ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮಾಜಿ ಶಾಸಕರ ಬೆಂಬಲ

KannadaprabhaNewsNetwork |  
Published : Feb 18, 2025, 12:32 AM IST
೧೭ಕೆಎಂಎನ್‌ಡಿ-೮ನಾಗಮಂಗಲ ಪಟ್ಟಣದ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ೨ನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಭೇಟಿ ಕೊಟ್ಟ ಮಾಜಿ ಶಾಸಕ ಸುರೇಶ್‌ಗೌಡ ಮನವಿ ಸ್ವೀಕರಿಸಿದರು. | Kannada Prabha

ಸಾರಾಂಶ

ಕಳೆದೊಂದು ವಾರದಿಂದ ರಾಜ್ಯಾದ್ಯಂತ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರದಿಂದಾಗಿ ರೈತರೂ ಸೇರಿ ಗ್ರಾಮೀಣ ಪ್ರದೇಶದ ಜನಸಾಮಾನ್ಯರಿಗೆ ಕಂದಾಯ ಇಲಾಖೆಯಲ್ಲಿ ಆಗಬೇಕಿರುವ ಕೆಲಸ ಕಾರ್ಯಗಳಿಗೆ ಬಹಳಷ್ಟು ತೊಂದರೆಯಾಗುತ್ತಿದೆ. ಹಾಗಾಗಿ ಸರ್ಕಾರ ಈ ಕೂಡಲೇ ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕಿದೆ ಎಂದು ಹೇಳಿದರು.ಪರಿಸ್ಥಿತಿ ಹೀಗೆ ಮುಂದುವರಿದರೆ ಕೇಂದ್ರ ಸಚಿವರು ಹಾಗೂ ಜಿಲ್ಲೆಯ ಸಂಸದರೂ ಆಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರದ ರಂಗ ಪ್ರವೇಶ ಮಾಡಲಿದ್ದಾರೆ.

ಕನ್ನಡಪ್ರಭ ವಾರ್ತೆ ನಾಗಮಂಗಲ

ಮೂಲಭೂತ ಹಾಗೂ ಸೇವಾ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನನ್ನ ಹಾಗೂ ನಮ್ಮ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಶಾಸಕ ಸುರೇಶ್‌ಗೌಡ ತಿಳಿಸಿದರು.

ಪಟ್ಟಣದ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಕಳೆದ ಎಂಟು ದಿನಗಳಿಂದ ತಾಲೂಕು ಘಟಕದ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ನಡೆಸುತ್ತಿರುವ ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಆಗಮಿಸಿ ಮುಷ್ಕರ ನಿರತ ಗ್ರಾಮ ಆಡಳಿತಾಧಿಕಾರಿಗಳಿಂದ ಮನವಿ ಸ್ವೀಕರಿಸಿದ ನಂತರ ಮಾತನಾಡಿದರು.

ಆಡಳಿತ ವ್ಯವಸ್ಥೆಯ ತಳಮಟ್ಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇವರ ಬೇಡಿಕೆಗಳು ಅತ್ಯಗತ್ಯವಾದವು. ಆದಾಗ್ಯೂ ಈಗಾಗಲೇ ಕಳೆದ ಸೆ.೨೬ ರಂದು ಸಾಂಕೇತಿಕ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದರೂ ಕೂಡ ರಾಜ್ಯ ಸರ್ಕಾರ ಗ್ರಾಮ ಆಡಳಿತಾಧಿಕಾರಿಗಳ ಮನವಿಯನ್ನು ಗಣನೆಗೆ ತೆಗೆದುಕೊಳ್ಳದಿರುವುದು ನಿಜಕ್ಕೂ ವಿಷಾದನೀಯ ಎಂದರು.

ಕಳೆದೊಂದು ವಾರದಿಂದ ರಾಜ್ಯಾದ್ಯಂತ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರದಿಂದಾಗಿ ರೈತರೂ ಸೇರಿ ಗ್ರಾಮೀಣ ಪ್ರದೇಶದ ಜನಸಾಮಾನ್ಯರಿಗೆ ಕಂದಾಯ ಇಲಾಖೆಯಲ್ಲಿ ಆಗಬೇಕಿರುವ ಕೆಲಸ ಕಾರ್ಯಗಳಿಗೆ ಬಹಳಷ್ಟು ತೊಂದರೆಯಾಗುತ್ತಿದೆ. ಹಾಗಾಗಿ ಸರ್ಕಾರ ಈ ಕೂಡಲೇ ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕಿದೆ ಎಂದು ಹೇಳಿದರು.

ಪರಿಸ್ಥಿತಿ ಹೀಗೆ ಮುಂದುವರಿದರೆ ಕೇಂದ್ರ ಸಚಿವರು ಹಾಗೂ ಜಿಲ್ಲೆಯ ಸಂಸದರೂ ಆಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರದ ರಂಗ ಪ್ರವೇಶ ಮಾಡಲಿದ್ದಾರೆ. ಈ ವಿಷಯವನ್ನು ನಮ್ಮ ಪಕ್ಷದ ಗಮನಕ್ಕೂ ತಂದು ರಾಜ್ಯಾದ್ಯಂತ ಬೆಂಬಲ ನೀಡುವ ಮೂಲಕ ಕಂದಾಯ ಇಲಾಖೆಯ ಬೆನ್ನೆಲುಬಾಗಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳ ಹಿತ ರಕ್ಷಣೆಗೆ ನಿಲ್ಲುವುದಾಗಿ ತಿಳಿಸಿದರು. ಈ ಕುರಿತು ಕಂದಾಯ ಇಲಾಖೆಯ ನೌಕರರ ಸಂಘದ ಜಿಲ್ಲಾಧ್ಯಕ್ಷ ತಮ್ಮಣ್ಣಗೌಡ ಅವರೊಂದಿಗೆ ಮಾತನಾಡಿದರು.

ಪುರಸಭಾ ಸದಸ್ಯ ಚನ್ನಪ್ಪ, ಮುಖಂಡರಾದ ಗಂಗವಾಡಿ ಪುಟ್ಟಸ್ವಾಮಿ, ಸಾಮಕಹಳ್ಳಿ ಅಶೋಕ್ ಸೇರಿ ಹಲವರು ಇದ್ದರು.

PREV

Recommended Stories

ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?