ಪಂಚಮಸಾಲಿ 2ಎ ಮೀಸಲಾತಿಗೆ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ : ಬಿ. ವೈ. ವಿಜಯೇಂದ್ರ

KannadaprabhaNewsNetwork |  
Published : Dec 10, 2024, 01:31 AM ISTUpdated : Dec 10, 2024, 12:18 PM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕೂಡಲಸಂಗಮ ಪೀಠದ ಶ್ರೀಗಳನ್ನು ಭೇಟಿಯಾಗಿ ಚರ್ಚಿಸಿದರು | Kannada Prabha

ಸಾರಾಂಶ

2ಎ ಮೀಸಲಾತಿಗೆ ಆಗ್ರಹಿಸಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಲಿಂಗಾಯತ ಪಂಚಮಸಾಲಿ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

 ಬೆಳಗಾವಿ : 2ಎ ಮೀಸಲಾತಿಗೆ ಆಗ್ರಹಿಸಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಲಿಂಗಾಯತ ಪಂಚಮಸಾಲಿ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ನಗರದಲ್ಲಿ ಸೋಮವಾರ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರನ್ನು ಭೇಟಿಯಾಗಿ ಚರ್ಚಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಕೂಡಲಸಂಗಮ ಶ್ರೀಗಳಿಗೆ ತಿಳಿಸಿದ್ದೇವೆ. 

ಕೆಲವು ವೈಯಕ್ತಿಕ ಕಾರಣಕ್ಕೆ ಪಂಚಮಸಾಲಿ ಹೋರಾಟಕ್ಕೆ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೆಂಬಲ ಇಲ್ಲ ಎಂದು ಬಿಂಬಿಸುವ ಪ್ರಯತ್ನ ನಿರಂತರವಾಗಿ ಮಾಡಿಕೊಂಡು ಬಂದಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಪಂಚಮಸಾಲಿ ಸಮಾಜಕ್ಕೆ 3ಬಿ ಮೀಸಲಾತಿ ಕೊಡಲಾಗಿತ್ತು. 3ಬಿ ಕೊಟ್ಟ ಕಾರಣದಿಂದಲೇ ಸಮಾಜಕ್ಕೆ 2 ಎ ಸ್ಥಾನಮಾನ ನೀಡಬೇಕೆಂದು ಹಕ್ಕೊತ್ತಾಯ ಮಂಡಿಸಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಪಂಚಮಸಾಲಿ ಹೋರಾಟಕ್ಕೆ ಯಡಿಯೂರಪ್ಪ ವಿರೋಧವಿದೆ ಎಂಬುದು ಸತ್ಯಕ್ಕೆ ದೂರವಾಗಿದೆ ಎಂದ ಅವರು, ಯಾವುದೇ ತಪ್ಪು ಅಭಿಪ್ರಾಯಕ್ಕೆ ಅವಕಾಶ ಕೊಡಬಾರದು ಎಂದು ಶ್ರೀಗಳಲ್ಲಿ ಮನವಿ ಮಾಡಿದ್ದೇನೆ ಎಂದರು.ಶ್ರೀಗಳು ನಮ್ಮ ಜತೆಗೆ ಮನಸು ಬಿಚ್ಚಿ ಮಾತನಾಡಿದ್ದಾರೆ. ಸಾಕಷ್ಟು ತಪ್ಪು ಅಭಿಪ್ರಾಯಗಳಿತ್ತು. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ. ಹಿಂದೆ ಯಾವುದೇ ಸರ್ಕಾರ, ಯಡಿಯೂರಪ್ಪನವರು ಮುಖ್ಯಮಂತ್ರಿಗಳಿದ್ದಾಗ ಸಹ ನಮ್ಮ ಸಮಾಜದ ಮೇಲೆ ಈ ರೀತಿ ದೌರ್ಜನ್ಯಗಳು ಆಗಿಲ್ಲ ಎಂದು ತಿಳಿಸಿದ್ದಾಗಿ ಹೇಳಿದರು.ಕಾಂಗ್ರೆಸ್ ಸರ್ಕಾರ ಬಂದ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. 

ಹೋರಾಟ ಹತ್ತಿಕ್ಕುವ ಕೆಲಸ ಆಗುತ್ತಿದೆ. ಖಂಡಿತ ನೀವೆಲ್ಲರೂ ಸಹಕಾರ ನೀಡಬೇಕೆಂದು ಹೇಳಿದ್ದಾರೆ. ನಾವು ಕೂಡ ಸಂಪೂರ್ಣ ಸಹಕಾರ, ಬೆಂಬಲ ನೀಡುವುದಾಗಿ ತಿಳಿಸಿದ್ದೇನೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಸಿ.ಪಾಟೀಲ, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಶೈಲೇಂದ್ರ ಬೆಲ್ದಾಳೆ, ಶರಣು ಸಲಗರ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಸುಭಾಷ್ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇನ್ಫೋಸಿಸ್ ಮಾರಿದ್ದ ಜಮೀನು ನೋಂದಣಿ ಮಾಡಿಕೊಟ್ಟ ಸಬ್ ರಿಜಿಸ್ಟ್ರಾರ್ ಅಮಾನತು
ಬಳ್ಳಾರಿ ಗನ್‌ಮ್ಯಾನ್‌ ಸೇರಿ ಕೈ, ಬಿಜೆಪಿಯ 26 ಜನ ಸೆರೆ