ದೊಡ್ಡಬಳ್ಳಾಪುರ: ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಅ.1ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು ರೈತರು ಹತ್ತಿರದ ನೋಂದಣಿ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ಇಲಾಖೆಯ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ 2025-26ನೇ ಸಾಲಿಗೆ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಪ್ರತಿ ಕ್ವಿಂಟಲ್ ರಾಗಿಗೆ ₹4886 ಬೆಲೆ ನಿಗದಿ ಪಡಿಸಿದೆ. ಅ.1ರಿಂದ ಡಿಸೆಂಬರ್ 15ರವರೆಗೆ ನೋಂದಣಿ ಪ್ರಕ್ರಿಯೆ ನಡೆಯಲಿದೆ. 2026 ಜನವರಿ 1ರಿಂದ ಮಾರ್ಚ್ 31ರವರೆಗೆ ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದರು.ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು
ಏಜೆನ್ಸಿ ಆಗಿ ನೇಮಿಸಲಾಗಿದೆ. ನಿಗಮದ ಉಪ ಏಜೆನ್ಸಿಗಳು ಸಹಯೋಗದಲ್ಲಿ ನೋಂದಣಿ ಪ್ರಕ್ರಿಯೆ ಬಯೋಮೆಟ್ರಿಕ್ಆಧಾರದಲ್ಲಿ ನಡೆಯುವುದರಿಂದ ಅವಶ್ಯಕತೆ ಇರುವ ಟೇಬಲ್, ಚೇರ್, ಕಂಪ್ಯೂಟರ್, ಸಿಬ್ಬಂದಿ, ವಿದ್ಯುತ್ ಸಂಪರ್ಕ,
ಇಂಟರ್ನೆಟ್, ತೂಕದ ಯಂತ್ರ ವ್ಯವಸ್ಥೆ ಮಾಡಿ ಜೊತೆಗೆ ರೈತರಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯಮೂಲ ಸೌಕರ್ಯ ಒದಗಿಸಿ ಸ್ಥಳದಲ್ಲಿ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ರೈತರು ಬೆಳೆದಿರುವ ಆಹಾರ ಧಾನ್ಯಗಳಿಗೆ ಸಂಬಂಧಿಸಿದಂತೆ ಕೃಷಿ ಇಲಾಖೆಯ ಫ್ರೂಟ್ಸ್ ದತ್ತಾಂಶದಿಂದಮಾಹಿತಿಯನ್ನು ಪಡೆಯಲಾಗುತ್ತದೆ ಹಾಗಾಗಿ ನೋಂದಣಿಗೆ ಫ್ರೂಟ್ಸ್ ಐಡಿ ಕಡ್ಡಾಯವಾಗಿದ್ದು ಐಡಿ ಇಲ್ಲದ ರೈತರು ಕೃಷಿ
ಇಲಾಖೆಯ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪ್ರೂಟ್ಸ್ ಐಡಿ ಪಡೆದು ನೋಂದಣಿ ಮಾಡಿಕೊಳ್ಳಿ ಎಂದರು.ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ
ಮಂಜುಳಾ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕಲಾವತಿ, ಸಹಕಾರ ಸಂಘಗಳ ಉಪ ನಿಬಂಧಕರಾದ ಚಂದ್ರಶೇಖರ್,ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ತನ್ವೀರ್, ಕೃಷಿ ಉತ್ಪನ್ನ ಮಾರುಕಟ್ಟೆ
ಸಮಿತಿಯ ಕಾರ್ಯದರ್ಶಿ ಅಬಿದಾ ಅಜುಂ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರಾದ ಗೋಪಾಲಕೃಷ್ಣ, ಜಿಲ್ಲಾ ಉಗ್ರಾಣ ಕೇಂದ್ರಗಳ ವ್ಯವಸ್ಥಾಪಕರು, ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬಾಕ್ಸ್............ರಾಗಿ ನೋಂದಣಿ ಕೇಂದ್ರಗಳು ತೆರೆಯುವ ಸ್ಥಳ
ನೆಲಮಂಗಲ: 1. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ಕೆಂಪಲಿಂಗನಹಳ್ಳಿ ಕ್ರಾಸ್, ಕುಣಿಗಲ್ ರಸ್ತೆ, ನೆಲಮಂಗಲ ತಾಲೂಕು.2. ವ್ಯವಸಾಯ ಸೇವಾ ಸಹಕಾರ ಸಂಘ, ಕಲಾಲು ಘಟ್ಟ, ತ್ಯಾಮಗೊಂಡ್ಲು ಹೋಬಳಿ.
3. ವ್ಯವಸಾಯ ಸೇವಾ ಸಹಕಾರ ಸಂಘ, ದಾಬಾಸ್ ಪೇಟೆ, ಸೋಂಪುರ ಹೋಬಳಿ.ದೊಡ್ಡಬಳ್ಳಾಪುರ: 1. ರೈತ ಭವನ ಕೇಂದ್ರ, ಎಂಪಿಎಂಸಿ ಯಾರ್ಡ್, ದೊಡ್ಡಬಳ್ಳಾಪುರ.
2. ರೈತ ಸಂಪರ್ಕ ಕೇಂದ್ರ, ಸಾಸಲು ಹೋಬಳಿ.ದೇವನಹಳ್ಳಿ: 1. ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ಕುರುಬರ ದೊಡ್ಡಿ ರಸ್ತೆ, ಚಿಕ್ಕಬಳ್ಳಾಪುರ ರಸ್ತೆ, ದೇವನಹಳ್ಳಿ.
ಹೊಸಕೋಟೆ: 1. ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ವೀರಭದ್ರೇಶ್ವರ ರೈಸ್ ಮಿಲ್ ಕಾಂಪೌಂಡ್, ಮಾಲೂರು ರಸ್ತೆ, ಹೊಸಕೋಟೆ.3ಕೆಡಿಬಿಪಿ1-
ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಆಹಾರ ಇಲಾಖೆಯ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಯಿತು.