ಬಿಳಿಜೋಳ ಕೃಷಿ ಹುಟ್ಟುವಳಿ ಖರೀದಿಗೆ ಬೆಂಬಲ ಬೆಲೆ ನಿಗದಿ-ಜಿಲ್ಲಾಧಿಕಾರಿ ಶ್ರೀಧರ

KannadaprabhaNewsNetwork |  
Published : Mar 26, 2025, 01:31 AM IST
25ಜಿಡಿಜಿ16 | Kannada Prabha

ಸಾರಾಂಶ

2024-2025ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಬಿಳಿಜೋಳ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಹೇಳಿದರು.

ಗದಗ: 2024-2025ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಬಿಳಿಜೋಳ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಹೇಳಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ 2024-25ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಬಿಳಿಜೋಳ ಉತ್ಪನ್ನವನ್ನು ಖರೀದಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ ಮಾನದಂಡಗಳನ್ವಯ ಎಫ್.ಎ.ಕ್ಯೂ ಗುಣಮಟ್ಟವನ್ನು ದೃಢೀಕರಿಸಲು ಕ್ರಮ ವಹಿಸಬೇಕು.

ಖರೀದಿ ಏಜೆನ್ಸಿಯವರು ತಮ್ಮ ಸಂಸ್ಥೆಯ ಹಿರಿಯ ಅಧಿಕಾರಿಗಳು ಮೇಲುಸ್ತುವಾರಿ ತಪಾಸಣೆ ಕೈಗೊಳ್ಳಬೇಕು. ಪ್ರತಿ ಖರೀದಿ ಕೇಂದ್ರಕ್ಕೆ ಗ್ರೇಡರ್‌ಗಳನ್ನು ನೇಮಿಸಬೇಕು. ಎಫ್.ಎ.ಕ್ಯೂ ಗುಣಮಟ್ಟದ ಬಿಳಿಜೋಳ ಖರೀದಿಸಲು ಹಾಗೂ ಬಿಳಿ ಜೋಳ ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಬತ್ತ ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ್ ಹೆಗ್ಗಳಗಿ ಮಾತನಾಡಿ ಎಫ್.ಎ.ಕ್ಯೂ ಗುಣಮಟ್ಟದ ಬಿಳಿ ಜೋಳ ಹುಟ್ಟುವಳಿಗೆ ಜೋಳ- ಹೈಬ್ರೀಡ್ ಪ್ರತಿ ಕ್ವಿಂಟಲ್ ಗೆ 3371 ರುಪಾಯಿ, ಜೋಳ ಮಾಲ್ದಂಡಿ ಪ್ರತಿ ಕ್ವಿಂಟಲ್ ಗೆ 3421 ರುಪಾಯಿ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶ ದಿನಾಂಕ 20-03-2025 ರನುಸಾರ ಗದಗ ಜಿಲ್ಲೆಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ಮಾರ್ಕಫೆಡ್) ಸಂಸ್ಥೆಯನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಿದೆ ಎಂದರು.ಜೋಳ ಖರೀದಿಗೆ ನೋಂದಣಿ ಪ್ರಕ್ರಿಯೆ:

ಬೆಂಬಲ ಬೆಲೆ ಖರೀದಿ ಮಾರ್ಗಸೂಚಿಗಳನ್ವಯ ಜೋಳ ಉತ್ಪನ್ನ ಖರೀದಿ ನೋಂದಣಿ ಮಾರ್ಚ 25ರಿಂದ ಕೈಗೊಳ್ಳಲು ಹಾಗೂ ಏಪ್ರಿಲ್ 1ರಿಂದ ಮೇ 31 ರವರೆಗೆ ಖರೀದಿ ಕಾರ್ಯ ಕೈಗೊಳ್ಳಲು ಸೂಚಿಸಲಾಯಿತು.

ಸರ್ಕಾರದಿಂದ ನೇಮಿಸಲ್ಪಟ್ಟ ಖರೀದಿ ಏಜೆನ್ಸಿ ಬಿಳಿ ಜೋಳ ಖರೀದಿ ಹಂತದಲ್ಲಿ ಕೇಂದ್ರ ಸರ್ಕಾರವು ನಿಗದಿಪಡಿಸಿದ ಮಾನದಂಡಗಳನ್ವಯ ಜೋಳವನ್ನು ಪ್ರತಿ ರೈತರಿಂದ ಪ್ರತಿ ಎಕರೆಗೆ 20 ಕ್ವಿಂಟಲ್‌ನಂತೆ ಗರಿಷ್ಠ 150 ಕ್ವಿಂಟಲ್ ಖರೀದಿಸಲು ಸೂಚಿಸಲಾಯಿತು.

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಖರೀದಿ ಮಾರ್ಗಸೂಚಿಗಳನ್ವಯ ಜಿಲ್ಲೆಯಲ್ಲಿ 4 ಖರೀದಿ ಕೇಂದ್ರ ತೆರೆಯಲಾಗಿದೆ. ಗದಗ ಎಪಿಎಂಸಿ ಮಾರುಕಟ್ಟೆ ಪ್ರಾಂಗಣ, ಲಕ್ಷ್ಮೇಶ್ವರ ಎಪಿಎಂಸಿ ಮಾರುಕಟ್ಟೆ ಪ್ರಾಂಗಣ, ಮುಂಡರಗಿ ಎಪಿಎಂಸಿ ಮಾರುಕಟ್ಟೆ ಪ್ರಾಂಗಣ, ರೋಣ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ