ಭತ್ತ ಖರೀದಿಗೆ ಬೆಂಬಲ ಬೆಲೆ ನಿಗದಿ-ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ

KannadaprabhaNewsNetwork |  
Published : Mar 25, 2025, 12:45 AM IST
24ಜಿಡಿಜಿ13 | Kannada Prabha

ಸಾರಾಂಶ

2024-2025ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ. ಗುಣಮಟ್ಟದ ಭತ್ತ ಉತ್ಪನ್ನ ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.

ಗದಗ: 2024-2025ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ. ಗುಣಮಟ್ಟದ ಭತ್ತ ಉತ್ಪನ್ನ ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ 2024-25ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಉತ್ಪನ್ನ ಖರೀದಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದ ಮಾನದಂಡಗಳನ್ವಯ ಎಫ್.ಎ.ಕ್ಯೂ. ಗುಣಮಟ್ಟ ದೃಢೀಕರಿಸಲು ಕ್ರಮ ವಹಿಸಬೇಕು. ಖರೀದಿ ಏಜೆನ್ಸಿಯವರು ತಮ್ಮ ಸಂಸ್ಥೆಯ ಹಿರಿಯ ಅಧಿಕಾರಿಗಳು ಮೇಲುಸ್ತುವಾರಿ ತಪಾಸಣೆ ಕೈಗೊಳ್ಳಬೇಕು ಎಂದು ಸೂಚಿಸಿದರು.

ಪ್ರತಿ ಖರೀದಿ ಕೇಂದ್ರಕ್ಕೆ ಗ್ರೇಡರ್‌ಗಳನ್ನು ನೇಮಿಸಬೇಕು. ಎಫ್.ಎ.ಕ್ಯೂ. ಗುಣಮಟ್ಟದಲ್ಲಿ ಖರೀದಿಸಲು ಹಾಗೂ ಬತ್ತ ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಬತ್ತ ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಹೇಳಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ್ ಹೆಗ್ಗಳಗಿ ಮಾತನಾಡಿ, ಎಫ್.ಎ.ಕ್ಯೂ. ಗುಣಮಟ್ಟದ ಭತ್ತ ಹುಟ್ಟುವಳಿಗೆ ಪ್ರತಿ ಕ್ವಿಂಟಲ್‌ಗೆ ಸಾಮಾನ್ಯ ಭತ್ತ ಪ್ರತಿ ಕ್ವಿಂಟಲ್‌ಗೆ ₹2300, ಗ್ರೇಡ್‌ ಎ ಭತ್ತ ₹2320ರಂತೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶದ ಅನುಸಾರ ಗದಗ ಜಿಲ್ಲೆಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ಮಾರ್ಕಫೆಡ್) ಸಂಸ್ಥೆಯನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಲಾಗಿದೆ. ಭತ್ತ ಉತ್ಪನ್ನ ಖರೀದಿ ನೋಂದಣಿ ದಿನಾಂಕವನ್ನು ಮಾ. 20ರಿಂದ ಏ. 25ರ ವರೆಗೆ ನಿಗದಿಪಡಿಸಲಾಗಿದೆ. ಖರೀದಿ ಏಜೆನ್ಸಿಯವರು ನೋಂದಣಿ ಕೇಂದ್ರ ತೆರೆದು ನೋಂದಣಿ ಕಾರ್ಯ ಕೈಗೊಳ್ಳಬೇಕು ಹಾಗೂ ಏ. 1ರಿಂದ ಮೇ 31ರ ವರೆಗೆ ಖರೀದಿ ಪ್ರಕ್ರಿಯೆ ಕೈಗೊಳ್ಳಲು ಸೂಚಿಸಲಾಗಿದೆ. ಪ್ರತಿ ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಲ್‌ನಂತೆ ಗರಿಷ್ಠ 50 ಕ್ವಿಂಟಲ್ ಖರೀದಿಸಲು ಸೂಚಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಮುಂಡರಗಿ ತಾಲೂಕಿನಲ್ಲಿನ ಶಾಖಾ ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳ, ಮುಂಡರಗಿ ಎಪಿಎಂಸಿ ಮಾರುಕಟ್ಟೆ ಪ್ರಾಂಗಣ ಇಲ್ಲಿ ಖರೀದಿ ಕೇಂದ್ರ ತೆರೆಯಲು ತೀರ್ಮಾನಿಸಲಾಗಿದೆ ಎಂದರು.

ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಮಾರಾಟ ಇಲಾಖೆ, ಕೆಎಫ್‌ಸಿಎಸ್‌ಸಿ, ಗದಗ ಮಾರ್ಕೆಟಿಂಗ್ ಫೆಡರೇಶನ್, ನರಗುಂದ ಹಾಗೂ ಗದಗ, ಕಾನೂನು ಮಾಪನ ಇಲಾಖೆ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!