ಮುಖ್ಯವಾಗಿದ್ದಾರೆ ಎಂದರು.

ಪುರಸಭೆ ಸದಸ್ಯೆ ಪ್ರೀಯಾಂಕ ಅಪ್ಪುಪಿಗೌಡ ಮಾತನಾಡಿ, ನಮ್ಮ ತಾಯಂದಿರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿರುವ ಎಚ್.ಡಿ.ಕುಮಾರಸ್ವಾಮಿ ಅವರ ಮಾತನ್ನು ಮಹಿಳೆಯರು ತಪ್ಪಾಗಿ ಅರ್ಥೈಸಿಕೊಳ್ಳಬಾರದು ಎಂದು ಕಾಂಗ್ರೆಸ್ ಪ್ರತಿಭಟನೆಗೆ ಆಕ್ರೋಶ ವ್ಯಕ್ತಪಡಿಸಿದರು.

ನಂತರ ತೊರೆಬೊಮ್ಮನಹಳ್ಳಿ, ಎಸ್.ಐ.ಹೊನ್ನಲಗೆರೆ, ಮೆಣಸಗೆರೆ, ಅಣ್ಣೂರು, ಭಾರತೀನಗರ, ಬಿದರಹಳ್ಳಿ, ಗ್ರಾ.ಪಂ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಜಾ.ದಳ ಘಟಕದ ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಮುಖಂಡರಾದ ರಘುಗೌಡ, ಜಿಪಂ ಮಾಜಿ ಸದಸ್ಯ ಜಿ.ಎಂ.ಮನು, ಕರಡಕೆರೆ ಹನುಮಂತೇಗೌಡ, ಎಚ್.ಎಂ.ಮರಿಮಾದೇಗೌಡ, ಗ್ರಾಪಂ ಮಾಜಿ ಅಧ್ಯಕ್ಷ ವೆಂಕಟೇಶ್, ಕರಿಯಪ್ಪ, ರಘು, ಮಾಜಿ ಸೈನಿಕ ಸತೀಶ್, ಕೆ.ಟಿ.ಸುರೇಶ್ ಸೇರಿದಂತೆ ಹಲವರಿದ್ದರು.ಅಸ್ವಸ್ಥಗೊಂಡಿದ್ದ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಆರೋಗ್ಯದಲ್ಲಿ ಚೇತರಿಕೆ

ಮದ್ದೂರು:ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿ.ಸಿ.ತಮ್ಮಣ್ಣ ತೀವ್ರ ಸುಸ್ತಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು ಅವರ ದೇಹದ ತಪಾಸಣೆ ನಡೆಸಿದ್ದಾರೆ. ಸಂಜೆ ವೇಳೆಗೆ ವೈದ್ಯಕೀಯ ವರದಿ ಬರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.ನಂತರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದರೆ ಮುಂದಿನ ಎರಡು ದಿನಗಳಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ. ಲೋಕಸಭಾ ಚುನಾವಣೆ ಮಂಡ್ಯ ಕ್ಷೇತ್ರದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪರ ಮದ್ದೂರು ಕ್ಷೇತ್ರದಲ್ಲಿ ನಿರಂತರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ತಮ್ಮಣ್ಣ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಕಾರಣ ವೈದ್ಯರ ಸಲಹೆ ಮೇರೆಗೆ ಅವರನ್ನು ಕಳೆದ ಎರಡು ದಿನಗಳ ಹಿಂದೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಮದ್ದೂರು ಪುರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಮಹೇಶ್ ಸೇರಿದಂತೆ ಜೆಡಿಎಸ್ ಪಕ್ಷದ ಅನೇಕ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಯೋಗ ಕ್ಷೇಮ ವಿಚಾರಿಸಿದರು. ಅಲ್ಲದೇ, ಸೋಮವಾರ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮುಖಂಡರು ಶುಭಾಶಯ ಕೋರಿದರು. ಶೀಘ್ರವಾಗಿ ಚೇತರಿಸಿಕೊಂಡು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವಂತೆ ಮುಖಂಡರು ಮನವಿ ಮಾಡಿದರು.

Share this article