ಬೆಂಬಲ ಬೆಲೆ ಯೋಜನೆ: ಕಡಲೆಕಾಳು ಖರೀದಿ ಕೇಂದ್ರ ಪ್ರಾರಂಭ

KannadaprabhaNewsNetwork |  
Published : Feb 08, 2025, 12:33 AM IST

ಸಾರಾಂಶ

ಕೊಪ್ಪಳ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಕಡಲೆಕಾಳು ಉತ್ಪನ್ನ ಖರೀದಿಸುವ ಸಂಬಂಧ ಬೆಂಬಲ ಬೆಲೆ ಯೋಜನೆಯಡಿ ಕಡಲೇಕಾಳು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಹಾಗೂ ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಕೊಪ್ಪಳ: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಕಡಲೆಕಾಳು ಉತ್ಪನ್ನ ಖರೀದಿಸುವ ಸಂಬಂಧ ಬೆಂಬಲ ಬೆಲೆ ಯೋಜನೆಯಡಿ ಕಡಲೇಕಾಳು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಹಾಗೂ ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಸರ್ಕಾರದ ಆದೇಶದಂತೆ 2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳು ಪ್ರತಿ ಕ್ವಿಂಟಲ್‌ಗೆ ₹5650ಗಳಂತೆ ಎಕರೆಗೆ 4 ಕ್ವಿಂಟಲ್‌ನಂತೆ ಒಬ್ಬ ರೈತರಿಂದ ಗರಿಷ್ಠ 20 ಕ್ವಿಂಟಲ್‌ ಖರೀದಿಸಲಾಗುತ್ತದೆ.

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಕೊಪ್ಪಳ ಜಿಲ್ಲೆಯ ರೈತರಿಂದ ಖರೀದಿಸುವ ಕುರಿತು ಇತ್ತೀಚೆಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಸಭೆ ನಡೆದಿದೆ. ಕೊಪ್ಪಳ ತಾಲೂಕಿನ ಮುದ್ದಾಬಳ್ಳಿ, ಹಿರೇಸಿಂಧೋಗಿ, ಕವಲೂರು, ಅಳವಂಡಿ ಹಾಗೂ ಘಟ್ಟಿರೆಡ್ಡಿಹಾಳ, ಕನಕಗಿರಿ ತಾಲೂಕಿನ ನವಲಿ ಹಾಗೂ ಕನಕಗಿರಿ, ಕುಷ್ಟಗಿ ತಾಲೂಕಿನ ಹನುಮಸಾಗರ, ತಾವರಗೇರಾ (ಮೆಣೇದಾಳ) ಹಾಗೂ ಕುಷ್ಟಗಿ, ಕುಕನೂರು ತಾಲೂಕಿನ ಚಿಕ್ಕಿನಕೊಪ್ಪ, ಬನ್ನಿಕೊಪ್ಪ, ತಳಕಲ್, ಮುಡಲಗೇರಿ ಹಾಗೂ ಕುಕನೂರಿನಲ್ಲಿ ಮತ್ತು ಯಲಬುರ್ಗಾ ತಾಲೂಕಿನ ಯಲಬುರ್ಗಾ, ಮುಧೋಳ ಹಾಗೂ ತೊಂಡಿಹಾಳದಲ್ಲಿ ಕಡಲೇಕಾಳು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ.

ನೋಡಲ್ ಅಧಿಕಾರಿಗಳ ವಿವರ: ಕಡಲೇಕಾಳು ಖರೀದಿ ಕೇಂದ್ರಗಳಾದ ಮುದ್ದಾಬಳ್ಳಿ, ಹಿರೇಸಿಂಧೋಗಿ, ಕವಲೂರು, ಅಳವಂಡಿ ಹಾಗೂ ಘಟ್ಟಿರೆಡ್ಡಿಹಾಳ ಖರೀದಿ ಕೇಂದ್ರಗಳಿಗೆ ಕೊಪ್ಪಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ವಿ. ಬಸವರಾಜ ಮೊ.ಸಂ.: 9448765143 ಅವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿದೆ.

ನವಲಿ ಹಾಗೂ ಕನಕಗಿರಿ ಖರೀದಿ ಕೇಂದ್ರಕ್ಕೆ ಗಂಗಾವತಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಹರೀಶ ಪತ್ತಾರ ಮೊ.ಸಂ.: 9060893320. ಕುಷ್ಟಗಿ ಹನುಮಸಾಗರ, ತಾವರಗೇರಾ (ಮೆಣೇದಾಳ) ಖರೀದಿ ಕೇಂದ್ರಕ್ಕೆ ಕುಷ್ಟಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಸುರೇಶ ಬಿ. ತಂಗನೂರು ಮೊ.ಸಂ.: 9880886909. ಚಿಕ್ಕಿನಕೊಪ್ಪ, ಬನ್ನಿಕೊಪ್ಪ, ತಳಕಲ್, ಮುಡಲಗೇರಿ, ಕುಕನೂರು ಹಾಗೂ ಯಲಬುರ್ಗಾ, ಮುಧೋಳ ಮತ್ತು ತೊಂಡಿಹಾಳದಲ್ಲಿ (ಕೇಂದ್ರ ಕಚೇರಿ, ಕುಕನೂರು) ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಗುರುಪ್ರಸಾದ ಗುಡಿ ಮೊ.ಸಂ.: 9972054874 ಅವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.

ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್ ಕಡಲೆಕಾಳು ಉತ್ಪನ್ನ ಖರೀದಿಸಲಾಗುತ್ತದೆ. ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳನ್ನು ಮಾತ್ರ ಖರೀದಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಕೊಪ್ಪಳ ದೂ.ಸಂ.: 08539-230040, ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌