ಸೋಯಾಬಿನ್ ಹುಟ್ಟುವಳಿ ಖರೀದಿಗೆ ಬೆಂಬಲ ಬೆಲೆ ನಿಗದಿ: ಡಿಸಿ ಶ್ರೀಧರ್

KannadaprabhaNewsNetwork |  
Published : Oct 11, 2026, 03:30 AM IST
9ಜಿಡಿಜಿ11 | Kannada Prabha

ಸಾರಾಂಶ

2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಸೋಯಾಬಿನ್ ಹುಟ್ಟುವಳಿ ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ.

ಕನ್ನಡಪ್ರಭ ವಾರ್ತೆ ಗದಗ

2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಸೋಯಾಬಿನ್ ಹುಟ್ಟುವಳಿ ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 2026-27ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೋಯಾಬಿನ್ ಖರೀದಿಸುವ ಕುರಿತು ನಡೆದ ಜಿಲ್ಲಾ ಟಾಸ್ಕ್ ಫೋರ್ಸ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ತೆರೆಯಲಾಗುವ ಸೋಯಾಬಿನ್ ಹುಟ್ಟುವಳಿ ಖರೀದಿ ಕೇಂದ್ರಗಳಲ್ಲಿ ಖರೀದಿಸಲಾಗುವ ಎಫ್.ಎ.ಕ್ಯೂ ಗುಣಮಟ್ಟ ಪರಿಶೀಲನೆಗೆ ಗ್ರೇಡರ್‌ ನೇಮಕ ಮಾಡಬೇಕು ಮತ್ತು ಅವರಿಗೆ ಎಫ್‌ಎಕ್ಯೂ ಗ್ರೇಡಿಂಗ್ ತರಬೇತಿ ನೀಡಬೇಕು. ಜಿಲ್ಲೆಯ ಪ್ರತಿ ರೈತರಿಂದ ಪ್ರತಿ ಎಕರೆಗೆ 5 ಕ್ವಿಂಟಲ್ ಗರಿಷ್ಟ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಟ 25 ಕ್ವಿಂಟಲ್ ಸೋಯಾಬಿನ್ ಖರೀದಿಸಬೇಕು. ಸರ್ಕಾರದ ಬೆಂಬಲ ಬೆಲೆಯಲ್ಲಿ ಸೋಯಾಬಿನ್ ಹುಟ್ಟುವಳಿ ಖರೀದಿಯ ಕುರಿತು ರೈತರಿಗೆ ತಿಳುವಳಿಕೆ ನೀಡಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಹಾಗೂ ಜಿಲ್ಲೆಯ ರೈತರು ಈ ಯೋಜನೆಯ ಲಾಭ ಪಡೆಯಲು ಅನುಕೂಲವಾಗುವಂತೆ ಕ್ರಮ ವಹಿಸಬೇಕೆಂದು ಸೂಚಿಸಿದರು.

ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕಿ ಸುಧಾ ಆರ್.ಬಂಡಿ ಮಾತನಾಡಿ, ಎಫ್.ಎ.ಕ್ಯೂ ಗುಣಮಟ್ಟದ ಸೋಯಾಬಿನ್ ಹುಟ್ಟುವಳಿಗೆ ಪ್ರತಿ ಕ್ವಿಂಟಲ್‌ಗೆ ₹5,708ಗಳಂತೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಸರ್ಕಾರದ ಆದೇಶದನುಸಾರ ನ್ಯಾಪೆಡ್ ಸಂಸ್ಥೆ ಹಾಗೂ ಎನ್.ಸಿ.ಸಿ.ಎಫ್ ಸಂಸ್ಥೆಯನ್ನು ಕೇಂದ್ರದ ಖರೀದಿ ಏಜೆನ್ಸಿಯಾಗಿ ಹಾಗೂ ಕರ್ನಾಟಕ ಸಹಕಾರ ಎಣ್ಣಿ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತ (ಕೆಓಎಫ್) ಬೆಂಗಳೂರು ಇವರನ್ನು ರಾಜ್ಯ ಮಟ್ಟದ ಖರೀದಿ ಏಜನ್ಸಿಯನ್ನಾಗಿ ನೇಮಿಸಿದ್ದು ಸರ್ಕಾರದ ಆದೇಶದ ದಿನಾಂಕದಿಂದ ರೈತರ ನೋಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಿದ್ದು, ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಸಹ ಪ್ರಾರಂಭಿಸಲು ಆದೇಶಿಸಿದೆ ಎಂದರು.

ಜಿಲ್ಲೆಯ 9 ಕಡೆಗಳಲ್ಲಿ ಖರೀದಿ ಕೇಂದ್ರ ತೆರೆಯಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ತೋಟಗಾರಿಕೆ ಇಲಾಖೆ, ಸಹಕಾರಿ ಸಂಘಗಳ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿಯಲ್ಲೂ ದೋಸ್ತಿ ಮುಂದುವರಿಯಲಿ!
ಸಂಕಷ್ಟಕ್ಕೆ ಅಂಜದೇ ಆತ್ಮವಿಶ್ವಾಸದಿಂದ ಬದುಕು ಸಾಗಿಸಿ: ಮುರುಳೀಧರ ಹೆಗಡೆ